ಅಬಕಾರಿ ಅಧಿಕಾರಿಗಳ ತಂಡ 
ರಾಜ್ಯ

ಲಾಕ್ ಡೌನ್ ಮಧ್ಯೆ ಓಪನ್ ಆಗಿದ್ದ ಬಾರ್ ಮೇಲೆ ದಾಳಿ, ಲಕ್ಷಾಂತರ ರೂ. ಮೌಲ್ಯದ ಮದ್ಯ ವಶ

ಲಾಕ್ ಡೌನ್ ಮಧ್ಯೆಯೂ ಮದ್ಯ ಮಾರಾಟ ಮಾಡುತ್ತಿದ್ದ ಬಾರ್ ವೊಂದರ ಮೇಲೆ ಅಬಕಾರಿ ಅಧಿಕಾರಿಗಳು ದಾಳಿ ನಡೆಸಿ ಲಕ್ಷಾಂತರ ರೂಪಾಯಿ ಮೌಲ್ಯದ ಮದ್ಯ ವಶಪಡಿಸಿಕೊಂಡಿರುವ ಘಟನೆ ಬಳ್ಳಾರಿ ಜಿಲ್ಲೆ ಹೂವಿನಹಡಗಲಿ ತಾಲೂಕಿನಲ್ಲಿ ನಡೆದಿದೆ.

ಹೂವಿನಹಡಗಲಿ:ಲಾಕ್ ಡೌನ್ ಮಧ್ಯೆಯೂ ಮದ್ಯ ಮಾರಾಟ ಮಾಡುತ್ತಿದ್ದ ಬಾರ್ ವೊಂದರ ಮೇಲೆ ಅಬಕಾರಿ ಅಧಿಕಾರಿಗಳು ದಾಳಿ ನಡೆಸಿ ಲಕ್ಷಾಂತರ ರೂಪಾಯಿ ಮೌಲ್ಯದ ಮದ್ಯ ವಶಪಡಿಸಿಕೊಂಡಿರುವ ಘಟನೆ ಬಳ್ಳಾರಿ ಜಿಲ್ಲೆ ಹೂವಿನಹಡಗಲಿ ತಾಲೂಕಿನಲ್ಲಿ ನಡೆದಿದೆ.

ಹೂವಿನಹಡಗಲಿ ತಾಲೂಕಿನ ಹ್ಯಾರಡ ಗ್ರಾಮದ  ಶಾಂತಿ ಬಾರ್  &   ರೆಸ್ಟೋರೆಂಟ್ ಮೇಲೆ  ಹೂವಿನಹಡಗಲಿ ಅಬಕಾರಿ ಉಪ -ನಿರೀಕ್ಷಕಿ ನೇತ್ರಾ ಉಪ್ಪಾರ ನೇತೃತ್ವದಲ್ಲಿ ದಾಳಿ ನಿನ್ನೆ ರಾತ್ರಿ  ದಾಳಿ ನಡೆಸಲಾಗಿದೆ.

ದಾಳಿ ವೇಳೆಯಲ್ಲಿ ಅಕ್ರಮವಾಗಿ ಸಂಗ್ರಹಿಸಲಾಗಿದ್ದ  7 ಲಕ್ಷದ 32 ಸಾವಿರದ 475 ರೂ. ಮೌಲ್ಯದ ಮದ್ಯ ಹಾಗೂ ಮದ್ಯ ಸಾಗಾಟಕ್ಕೆ ಬಳಸಿದ್ದ ವಾಹನವೊಂದನ್ನು ವಶಪಡಿಸಿಕೊಂಡಿದ್ದಾರೆ.

ಬಂಧನ ಭೀತಿಯಲ್ಲಿ ಬಾರ್ ಮಾಲೀಕ ಪ್ರಭಾಕರ್ ಲಕ್ಕಪ್ಪನವರ ತಲೆಮರೆಸಿಕೊಂಡಿದ್ದು, ಆತನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದ ಯುವಕ ದಾರುಣ ಅಂತ್ಯ

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್

Cricket: ಪಂತ್‌ರಂತೆ ಆಡಲು ಪ್ರಯತ್ನಿಸಲ್ಲ, ಅವರ ಜೊತೆ ಆಡೋದು ದೊಡ್ಡ ಅನುಭವ: ಫಿಟ್ನೆಸ್ ಅಪ್ಡೇಟ್ ಕೊಟ್ಟ Dhruv Jurel