ರಾಜ್ಯ

ಪಾದರಾಯನಪುರ ದುಷ್ಕೃತ್ಯದಲ್ಲಿ ತೊಡಗಿದ್ದವರನ್ನು ಗುರುತಿಸಿ ಕಠಿಣ ಶಿಕ್ಷೆಗೊಳಪಡಿಸಿ: ಸಿದ್ದರಾಮಯ್ಯ ಒತ್ತಾಯ

Srinivasamurthy VN

ಬೆಂಗಳೂರು: ಪಾದರಾಯನಪುರದಲ್ಲಿ ಕರ್ತವ್ಯನಿರತ ಪೊಲೀಸರು ಮತ್ತು ಆರೋಗ್ಯ ಸಿಬ್ಬಂದಿಗಳ ಮೇಲೆ ಹಲ್ಲೆ ಮಾಡಿದ ದುಷ್ಕರ್ಮಿಗಳ ವಿರುದ್ಧ ಸರ್ಕಾರ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಸಿಎಂ ಹಾಗೂ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಸಿದ್ದರಾಮಯ್ಯ ಒತ್ತಾಯಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಸಿದ್ದರಾಮಯ್ಯ ಈ ಕೃತ್ಯವೆಸಗಿದವರಿಗೆ ಕಠಿಣ ಶಿಕ್ಷೆ ನೀಡುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ. 'ಪಾದರಾಯನಪುರದಲ್ಲಿ ಭಾನುವಾರ ರಾತ್ರಿ ನಡೆದಿರುವ ಗಲಭೆ ಅತ್ಯಂತ ದುರದೃಷ್ಟಕರ. ಇಂತಹ ಘಟನೆಗಳು ಪುನರಾವರ್ತನೆಯಾಗದಂತೆ‌ ತಡೆಯಬೇಕಾದರೆ ಇಂತಹ ದುಷ್ಕೃತ್ಯದಲ್ಲಿ ತೊಡಗಿರುವವರನ್ನು ಗುರುತಿಸಿ ಕಠಿಣ ಶಿಕ್ಷೆಗೊಳಪಡಿಸಬೇಕು ಎಂದು ಹೇಳಿದ್ದಾರೆ. 

ಕೊರೋನಾ ಸೋಂಕಿನಿಂದ ನಮ್ಮನ್ನು ರಕ್ಷಿಸಲು ವೈದ್ಯಕೀಯ ಮತ್ತು ಪೊಲೀಸ್ ಸಿಬ್ಬಂದಿ ಆರೋಗ್ಯವನ್ನು ಪಣಕ್ಕಿಟ್ಟು ಶ್ರಮಿಸುತ್ತಿದ್ದಾರೆ. ಅವರಿಗೆ ಸಹಕರಿಸುವುದು ನಮ್ಮ ಕರ್ತವ್ಯ. ರಾಜ್ಯದ ಜನರು ಗಾಳಿಸುದ್ದಿಯಿಂದ ಪ್ರಚೋದನೆಗೊಳಗಾಗದೆ ಇಂತಹ ಸಂದರ್ಭದಲ್ಲಿ ಸಂಯಮದಿಂದ ವರ್ತಿಸಬೇಕೆಂದು ಜನರ ಬಳಿ ಸಿದ್ದರಾಮಯ್ಯ ಮನವಿ ಮಾಡಿದ್ದಾರೆ.

SCROLL FOR NEXT