ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜ್ಯ

ಕೊರೋನಾ ರಾಷ್ಟ್ರೀಯ ವಿಪತ್ತೆಂದು ಘೋಷಿಸಿ: ಸಿಎಂ ಭೇಟಿಯಾದ ರಾಜ್ಯ ಕಾಂಗ್ರೆಸ್ ನಿಯೋಗ

ಕೊರೋನಾ ಸಂಕಷ್ಟವನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಬೇಕು ಎಂಬ ಆಗ್ರವೂ ಸೇರಿದಂತೆ ಕಾಂಗ್ರೆಸ್ ಟಾಸ್ಕ್ ಫೋರ್ಸ್'ನಿಂದ ಸುಮಾರು 15 ಅಂಶಗಳ ಮನವಿಯನ್ನು ರಾಜ್ಯ ಸರ್ಕಾರಕ್ಕೆ ಸಲ್ಲಿಸಲಾಗಿದೆ.

ಕೊರೋನಾ ರಾಷ್ಟ್ರೀಯ ವಿಪತ್ತೆಂದು ಘೋಷಿಸಿ: ಸಿಎಂ ಭೇಟಿಯಾದ ರಾಜ್ಯ ಕಾಂಗ್ರೆಸ್ ನಿಯೋಗ
Manjula VN
Updated On : 20 Apr 2020, 7:21 am

ಬೆಂಗಳೂರು: ಕೊರೋನಾ ಸಂಕಷ್ಟವನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಬೇಕು ಎಂಬ ಆಗ್ರವೂ ಸೇರಿದಂತೆ ಕಾಂಗ್ರೆಸ್ ಟಾಸ್ಕ್ ಫೋರ್ಸ್'ನಿಂದ ಸುಮಾರು 15 ಅಂಶಗಳ ಮನವಿಯನ್ನು ರಾಜ್ಯ ಸರ್ಕಾರಕ್ಕೆ ಸಲ್ಲಿಸಲಾಗಿದೆ. 

ಭಾನುವಾರ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ..ಶಿವಕುಮಾರ್ ನೇತೃತ್ವದಲ್ಲಿ ಪಕ್ಷದ ಮುಖಂಡರ ನಿಯೋಗವು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿತು. 

ಕೊರೋನಾ ಹಿನ್ನೆಲೆಯಲ್ಲಿ ಪಕ್ಷದ ಹಿರಿಯ ಶಾಸಕ ರಮೇಶ್ ಕುಮಾರ್ ನೇತೃತ್ವದಲ್ಲಿ ರಚಿಸಲಾಗಿದ್ದ ಟಾಸ್ಕ್ ಫೋರ್ಸ್' ಶಿಫಾರಸುಗಳನ್ನೂ ಮುಖ್ಯಮಂತ್ರಿಗಳಿಗೆ ನೀಡಿದು. 

Advertisement

Advertisement

ಲಾಕ್'ಡೌನ್ ನಿಂದ ಸಂಕಷ್ಟಕ್ಕೆ ಸಿಲುಕಿರುವ ಜನಸಾಮಾನ್ಯರಿಗೆ ಅಗತ್ಯ ಸೌಲಭ್ಯ ಕಲ್ಪಿಸಲು ಸರ್ಕಾರ ಸಂಪೂರ್ಣ ವಿಫಲವಾಗಿದೆ. ಅಸಂಘಟಿಕ ಕಾರ್ಮಿಕರು, ರೈತರು ಸೇರಿದಂತೆ ವಿವಿಧ ವೃತ್ತಿಪರ ಸಮುದಾಯಗಳು ತೀವ್ರ ಸಂಕಷ್ಟಕ್ಕೆ ಸಿಲುಕಿವೆ. ಹೀಗಾಗಿ ರಾಜ್ಯ ಸರ್ಕಾರ ಯುದ್ಧೋಪಾದಿಯಲ್ಲಿ ಪರಿಹಾರ ಕಾರ್ಯಗಳನ್ನು ಕೈಗೊಳ್ಳಬೇಕು ಎಂದು ಒತ್ತಾಯಿಸಿತು. 

ಲಾಕ್'ಡೌನ್ ಅಂತ್ಯದವರೆಗೂ ರಾಜ್ಯ ಸರ್ಕಾರ ರೈತರು, ಕಾರ್ಮಿಕರು ಸೇರಿದಂತೆ ಬಡವರ ನೆರವಿಗೆ ನಿಲ್ಲಬೇಕು. ಕಾರ್ಮಿಕರಿಗೆ ವಿಶೇಷ ಪ್ಯಾಕೇಜ್ ಘೋಷಿಸಬೇಕು ಎಂದು ಇದೇ ವೇಳೆ ಸಿದ್ದರಾಮಯ್ಯ ಅವರು ಆಗ್ರಹಿಸಿದ್ದಾರೆ. 

ಅಸಂಘಟಿತ ವಲಯದ 1.32 ಕೋಟಿ ಕಾರ್ಮಿಕರಿದ್ದಾರೆ. ಕಾರ್ಮಿಕರ ಕಲ್ಯಾಣ ನಿಧಿಯಲ್ಲಿ ರೂ.8 ಸಾವಿರ ಕೋಟಿ ಇದೆ. ಸರ್ಕಾರವೇ ಹೇಳಿರುವ ಪ್ರಕಾರ ಎಲ್ಲಾ ಕಾರ್ಮಿಕರಿಗೂ ತಲಾ ರೂ.2000 ಸಹಾಯಧನ ನೀಡಬೇಕು. ಕಾರ್ಮಿಕರಿಗೆ ವಿಶೇಷ ಪ್ಯಾಕೇಜ್ ಘೋಷಿಸಬೇಕು ಎಂದು ಒತ್ತಾಯಿಸಿದರು. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement