ಜೆ ಸಿ ಮಾಧುಸ್ವಾಮಿ 
ರಾಜ್ಯ

ರಾಜ್ಯದಲ್ಲಿ ಮೇ 3ರವರೆಗೆ ಲಾಕ್‌ಡೌನ್ ವಿಸ್ತರಣೆ, ಯಾವುದೇ ವಿನಾಯಿತಿ ಇಲ್ಲ: ಕಾನೂನು ಸಚಿವ ಮಾಧುಸ್ವಾಮಿ

ರಾಜ್ಯದಲ್ಲಿ ಕೋವಿಡ್ -19 ಲಾಕ್‌ಡೌನ್ ಅನ್ನು ಮೇ 3 ರವರೆಗೆ ವಿಸ್ತರಿಸಲು ಕರ್ನಾಟಕ ಕ್ಯಾಬಿನೆಟ್ ನಿರ್ಧರಿಸಿದೆ ಎಂದು ಕಾನೂನು ಸಚಿವ ಜೆ ಸಿ ಮಾಧುಸ್ವಾಮಿ ಹೇಳಿದ್ದಾರೆ.

ಬೆಂಗಳೂರು: ರಾಜ್ಯದಲ್ಲಿ ಕೋವಿಡ್ -19 ಲಾಕ್‌ಡೌನ್ ಅನ್ನು ಮೇ 3 ರವರೆಗೆ ವಿಸ್ತರಿಸಲು ಕರ್ನಾಟಕ ಕ್ಯಾಬಿನೆಟ್ ನಿರ್ಧರಿಸಿದೆ ಎಂದು ಕಾನೂನು ಸಚಿವ ಜೆ ಸಿ ಮಾಧುಸ್ವಾಮಿ ಹೇಳಿದ್ದಾರೆ.

ಇಂದಿನಿಂದ ಐಟಿ-ಬಿಟಿ ಕಂಪನಿ ತೆರೆಯಲಿದೆ ಎಂದು ಹೇಳಲಾಗಿತ್ತು. ಆದರೆ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಐಟಿ-ಬಿಟಿ ಕಂಪನಿಗಳ ಪುನಾರಂಭಕ್ಕೆ ಅನುಮತಿ ನೀಡಬಾರದೆಂದು ತೀರ್ಮಾನಿಸಲಾಗಿದೆ ಎಂದು ಮಾಧುಸ್ವಾಮಿ ಹೇಳಿದ್ದಾರೆ. ಅಲ್ಲದೆ ಮೇ 3ರ ತನಕ ಲಾಕ್‍ಡೌನ್ ಯಥಾಸ್ಥಿತಿಯಲ್ಲಿ ಮುಂದುವರಿಯಲಿದೆ. ಹಾಗಾಗಿ ಯಾವುದೇ ವಿನಾಯಿತಿ ಇರುವುದಿಲ್ಲ ಎಂದು ಅವರು ವಿವರಿಸಿದರು.

ಕೇರಳ, ಉತ್ತರ ಪ್ರದೇಶ ಮಾದರಿಯಲ್ಲಿ ಲಾಕ್ ಡೌನ್ ಜಾರಿಗೆ ತರಲು ಸಂಪುಟ ಸಭೆ ತೀರ್ಮಾನಿಸಿದ್ದು, ನಾಳೆಯಿಂದ ಇನ್ನಷ್ಟು ಕಠಿಣ ಕಾನೂನು ಜಾರಿಗೆ ತರಲಾಗುತ್ತದೆ. ಕೇಂದ್ರ ಸರ್ಕಾರದಿಂದ ಮಾರ್ಗಸೂಚಿ ಬಂದ ನಂತರವಷ್ಟೇ ಲಾಕ್ ಡೌನ್ ಸಡಿಲಿಕೆ ಸಂಬಂಧ ಮುಂದಿನ ನಿರ್ಧಾರ ತೆಗೆದುಕೊಳ್ಳಲಿದ್ದೇವೆ ಎಂದು ಸಚಿವರು ಸ್ಪಷ್ಟಪಡಿಸಿದ್ದಾರೆ.

ಇದೇ ವೇಳೆ ಪಾದರಾಯನಪುರ ಪ್ರಕರಣದ ವಿರುದ್ಧ ಸರ್ಕಾರ ಕಠಿಣ ಕ್ರಮ ತೆಗೆದುಕೊಳ್ಳಲಿದೆ ಎಂದು ಸಚಿವರು ಹೇಳಿದ್ದಾರೆ.

ರಾಜ್ಯದಲ್ಲಿ ಇಂದು ಮತ್ತೆ ಐದು ಕೊರೋನಾ ಪ್ರಕರಣ ದಾಖಲಾಗಿದ್ದು, ಒಟ್ಟಾರೆ 395 ಕೊರೋನಾ ಸೋಂಕಿತ ಪ್ರಕರಣ ವರದಿಯಾಗಿದೆ. ರಾಜ್ಯದಲ್ಲಿ 16 ಮಂದಿ ಕೊರೋನಾ ಮಹಾಮಾರಿಗೆ ಬಲಿಯಾಗಿದ್ದಾರೆ.
 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇಂಡೋ-ಪೆಸಿಫಿಕ್‌ನಲ್ಲಿ ಶಾಂತಿ, ಸ್ಥಿರತೆ-ಸಮೃದ್ಧಿಗೆ ‘ವಿಶ್ವಾಸಾರ್ಹ ಪಾಲುದಾರಿಕೆ’ ಅಗತ್ಯ: Quad ಸಭೆಯಲ್ಲಿ ಜೈಶಂಕರ್‌ ಮಹತ್ವದ ಕರೆ..!

‘ಸ್ವಯಂ ರಕ್ಷಣೆ’ ಹೆಸರಿನಲ್ಲಿ ಇರಾನ್ ಕ್ಷಿಪಣಿ ಉಡಾವಣೆ ತಾಣಗಳ ಮೇಲೆ ಅಮೆರಿಕಾ ವಾಯುದಾಳಿ: ಟ್ರಂಪ್ ದ್ವಿಮುಖ ನಡೆ ವಿರುದ್ಧ ಟೀಕೆ, ಮಧ್ಯಪ್ರಾಚ್ಯದಲ್ಲಿ ಪರಿಸ್ಥಿತಿ ಮತ್ತೆ ಉದ್ವಿಗ್ನ..!

ತಮಿಳುನಾಡು ಸರ್ಕಾರದಿಂದ ಮತ್ತೊಂದು ಮಹತ್ವದ ಘೋಷಣೆ: ಸಣ್ಣ ರೈತರ ₹50,000 ವರೆಗಿನೆ ಬೆಳೆ ಸಾಲ ಮನ್ನಾ!

ಸತತ 4ನೇ ಬಾರಿ CNG ದರ ಏರಿಕೆ: ಕೆಜಿಗೆ 2 ರೂ. ಹೆಚ್ಚಳ, ವಾಹನ ಸವಾರರಿಗೆ ಶಾಕ್‌

ಗೃಹಲಕ್ಷ್ಮಿ ಯೋಜನೆಯಲ್ಲಿ 100 ಕೋಟಿ ರೂ.ದುರ್ಬಳಕೆ: ಫಲಾನುಭವಿಗಳ ಮರುಪರಿಶೀಲನೆಗೆ ಸರ್ಕಾರ ಚಿಂತನೆ..!

SCROLL FOR NEXT