ರಾಜ್ಯ

ರೈತ ಸುರಕ್ಷಾ ಫಸಲ್ ಭೀಮಾ ಯೋಜನೆ ವಿಮೆ ಪಾವತಿಗೆ ಸಿಎಂ ಬಿಎಸ್‌ವೈ ಸಂಪುಟ ಒಪ್ಪಿಗೆ

Vishwanath S

ಬೆಂಗಳೂರು: ಕರ್ನಾಟಕ ರೈತ ಸುರಕ್ಷಾ ಫಸಲ್ ಭೀಮಾ ಯೋಜನೆಯಡಿ ಬ್ಯಾಂಕುಗಳಲ್ಲಿ ರೈತರ ಫಸಲುಗಳಿಗೆ ಮಾಡಿಸಲಾದ ವಿಮೆ ಪಾವತಿಗೆ ರಾಜ್ಯ ಸಚಿವ ಸಂಪುಟ ಒಪ್ಪಿಗೆ ನೀಡಿದೆ. 

ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ನೇತೃತ್ವದಲ್ಲಿ ನಡೆದ ಸಚಿವ ಸಂಪುಟದಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ. ಕಳೆದ 2016 ಸಾಲಿನ ರಾಜ್ಯ ಸರ್ಕಾರದ ಪಾಲಿನ ವಿಮಾ ಮೊತ್ತ 18.59 ಕೋಟಿ ರೂ ಭರಿಸಲು ಸಮ್ಮತಿ ನೀಡಲಾಗಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ. ಮಾಧು ಸ್ವಾಮಿ ಮಾಹಿತಿ ನೀಡಿದರು.

ನಿಗಮ ಹಾಗೂ ಮಂಡಳಿಗಳಲ್ಲಿ ನಿಯೋಜನೆಯ ಮೇರೆಗೆ ತೆರಳುತ್ತಿದ್ದ ವಿವಿಧ ಇಲಾಖೆಗಳ ಅಧಿಕಾರಿ ಹಾಗೂ ನೌಕರರು ತಮ್ಮನ್ನು ಅಲ್ಲಿಯೇ ಖಾಯಂಗೊಳಿಸುವಂತೆ ನ್ಯಾಯಾಲಯಗಳಲ್ಲಿ ಮೊಕದ್ದಮೆಗಳನ್ನು ದಾಖಲಿಸುವ ಪ್ರಕರಣಗಳಲ್ಲಿ ತೀವ್ರ ಏರಿಕೆ ಕಂಡು ಬಂದ ಹಿನ್ನೆಲೆಯಲ್ಲಿ ಕರ್ನಾಟಕ ನಾಗರೀಕ ಸೇವೆಗಳ ನಿಯಮಾವಳಿಗಳಿಗೆ ತಿದ್ದುಪಡಿ ತರಲು ಸಂಪುಟ ತೀರ್ಮಾನಿಸಿದೆ. ಅದರಂತೆ, ಇನ್ನು ಮುಂದೆ ನಿಗಮ-ಮಂಡಳಿ ನೌಕರರನ್ನು ಸರ್ಕಾರಿ ನೌಕರರು ಎಂದು ಪರಿಗಣಿಸಲಾಗುವುದಿಲ್ಲ ಎಂದು ತೀರ್ಮಾನಿಸಿದ್ದು, ಇದಕ್ಕೆ ಸಂಬಂಧಿಸಿದಂತೆ ಸುಗ್ರೀವಾಜ್ಞೆ ಹೊರಡಿಸಲು ತೀರ್ಮಾನಿಸಲಾಗಿದೆ. 

ಬಳ್ಳಾರಿ ಜಿಲ್ಲೆಯ ಸಂಡೂರು ತಾಲ್ಲೂಕು ದಾರೋಜಿ ಗ್ರಾಮಕ್ಕೆ 23.40 ಕೋಟಿ ರೂ ವೆಚ್ಚದಲ್ಲಿ ಬಹು ಗ್ರಾಮ ಕುಡಿಯುವ ನೀರಿನ ಯೋಜನೆಯನ್ನು ಮಂಜೂರು ಮಾಡುವ ಪ್ರಸ್ತಾವನೆಗೂ ಸಹ ಸಮ್ಮತಿ ನೀಡಲಾಗಿದೆ.

SCROLL FOR NEXT