ಮಂಗಳೂರು ಜಿಲ್ಲಾಸ್ಪತ್ರೆ 
ರಾಜ್ಯ

ರಾಜ್ಯದಲ್ಲಿ ಕೊರೋನಾಗೆ ಮತ್ತೊಂದು ಬಲಿ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 45 ವರ್ಷದ ಮಹಿಳೆ ಸಾವು

ಬಂಟ್ವಾಳ ತಾಲೂಕಿನ ಕಸಬಾ ಗ್ರಾಮದ ಸುಮಾರು 45 ವರ್ಷ ಪ್ರಾಯದ ಮಹಿಳೆಯೊಬ್ಬರು ರವಿವಾರ ವೆನ್ಲಾಕ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದು, ಅವರಿಗೆ ಕೊರೋನ ವೈರಸ್ ಸೋಂಕು ತಗುಲಿರುವುದು ದೃಢಪಟ್ಟಿದೆ. ಹಾಗಾಗಿ ಜಿಲ್ಲೆಯಲ್ಲಿ ಕೊರೋನಾಗೆ ಇದು ಮೊದಲ ಬಲಿಯಾಗಿದೆ.

ಮಂಗಳೂರು: ಬಂಟ್ವಾಳ ತಾಲೂಕಿನ ಕಸಬಾ ಗ್ರಾಮದ ಸುಮಾರು 45 ವರ್ಷ ಪ್ರಾಯದ ಮಹಿಳೆಯೊಬ್ಬರು ರವಿವಾರ ವೆನ್ಲಾಕ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದು, ಅವರಿಗೆ ಕೊರೋನ ವೈರಸ್ ಸೋಂಕು ತಗುಲಿರುವುದು ದೃಢಪಟ್ಟಿದೆ. ಹಾಗಾಗಿ ಜಿಲ್ಲೆಯಲ್ಲಿ ಕೊರೋನಾಗೆ ಇದು ಮೊದಲ ಬಲಿಯಾಗಿದ್ದು, ರಾಜ್ಯದಲ್ಲಿ ಮೃತರ ಸಂಖ್ಯೆ 16ಕ್ಕೆ ಏರಿಕೆ ಆಗಿದೆ.

ಈ ಮಹಿಳೆಗೆ ಕೆಲವು ದಿನಗಳಿಂದ ಉಸಿರಾಟದ ತೊಂದರೆಯಿತ್ತು. ಈ ಹಿನ್ನೆಲೆಯಲ್ಲಿ ಅವರನ್ನು ಬಂಟ್ವಾಳದ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ವೆನ್ಲಾಕ್ ಗೆ ದಾಖಲಿಸಲಾಗಿತ್ತು. ಅವರ ಗಂಟಲಿನ ದ್ರವವನ್ನು ಪರೀಕ್ಷೆಗೊಳಪಡಿಸಿದಾಗ ಪಾಸಿಟಿವ್ ಬಂದಿದ್ದು, ಈ ಮಧ್ಯೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಈಗಾಗಲೆ 13 ಕೊರೋನ ಸೋಂಕಿತರ ಪೈಕಿ 12 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದು, ಓರ್ವ ಚಿಕಿತ್ಸೆ ಪಡೆಯುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ