ಡಿಕೆ. ಶಿವಕುಮಾರ್ 
ರಾಜ್ಯ

ದಿನಗೂಲಿ ಕಾರ್ಮಿಕರಿಗೆ ರೂ.10,000 ನೀಡಿ: ಸರ್ಕಾರಕ್ಕೆ ಕಾಂಗ್ರೆಸ್ ಆಗ್ರಹ

ಲಾಕ್'ಡೌನ್ ಪರಿಣಾಮ ದಿನಗೂಲಿ ಕಾರ್ಮಿಕರು, ಕ್ಯಾಬ್ ಚಾಲಕರು ಸೇರಿದಂತೆ ಇನ್ನಿತರೆ ಬಡವರ ಮೇಲೆ ಗಂಭೀರ ಪರಿಣಾಮ ಬೀರಿದ್ದು, ಇಂತಹವರಿಗೆ ಕೂಡಲೇ ಆರ್ಥಿಕ ಬೆಂಬಲ ನೀಡುವಂತೆ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ರಾಜ್ಯ ಕಾಂಗ್ರೆಸ್ ಶನಿವಾರ ಆಗ್ರಹಿಸಿದೆ. 

ಬೆಂಗಳೂರು: ಲಾಕ್'ಡೌನ್ ಪರಿಣಾಮ ದಿನಗೂಲಿ ಕಾರ್ಮಿಕರು, ಕ್ಯಾಬ್ ಚಾಲಕರು ಸೇರಿದಂತೆ ಇನ್ನಿತರೆ ಬಡವರ ಮೇಲೆ ಗಂಭೀರ ಪರಿಣಾಮ ಬೀರಿದ್ದು, ಇಂತಹವರಿಗೆ ಕೂಡಲೇ ಆರ್ಥಿಕ ಬೆಂಬಲ ನೀಡುವಂತೆ ಪ್ರಧಾನಮಂತ್ರಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ರಾಜ್ಯ ಕಾಂಗ್ರೆಸ್ ಶನಿವಾರ ಆಗ್ರಹಿಸಿದೆ. 

ಈ ಕುರಿತು ಪ್ರತಿಕ್ರಿಯೆ ನೀಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು, ಲಾಕ್'ಡೌನ್ ಪರಿಣಾಮ ದಿನಗೂಲಿ ಕಾರ್ಮಿಕರು, ಕ್ಯಾಬ್ ಚಾಲಕರು ಸೇರಿದಂತೆ ಇನ್ನಿತರೆ ಬಡವರ ಮೇಲೆ ಗಂಭೀರ ಪರಿಣಾಮ ಬೀರಿದ್ದು, ಈ ಹಿನ್ನೆಲೆಯಲ್ಲಿ ಸರ್ಕಾರ ಇಂತಹವರ ಬ್ಯಾಂಕ್ ಖಾತೆಗಳಿಗೆ ರೂ.10,000 ಜಮಾವಣೆ ಮಾಡಬೇಕಿದೆ ಎಂದು ಹೇಳಿದ್ದಾರೆ.

ಲಾಕ್'ಡೌನ ಅಂತ್ಯಗೊಳ್ಳವವರೆಗೂ ದಿನಗೂಲಿ ಕಾರ್ಮಿಕರಿಗೆ ಆರ್ಥಿಕ ಸಹಾಯ ಮಾಡಬೇಕಿದೆ. ಬಡವರಿಗೆ ಸಹಾಯ ಮಾಡುವುದು ಸರ್ಕಾರದ ಜವಾಬ್ದಾರಿ. ಆದರೆ, ಪ್ರಧಾನಮಂತ್ರಿ ಯಾಗಲೀ, ಮುಖ್ಯಮಂತ್ರಿಗಳಾಗಲೀ ಈ ಬಗ್ಗೆ ಮಾತನಾಡದೇ ಇರುವುದು ದುರಾದೃಷ್ಟಕರ. ಭಾನುವಾರ ಮುಖ್ಯಮಂತ್ರಿಗಳನ್ನು ಭೇಟಿ ಮಾಡಲಿದ್ದು, ಬಡವರ ಪರ ಆರ್ಥಿಕ ಸಹಾಯ ಮಾಡುವಂತೆ ಮನವಿ ಮಾಡಿಕೊಳ್ಳಲಾಗುತ್ತದೆ. 

ಕೇಂದ್ರ ಹಾಗೂ ರಾಜ್ಯ ಸರ್ಕಾರ ಈ ಹಿಂದೆ ಘೋಷಣೆ ಮಾಡಿದ್ದ ಆರ್ಥಿಕ ಸಹಾಯ ಇನ್ನೂ ಬಡವರ ಕೈ ತಲುಪುತ್ತಿಲ್ಲ. ಹೀಗಾಗಿ ಸಾಕಷ್ಟು ಜನರು ಸಂಕಷ್ಟ ಎದುರಿಸುತ್ತಿದ್ದಾರೆ. 1.65 ಕೋಟಿ ಕಾರ್ಮಿಕರ ಕುರಿತಂತೆ ಸರ್ಕಾರ ಸೂಕ್ತ ಕ್ರಮಗಳನ್ನು ಕೈಗೊಂಡಿಲ್ಲ. ಈ ಕುರಿತು ಸರ್ಕಾರ ಸರ್ವಪಕ್ಷ ಸಭೆ ಕರೆದು ಮಾತುಕತೆ ನಡೆಸಲಿ ಇಲ್ಲವೇ ವಿಧಾನಸಭೆ ಅಧಿವೇಶನ ಕರೆಯಲಿ. ಜನರಿಗೆ ಸಹಾಯ ಮಾಡುವ ವಿಚಾರ ಬಂದರೆ ಸರ್ಕಾರಕ್ಕೆ ನಾವು ಬೆಂಬಲ ನೀಡುತ್ತೇವೆ. ರಾಜಕೀಯ ಮಾಡುವುದಿಲ್ಲ ಎಂದಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT