ಸಚಿವ ಸುಧಾಕರ್ 
ರಾಜ್ಯ

ಕೊರೋನಾ ಸೋಂಕಿತರ ಐಸಿಯುಗಳನ್ನು ಸಂಪರ್ಕಿಸುವ ಕೇಂದ್ರೀಕೃತ ಘಟಕಕ್ಕೆ ಸಚಿವ ಸುಧಾಕರ್ ಚಾಲನೆ

ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿತರಿಗೆ ಚಿಕಿತ್ಸೆ ನೀಡುವ ಎಲ್ಲಾ ಆಸ್ಪತ್ರೆಗಳನ್ನು ಸಂಪರ್ಕಿಸುವ ಕ್ರಿಟಿಕಲ್ ಕೇರ್ ಸಪೋರ್ಟ್ ಯುನಿಟ್‌ಗೆ ವೈದ್ಯಕೀಯಶಿಕ್ಷಣ ಸಚಿವ ಡಾ. ಕೆ.ಸುಧಾಕರ್ ನಗರದಲ್ಲಿಂದು ಚಾಲನೆ ನೀಡಿದರು.

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿತರಿಗೆ ಚಿಕಿತ್ಸೆ ನೀಡುವ ಎಲ್ಲಾ ಆಸ್ಪತ್ರೆಗಳನ್ನು ಸಂಪರ್ಕಿಸುವ ಕ್ರಿಟಿಕಲ್ ಕೇರ್ ಸಪೋರ್ಟ್ ಯುನಿಟ್‌ಗೆ ವೈದ್ಯಕೀಯಶಿಕ್ಷಣ ಸಚಿವ ಡಾ. ಕೆ.ಸುಧಾಕರ್ ನಗರದಲ್ಲಿಂದು ಚಾಲನೆ ನೀಡಿದರು.

ಇಡೀ ದೇಶದಲ್ಲೇ ಇದು ವಿನೂತನ ಪ್ರಯತ್ನವಾಗಿದ್ದು, ಕೋವಿಡ್-೧೯ ಸೋಂಕಿತರು ಚಿಕಿತ್ಸೆ ಪಡೆಯುತ್ತಿರುವ ಆಸ್ಪತ್ರೆಗಳ ತೀವ್ರಾ ನಿಗಾ ಘಟಕ- ಐಸಿಯುಗಳನ್ನು ಒಂದೇ ವೇದಿಕೆಯಡಿ ಸಂಪರ್ಕಿಸುವ ವಿನೂತನಾ ಕ್ರಮ ಇದಾಗಿದೆ.

ಈ ಸಂದರ್ಭದಲ್ಲಿ ಮಾತನಾಡಿದ ಆರೋಗ್ಯ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಜಾವೇದ್ ಅಖ್ತರ್ ಕೇಂದ್ರೀಕೃತ ವ್ಯವಸ್ಥೆಯಲ್ಲಿ ಇಡೀ ರಾಜ್ಯದ ಎಲ್ಲಾ ಆಸ್ಪತ್ರೆಗಳ ಕೊರೊನಾ ಚಿಕಿತ್ಸೆಯನ್ನು ಒಂದೇ ಕಡೆ ಕುಳಿತು ನಿಗಾವಹಿಸಲು ಇಂತಹ ಕ್ರಮದಿಂದ ಸಾಧ್ಯವಾಗಲಿದೆ. ತಜ್ಞ ವೈದ್ಯರು ಮತ್ತು ಪ್ರಮುಖ ವೈದ್ಯಕೀಯ ಕಾಲೇಜುಗಳ ತರಬೇತಿ ಪಡೆಯುತ್ತಿರುವ ವೈದ್ಯರು ಈ ಕೇಂದ್ರದಲ್ಲಿ ಕಾರ್ಯನಿರ್ವಹಿಸಲಿದ್ದಾರೆ ಎಂದರು.

ಇದಕ್ಕೂ ಮುನ್ನ ಮಾತನಾಡಿದ ಸಚಿವ ಡಾ|| ಕೆ. ಸುಧಾಕರ್ ರಾಜ್ಯದಲ್ಲಿ ಪ್ರತಿದಿನ ಸರಾಸರಿ 1500 ಕೋವಿಡ್ ಪರೀಕ್ಷೆಗಳನ್ನು ನಡೆಸುತ್ತಿದ್ದು, ದಿನನಿತ್ಯ 10-15 ಪ್ರಕರಣಗಳಲ್ಲಿ ಸೋಂಕು ದೃಢಪಡುತ್ತಿದೆ ಎಂದರು. ಪ್ರತಿಪಕ್ಷ ಮುಖಂಡರು ವಾಸ್ತವದ ಆಧಾರದ ಮೇಲೆ ಮಾತನಾಡಬೇಕು. ಮೈಸೂರಿನಲ್ಲಿ ಮೊದಲ ಪ್ರಕರಣ ಪತ್ತೆ ಆದಾಗಲೇ ಅಲ್ಲಿ ಪಾಸಿಟಿವ್ ಪ್ರಕರಣಗಳು ಹೆಚ್ಚಾಗಲಿವೆ ಎಂಬುದು ತಿಳಿದು ಬಂದಿತ್ತು.

ಈಗ ಮೈಸೂರಿನಲ್ಲಿ ಪತ್ತೆಯಾಗಿರುವ ಕೇಸ್ ಎಲ್ಲವೂ ಹೋಮ್ ಕ್ವಾರಂಟೈನ್ ಆದವರು. ದಿನಕಳೆದಂತೆ ಪ್ರಕರಣಗಳು ಕಡಿಮೆಯಾಗುತ್ತಿದ್ದು ಯಾರೂ ಸಹ ಭಯ ಪಡುವ ಅವಶ್ಯಕತೆಯಿಲ್ಲ. ಕರ್ನಾಟಕದಲ್ಲಿ ನಾವಿನ್ನೂ 300ರ ಆಸುಪಾಸಿನಲ್ಲಿವೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಮೋದಿ, ಶಾ ಭಯಗೊಂಡಿದ್ದು ನಮ್ಮ ಹೋರಾಟದಲ್ಲಿ ಅರ್ಧ ಗೆದ್ದಿದ್ದೇವೆ, CEC ರಾಜೀನಾಮೆ ನೀಡುವವರೆಗೆ ಹಿಂಜರಿಯುವುದಿಲ್ಲ': ಇಂದು CJP ಪ್ರತಿಭಟನೆ ಮುಂದುವರಿಕೆ

Riyadh ವಿಮಾನ ನಿಲ್ದಾಣದ ಮೇಲೆ ಕ್ಷಿಪಣಿ ದಾಳಿ: 12 ಮಂದಿ ಸಾವು, 300ಕ್ಕೂ ಹೆಚ್ಚು ಜನರಿಗೆ ಗಾಯ

Operation Sindoor ನಮ್ಮ ಆತ್ಮರಕ್ಷಣೆಯ ಕ್ರಮ, ಪರಮಾಣು ಬೆದರಿಕೆಗೆ ಎಂದಿಗೂ ಮಣಿಯಲ್ಲ: 3 'ಲಕ್ಷ್ಮಣ ರೇಖೆ' ಎಳೆದು ಪಾಕ್'ಗೆ ಭಾರತ ಖಡಕ್ ಎಚ್ಚರಿಕೆ..!

ದೆಹಲಿಯಲ್ಲಿ ನಾಯಕರ ಬಂಧನ, ಮೆಟ್ರೋ ಸ್ಥಗಿತ ಕುರಿತ ನ್ಯಾಯಾಂಗ ನಿಂದನೆ: ಭಾನುವಾರವೂ 'ಸುಪ್ರೀಂ' ವಿಶೇಷ ಪೀಠದಿಂದ ವಿಚಾರಣೆ!

CJP ಪ್ರತಿಭಟನೆಗೆ ದೇಶವಿರೋಧಿ ಶಕ್ತಿಗಳ ಸಾಥ್‌: ಭಾರತದ ವರ್ಚಸ್ಸಿಗೆ ಮಸಿ ಬಳಿಯುವ ಪ್ರಯತ್ನ..!