ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜ್ಯ

ಕಲಬುರಗಿ: ಲಾಕ್ ಡೌನ್ ಉಲ್ಲಂಘಿಸಿ ರಥೋತ್ಸವ; 13 ಜನರ ಬಂಧನ

ಕೊರೋನಾ ನಿಯಂತ್ರಿಸಲು ಜಾರಿಯಾಗಿದ್ದ ಲಾಕ್ ಡೌನ್ ಉಲ್ಲಂಘಿಸಿ ರಥೋತ್ಸವ ಮಾಡಿದ ಹಿನ್ನೆಲೆಯಲ್ಲಿ ಸಂಸ್ಥೆಯ ಟ್ರಸ್ಟ್ ಕಾರ್ಯದರ್ಶಿ ಗುಂಡಣ್ಣ ಬಾಳಿ ಸೇರಿ 13 ಜನರನ್ನು ಪೊಲೀಸರು ಬಂಧಿಸಿದ್ದಾರೆ.

ಕಲಬುರಗಿ ರಥೋತ್ಸವ
Srinivasa Murthy VN
Updated On : 18 Apr 2020, 2:11 pm

ಕಲಬುರಗಿ: ಕೊರೋನಾ ನಿಯಂತ್ರಿಸಲು ಜಾರಿಯಾಗಿದ್ದ ಲಾಕ್ ಡೌನ್ ಉಲ್ಲಂಘಿಸಿ ರಥೋತ್ಸವ ಮಾಡಿದ ಹಿನ್ನೆಲೆಯಲ್ಲಿ ಸಂಸ್ಥೆಯ ಟ್ರಸ್ಟ್ ಕಾರ್ಯದರ್ಶಿ ಗುಂಡಣ್ಣ ಬಾಳಿ ಸೇರಿ 13 ಜನರನ್ನು ಪೊಲೀಸರು ಬಂಧಿಸಿದ್ದಾರೆ.

ಜಿಲ್ಲೆಯ ಚಿತ್ತಾಪುರ ತಾಲೂಕಿನ ವಾಡಿ ಠಾಣೆ ಪೊಲೀಸರಿಂದ ರಾವೂರು ಗ್ರಾಮದ ಹದಿಮೂರು ಜನರನ್ನು ಬಂಧಿಸಲಾಗಿದೆ. ಇದೇ 16 ರಂದು ಚಿತ್ತಾಪುರ ತಾಲೂಕಿನ ರಾವೂರು ಗ್ರಾಮದಲ್ಲಿ ಸಿದ್ಧಲಿಂಗೇಶ್ವರ ಮಠದ ರಥೋತ್ಸವವಿತ್ತು. ಈ ಹಿಂದೆ ರಥೋತ್ಸವ ಮಾಡೋದಿಲ್ಲ ಅಂತಾ  ಮೊದಲು ಪೊಲೀಸರಿಗೆ ಮುಚ್ಚಳಿಕೆ ಬರೆದುಕೊಟ್ಟಿದ್ದರು. ನಂತ್ರ ಪೊಲೀಸರಿಗೆ ಮಾಹಿತಿ ನೀಡದೆ ಕದ್ದುಮುಚ್ಚಿ ರಥೋತ್ಸವ ನಡೆಸಿದ್ದರು. ಈ ಹಿನ್ನೆಲೆಯಲ್ಲಿ ವಾಡಿ ಠಾಣೆ ಪೊಲೀಸರು, ಟ್ರಸ್ಟ್ ಕಾರ್ಯದರ್ಶಿ ಗುಂಡಣ್ಣ ಬಾಳಿ ಸೇರಿದಂತೆ ರಾವೂರ್ ಗ್ರಾಮದ 13 ಜನರನ್ನು ಬಂಧಿಸಿದ್ದಾರೆ.

ಇನ್ನು ತಾಲೂಕಿನ ವಾಡಿ ಪಟ್ಟಣದಲ್ಲಿ ಎರಡು ವರ್ಷದ ಮಗುವಿಗೆ ಕೊರೋನಾ ಸೋಂಕು‌ ತಗುಲಿದೆ. ತಮ್ಮೂರಿನ ಪಕ್ಕದಲ್ಲಿ ಕೊರೋನಾ ಬಂದಿದ್ದರು ಜನ ಎಚ್ಚೆತ್ತುಕೊಳ್ಳದೆ ಬೇಜವಾಬ್ದಾರಿಯಿಂದ ವರ್ತಿಸಿದ್ದರು, ಜಿಲ್ಲೆಯಲ್ಲಿ ಇದೂವರೆಗೂ ಮೂವರು ಕೊರೋನಾಗೆ ಬಲಿಯಾಗಿದ್ದು,  ಹದಿನೆಂಟು ಜನರಲ್ಲಿ ಸೋಂಕು ದೃಢವಾಗಿದೆ. ಅಲ್ಲದೆ, ಜಿಲ್ಲೆಯನ್ನು ರೆಡ್ ಜೋನ್ ಎಂದು ಘೋಷಿಸಲಾಗಿದೆ. ಆದರೂ, ನೂರಾರು ಜನ ಸೇರಿ ರಥೋತ್ಸವ ನೆರವೇರಿಸುವ ಮೂಲಕ ಜಿಲ್ಲಾಡಳಿತದ ನಿಯಮ ಉಲ್ಲಂಘಿಸಿದ್ದರು.

Advertisement

Advertisement

ಇನ್ನು, ಸಿದ್ದಲಿಂಗೇಶ್ವರ ದೇವಸ್ಥಾನದ ರಥೋತ್ಸವದಲ್ಲಿ ನೂರಾರು ಜನ ಭಾಗಿಯಾಗಿದ್ದ ಹಿನ್ನೆಲೆಯಲ್ಲಿ ರಾವೂರ ಗ್ರಾಮವನ್ನು ಜಿಲ್ಲಾಡಳಿತ ಸಂಪೂರ್ಣವಾಗಿ ಕ್ವಾರೆಂಟೈನ್ ಮಾಡಿದೆ. ಅಲ್ಲದೇ, ಇತ್ತೀಚೆಗೆ ರಾವೂರ ಗ್ರಾಮದ ಮೂರು ಕಿ.ಮೀ. ದೂರದಲ್ಲಿರುವ ವಾಡಿ ಪಟ್ಟಣದ ಮಗುವಿನಲ್ಲಿ ಕೊರೊನಾ ಸೋಂಕು ಕಂಡು ಬಂದ ಹಿನ್ನೆಲೆಯಲ್ಲಿ ರಾವೂರ ಗ್ರಾಮದ ರಸ್ತೆಗಳನ್ನು ಆರೋಗ್ಯ ಇಲಾಖೆ ಬಂದ್ ಮಾಡಿಸಿ, ನೂರಾರು ಜನ ಒಂದೆಡೆ ಸೇರಿ ರಥೋತ್ಸವ ನಡೆಸಿದ‌ ಹಿನ್ನೆಲೆ ಗ್ರಾಮಸ್ಥರಿಗೆ ವೈದ್ಯಕೀಯ ಪರೀಕ್ಷೆ ನಡೆಸುತ್ತಿದೆ. ರಥೋತ್ಸವ ಜರುಗಿಸಿದ ಹಿನ್ನೆಲೆಯಲ್ಲಿ 20 ಜನರ ವಿರುದ್ಧ ಎಫ್ ಐ ಆರ್ ಸೇರಿ ರಥೋತ್ಸವಕ್ಕೆ ಪ್ರತ್ಯಕ್ಷ ಪರೋಕ್ಷವಾಗಿ ಬೆಂಬಲ ನೀಡಿದ 200 ಜನರ ವಿರುದ್ಧ ಪ್ರಕರಣ ದಾಖಲಾಗಿದೆ.

ಪಿಎಸ್‌ಐ ತಲೆದಂಡ
ಈ ಹಿಂದೆ ಲಾಕ್‌ಡೌನ್‌ ನಿಯಮಗಳನ್ನು ಉಲ್ಲಂಘಿಸಿ ಸಾಮಾಜಿಕ ಅಂತರ ಕಾಯ್ದುಕೊಳ್ಳದೇ ರಥೋತ್ಸವ ನಡೆಸಲಾಗಿದೆ. ಇದಕ್ಕೆ ಸಂಬಂಧಿಸಿದಂತೆ ವಾಡಿ ಪಿಎಸ್ ಐ ವಿಜಯಕುಮಾರ ಬಾವಗಿ ಅವರನ್ನು ಅಮಾನತು ಮಾಡಲಾಗಿತ್ತು. ಅಲ್ಲದೆ ರಥೋತ್ಸವ ನಡೆಸಿದ ದೇವಸ್ಥಾನ ಸಮಿತಿಯ  20 ಜನರ ವಿರುದ್ಧವೂ ಪ್ರಕರಣ ದಾಖಲಿಸಲಾಗಿತ್ತು. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments