ಕೊರೋನಾ ಸೋಂಕಿನಿಂದ ವೃದ್ಧ ಸಾವು: ಬೆಂಗಳೂರಿನಲ್ಲಿ 80 ಮಂದಿಗೆ ಕ್ವಾರಂಟೈನ್
ನಗರದಲ್ಲಿ 65 ವರ್ಷದ ವ್ಯಕ್ತಿ ಕೊರೋನಾ ಸೋಂಕಿನಿಂದ ಸಾವನ್ನಪ್ಪಿರುವ ಹಿನ್ನೆಲೆಯಲ್ಲಿ ಆತನ ಜೊತೆ ಸಂಪರ್ಕವಿದ್ದ 80 ಮಂದಿಯನ್ನು ಕ್ವಾರಂಟೈನ್ ಮಾಡಲಾಗಿದೆ. ಏಪ್ರಿಲ್ 12 ರಂದು ರಾಜೀವ್ ಗಾಂಧಿ ಆಸ್ಪತ್ರೆಗೆ ದಾಖಲಾಗಿದ್ದ ವೃದ್ಧ ಅದೇ ದಿನ ಸಂಜೆ ಸಾವನ್ನಪ್ಪಿದ್ದ.
ಬೆಂಗಳೂರು: ನಗರದಲ್ಲಿ 65 ವರ್ಷದ ವ್ಯಕ್ತಿ ಕೊರೋನಾ ಸೋಂಕಿನಿಂದ ಸಾವನ್ನಪ್ಪಿರುವ ಹಿನ್ನೆಲೆಯಲ್ಲಿ ಆತನ ಜೊತೆ ಸಂಪರ್ಕವಿದ್ದ 80 ಮಂದಿಯನ್ನು ಕ್ವಾರಂಟೈನ್ ಮಾಡಲಾಗಿದೆ.
ಏಪ್ರಿಲ್ 12 ರಂದು ರಾಜೀವ್ ಗಾಂಧಿ ಆಸ್ಪತ್ರೆಗೆ ದಾಖಲಾಗಿದ್ದ ವೃದ್ಧ ಅದೇ ದಿನ ಸಂಜೆ ಸಾವನ್ನಪ್ಪಿದ್ದ. ರೋಗಿಯ ಗಂಟಲಿನ ದ್ರವ ಮಾದರಿಯನ್ನು ಭಾನುವಾರ ಪರೀಕ್ಷೆಗೆ ಕಳುಹಿಸಲಾಗಿತ್ತು. ಸೋಮವಾರ ವರದಿ ಬಂದಿತ್ತು ಕೊರೋನಾ ಪಾಸಿಟಿವ್ ಪತ್ತೆಯಾಗಿದೆ.
ಮೃತ ವೃದ್ಧನ ಕುಟುಂಬಸ್ಥರು ಸೇರಿದಂತೆ ಟಿಪು ನಗರದಲ್ಲಿ ಆತನ ಅಂತ್ಯ ಸಂಸ್ಕಾರದಲ್ಲಿ ಪಾಲ್ಗೊಂಡಿದ್ದ 80 ಮಂದಿಯನ್ನು ಸಿವಿ ರಾಮನ್ ಜನರಲ್ ಆಸ್ಪತ್ರೆಯಲ್ಲಿ ಕ್ವಾರಂಟೈನ್ ನಲ್ಲಿಡಲಾಗಿದೆ ಎಂದು ಕೆ ಆರ್ ಮಾರ್ಕೆಟ್ ಕಾರ್ಪೋರೇಟರ್ ನಜಿಮಾ ಖಾನ್ ಹೇಳಿದ್ದಾರೆ.
Disclaimer : ಕಾಮೆಂಟ್ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.