ಭಿಸಿ ಪಾಟೀಲ್ 
ರಾಜ್ಯ

ರೈತರಿಂದ ಆನ್‌ಲೈನ್‌ ಟ್ರೇಡಿಂಗ್ ಆರಂಭ: ಬಿ.ಸಿ. ಪಾಟೀಲ್

ಕೃಷಿ ಸಚಿವನಾಗಿ ತಾವು ತಮ್ಮ ಕರ್ತವ್ಯಗಳನ್ನು ನಿಭಾಯಿಸುತ್ತಿದ್ದು, ರೈತರ ಕೆಲಸಗಳನ್ನು ಮಾಡುತ್ತಿರುವ ಹೆಮ್ಮೆ ಹಾಗೂ ಆತ್ಮತೃಪ್ತಿ ಎರಡೂ ತಮಗಿದೆ ಎಂದು ಕೊಪ್ಪಳ ಜಿಲ್ಲಾ ಉಸ್ತುವಾರಿಯೂ ಆಗಿರುವ ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ.

ಕೊಪ್ಪಳ: ಕೃಷಿ ಸಚಿವನಾಗಿ ತಾವು ತಮ್ಮ ಕರ್ತವ್ಯಗಳನ್ನು ನಿಭಾಯಿಸುತ್ತಿದ್ದು, ರೈತರ ಕೆಲಸಗಳನ್ನು ಮಾಡುತ್ತಿರುವ ಹೆಮ್ಮೆ ಹಾಗೂ ಆತ್ಮತೃಪ್ತಿ ಎರಡೂ ತಮಗಿದೆ ಎಂದು ಕೊಪ್ಪಳ ಜಿಲ್ಲಾ ಉಸ್ತುವಾರಿಯೂ ಆಗಿರುವ ಕೃಷಿ ಸಚಿವ ಬಿ.ಸಿ.ಪಾಟೀಲ್ ಹೇಳಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಳೆದ ಹದಿನೈದು ದಿನಗಳಿಂದಲೂ ರಾಜ್ಯದ ಎಲ್ಲಾ ಜಿಲ್ಲೆಗಳಿಗೆ ಭೇಟಿ ನೀಡಿ ಲಾಕ್‌ ಡೌನ್ ಹಿನ್ನೆಲೆಯಲ್ಲಿ ಕೃಷಿ ಚಟುವಟಿಕೆಗಳು, ರೈತರ ಸಮಸ್ಯೆಗಳನ್ನು ಖುದ್ದು ಆಲಿಸಿದ್ದೇನೆ. ತಾವು ಸರ್ಕಾರ ನೀಡಿದ ಜವಾಬ್ದಾರಿಯನ್ನು ಚಾಚು ತಪ್ಪದೇ ನಿರ್ವಹಿಸುತ್ತಿರುವುದಾಗಿ ಸ್ಪಷ್ಟಪಡಿಸಿದರು.

ಲಾಕ್‌ ಡೌನ್ ಹಿನ್ನೆಲೆಯಲ್ಲಿ ಸರ್ಕಾರ ತನ್ನ ವ್ಯಾಪ್ತಿಯಲ್ಲಿ ರೈತರಿಗೆ ಯಾವೆಲ್ಲ ಅನುಕೂಲ ಮಾಡಿಕೊಡಬೇಕೋ ಅವೆದೆಲ್ಲವನ್ನೂ ಮಾಡಿದೆ. ರೈತರ ಕೃಷಿ ಚಟುವಟಿಕೆಗಳಿಗೆ ಯಾವುದೇ ನಿರ್ಬಂಧವಿಲ್ಲ. ಅಗ್ರಿ ಗ್ರೀನ್ ಪಾಸ್‌ಗಳನ್ನು ಸಹ ಮಾರಾಟಕ್ಕೆ ವಿತರಿಸಲಾಗುತ್ತಿದೆ. ಕೃಷಿ ಚಟುವಟಿಕೆಗಳಿಗೆ ನಿರ್ಬಂಧ ಸಡಿಲಿಸಲಾಗಿದೆ. ಕೃಷಿ ಉತ್ಪನ್ನಗಳ ಮಾರಾಟಕ್ಕೆ ಅವಕಾಶ
ಕಲ್ಪಿಸಲಾಗಿದೆ. ಕೆಲವು ಕಡೆ ರೈತರು ಆನ್‌ಲೈನ್‌ ಟ್ರೇಡಿಂಗ್ ಆರಂಭಿಸಿದ್ದಾರೆ.

ದಳ್ಳಾಳಿಗಳ ಮಧ್ಯವರ್ತಿಗಳ ಹಾವಳಿ ತಪ್ಪಲು ಕ್ರಮಕೈಗೊಳ್ಳಲಾಗಿದೆ. ರೈತ ಮಧ್ಯವರ್ತಿಗಳ ಸಂಪರ್ಕಕ್ಕೆ ಹೋದರೆ ಬೆಳೆಗಳು ಕಡಿಮೆ ಬೆಲೆಗೆ ಕೇಳುವ ಸಾಧ್ಯತೆಯಿದೆ. ಹೀಗಾಗಿ ಗ್ರಾಹಕರ ಬಳಿಯೇ‌ ರೈತರು ತಮ್ಮ ಫಸಲನ್ನು ಮಾರಾಟ ಮಾಡಬಹುದು ಎಂದು ಸಲಹೆ ನೀಡಿದರು.

ಶಾಸಕ ಹಾಲಪ್ಪ ಆಚಾರ್ ಜಿ.ಪಂ.ಅಧ್ಯಕ್ಷ ವಿಶ್ವನಾಥ್‌ರೆಡ್ಡಿ, ಅಂಬರೀಷ್ ಕುಳಗಿ, ಅಮರೇಷ್ ಕರಡಿ ಉಪಸ್ಥಿತರಿದ್ದರು. ಕೃಷಿ ಸಚಿವ ಬಿ.ಸಿ.ಪಾಟೀಲ್ ಅವರು ಕೊಪ್ಪಳ ಜಿಲ್ಲೆಯ ಉಸ್ತುವಾರಿ ಸಚಿವರಾಗಿ  ಮೊದಲ ಬಾರಿಗೆ ಉಸ್ತುವಾರಿ ಜಿಲ್ಲೆಗೆ ಪ್ರವಾಸ ಕೈಗೊಂಡಿದ್ದು, ಸಭೆಗೂ ಮುನ್ನ ಇಲ್ಲಿನ ಕೋಳೂರು ಗ್ರಾಮದಲ್ಲಿ ರೈತರನ್ನು ಭೇಟಿಯಾದ ಸಚಿವರು, ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಕರೆ ನೀಡಿದರು. ಬಳಿಕ ಇಲ್ಲಿನ ಗವಿಸಿದ್ದೇಶ್ವರ ಮಠಕ್ಕೆ ಭೇಟಿ ನೀಡಿ ಶ್ರೀಗಳ ಆಶೀರ್ವಾದ ಪಡೆದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ