ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜ್ಯ

ಮಾರಕ ಕೊರೋನಾಗೆ ಬೆಂಗಳೂರಿನಲ್ಲಿ ಮತ್ತೊಂದು ಬಲಿ; ರಾಜ್ಯದಲ್ಲಿ ಸಾವಿನ ಸಂಖ್ಯೆ 13ಕ್ಕೆ ಏರಿಕೆ

ಬೆಂಗಳೂರಿನಲ್ಲಿ ಮಾರಕ ಕೊರೋನಾ ವೈರಸ್ ಗೆ ಮತ್ತೊಂದು ಬಲಿಯಾಗಿದ್ದು, ಆ ಮೂಲಕ ರಾಜ್ಯದಲ್ಲಿ ಕೊರೋನಾ ಸಾವಿನ ಸಂಖ್ಯೆ 13ಕ್ಕೆ ಏರಿಕೆಯಾಗಿದೆ.

ಸಂಗ್ರಹ ಚಿತ್ರ
Srinivasa Murthy VN
Updated On : 16 Apr 2020, 11:16 am

ಬೆಂಗಳೂರು: ಬೆಂಗಳೂರಿನಲ್ಲಿ ಮಾರಕ ಕೊರೋನಾ ವೈರಸ್ ಗೆ ಮತ್ತೊಂದು ಬಲಿಯಾಗಿದ್ದು, ಆ ಮೂಲಕ ರಾಜ್ಯದಲ್ಲಿ ಕೊರೋನಾ ಸಾವಿನ ಸಂಖ್ಯೆ 13ಕ್ಕೆ ಏರಿಕೆಯಾಗಿದೆ.

ಬೆಂಗಳೂರಿನ ರಾಮಸ್ವಾಮಿ ಪಾಳ್ಯದ ನಿವಾಸಿ 66 ವರ್ಷದ ವೈರಸ್ ಸೋಂಕಿತ ವ್ಯಕ್ತಿ ಇಂದು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಮೂಲಗಳ ಪ್ರಕಾರ ಮೃತ ವ್ಯಕ್ತಿ ಪೇಷೆಂಟ್ ನಂಬರ್ 195 ಎಂದು ತಿಳಿದುಬಂದಿದ್ದು,  ಮಣಿಪುರದಿಂದ ಬೆಂಗಳೂರಿಗೆ ಮಾರ್ಚ್ 12 ರಂದು  ಆಗಮಿಸಿದ್ದರು. ಬಿಬಿಎಂಪಿ ನಿವಾಸಿಯಾಗಿದ್ದ ಇವರು ಏ.10 ರಿಂದ ವೆಂಟಿಲೇಟರ್ ನಲ್ಲಿದ್ದರು. ಇಂದು ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ. ಆ ಮೂಲಕ ಬೆಂಗಳೂರಿನಲ್ಲಿ ಕೊರೋನಾ ವೈರಸ್ ಗೆ ಬಲಿಯಾದವರ ಸಂಖ್ಯೆ 3ಕ್ಕೆ ಏರಿಕೆಯಾಗಿದೆ.

ಈ ಹಿಂದೆ ತೀವ್ರ ಜ್ವರ ಮತ್ತು ಉಸಿರಾಟದ ತೊಂದರೆಯಿಂದಾಗಿ ಹೆಬ್ಬಾಳದಲ್ಲಿರುವ ಬ್ಯಾಪ್ಟಿಸ್ಟ್ ಆಸ್ಪತ್ರೆಗೆ ದಾಖಲಾಗಿದ್ದರು. ಅವರನ್ನು ಪರೀಕ್ಷಿಸಿದ್ದ ವೈದ್ಯರು ಕೊರೋನಾ ಐಸೋಲೇಷನ್ ಆಸ್ಪತ್ರೆಗೆ ಕಳುಹಿಸಿದ್ದರು. ಬಳಿಕ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಇವರಿಗೆ ಚಿಕಿತ್ಸೆ ನೀಡಲಾಗುತ್ತಿತ್ತು.  ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿದ್ದಾರೆ.

Advertisement

Advertisement

ಇನ್ನು ರಾಜ್ಯದಲ್ಲಿ ಈವರೆಗೂ ಒಟ್ಟು 279 ಮಂದಿಗೆ ಕೊರೋನಾ ಸೋಂಕು ತಗುಲಿದ್ದು, ಈ ಪೈಕಿ 80 ಮಂದಿ ಡಿಸ್ಚಾರ್ಜ್ ಆಗಿದ್ದಾರೆ. ರೋಗಿ ಸಂಖ್ಯೆ 43 ಮತ್ತು 101 ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಮೈಸೂರಿನಲ್ಲಿ ಬುಧವಾರ ಒಂದೇ ದಿನ 10 ಪ್ರಕರಣಗಳು ವರದಿಯಾಗಿದ್ದು, ಚಿಕ್ಕಬಳ್ಳಾಪುರದ 65 ವರ್ಷದ ವ್ಯಕ್ತಿ ಹಾಗೂ ಬೆಳಗಾವಿಯ 80 ವರ್ಷದ ವೃದ್ಧೆ ವೈರಸ್ ಗೆ ಸಾವಿಗೀಡಾಗಿದ್ದರು. ಈವರೆಗೆ ರಾಜ್ಯದಲ್ಲಿ ಒಂದು ದಿನ ವರದಿಯಾದ ಗರಿಷ್ಠ ಪ್ರಕರಣಗಳ ಸಂಖ್ಯೆ 17. ಆದರೆ, ರಾಜ್ಯದಲ್ಲಿ ಬುಧವಾರ ಒಂದೇ ದಿನ 19 ಪ್ರಕರಣಗಳು ವರದಿಯಾಗಿವೆ. ಇದರಿಂದಾಗಿ ಒಂದೇ ದಿನ ಅತ್ಯಧಿಕ ಪ್ರಕರಣ ವರದಿಯಾದಂತಾಗಿದೆ. ಬೆಂಗಳೂರು ವಲಯದಲ್ಲಿ ಈವರೆಗೆ ಒಟ್ಟು 71 ಕೊರೊನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಈ ಪೈಕಿ 31 ಮಂದಿ ಗುಣಮುಖರಾಗಿ ಆಸ್ಪತ್ರೆಗಳಿಂದ ಡಿಸ್‌ಚಾರ್ಜ್ ಆಗಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement