ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜ್ಯ

ಸಿಇಟಿ-ಎನ್ಇಟಿ-ನೀಟ್ ಪರೀಕ್ಷೆಗೆ 'ಗೆಟ್‌ಸೆಟ್‌ಗೊ' ಆ್ಯಪ್ ಮೂಲಕ ತರಬೇತಿ

ಕೊರೋನಾ‌ ಸೋಂಕಿನಿಂದಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ಪ್ರಸಕ್ತ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ) ಮತ್ತು ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ(ಎನ್‌ಇಇಟಿ–ನೀಟ್)ಯನ್ನು ಅನಿರ್ದಿಷ್ಟಾವಧಿಗೆ ಮುಂದೂಡಿಕೆಯಾಗಿದ್ದು, ಪರೀಕ್ಷೆಗೆ ತಯಾರಿ ನಡೆಸುತ್ತಿರುವ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ರಾಜ್ಯ ಸರ್ಕಾರ ಆನ್‌ಲೈನ್‌ ಮೂಲಕ ತರಬೇತಿ ನೀಡಲು ಮುಂದಾಗ

ಸಾಂದರ್ಭಿಕ ಚಿತ್ರ
Lingaraj Badiger
Updated On : 20 Apr 2020, 6:54 pm

ಬೆಂಗಳೂರು: ಕೊರೋನಾ‌ ಸೋಂಕಿನಿಂದಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ಪ್ರಸಕ್ತ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ) ಮತ್ತು ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ(ಎನ್‌ಇಇಟಿ–ನೀಟ್)ಯನ್ನು ಅನಿರ್ದಿಷ್ಟಾವಧಿಗೆ ಮುಂದೂಡಿಕೆಯಾಗಿದ್ದು, ಪರೀಕ್ಷೆಗೆ ತಯಾರಿ ನಡೆಸುತ್ತಿರುವ ವಿದ್ಯಾರ್ಥಿಗಳ ಅನುಕೂಲಕ್ಕಾಗಿ ರಾಜ್ಯ ಸರ್ಕಾರ ಆನ್‌ಲೈನ್‌ ಮೂಲಕ ತರಬೇತಿ ನೀಡಲು ಮುಂದಾಗಿದೆ. ವಿದ್ಯಾರ್ಥಿಗಳಿಗಾಗಿ ತಂತ್ರಜ್ಞಾನ ಆಧರಿತ ‘ಗೆಟ್‌ಸೆಟ್‌ಗೊ’ಆ್ಯಪ್ ಬಿಡುಗಡೆಗೊಳಿಸಿದೆ.

ಉನ್ನತ ಶಿಕ್ಷಣ ಸಚಿವ ಅಶ್ವತ್ಥ ನಾರಾಯಣ ಮಾತನಾಡಿ, ಕೊರೋನಾ ವೈರಸ್ ಸೋಂಕಿನಿಂದ ಸಿಇಟಿ ಮತ್ತು ನೀಟ್ ಪರೀಕ್ಷೆಗೆ ತೊಂದರೆ ಆಗಿದೆ. ವಿದ್ಯಾರ್ಥಿಗಳ ನೆರವಿಗಾಗಿ ಸರ್ಕಾರ ಕಾರ್ಯಕ್ರಮ ರೂಪಿಸಿ, ಆನ್ಲೈ‌ನ್ ತರಬೇತಿ ಕೊಡಲು ನಿರ್ಧರಿಸಲಾಗಿದೆ ಎಂದರು.

ತಂತ್ರಜ್ಞಾನ ದಲ್ಲಿ ಕರ್ನಾಟಕ ಮುಂದಿದೆ. ಗೆಟ್ ಸೆಟ್ ಗೋ ಇನ್ ಮೂವ್ ಆ್ಯಪ್ ನಲ್ಲಿ ವಿದ್ಯಾರ್ಥಿಗಳು ಎಲ್ಲ ರೀತಿಯ ವಿವರ ಪಡೆಯಬಹುದು. ಭಾರತದಲ್ಲಿ ಹೆಚ್ಚು ಸೀಟ್ ಪಡೆಯಲು ಅನುಕೂಲ ಆಗುವ ರೀತಿಯಲ್ಲಿ ತರಬೇತಿ ನೀಡಲಾಗುವುದು ಎಂದರು.

Advertisement

Advertisement

ತರಬೇತಿಗೆ ಸುಮಾರು 20 ಸಾವಿರ ರೂ.ತರಬೇತಿ ಶುಲ್ಕ ಖರ್ಚಾಗುತ್ತದೆ. ಆದರೆ ಸರ್ಕಾರ ಶುಲ್ಕ ರಹಿತವಾಗಿ ಉಚಿತ ತರಬೇತಿ ಶಿಕ್ಷ‌‌ಣ‌ ನೀಡುತ್ತಿದೆ. ಇದರಿಂದ 1,91,000 ವಿದ್ಯಾರ್ಥಿಗಳು ಇದರ ಅನುಕೂಲ ಪಡೆಯುತ್ತಿದ್ದಾರೆ ಎಂದು‌ ಸಚಿವರು ಸ್ಪಷ್ಟಪಡಿಸಿದರು.

'ಗೆಟ್‌ಸೆಟ್‌ಗೊ' ಇದು ಸಿಂಚು ಇನ್ಫೊಟೆಕ್ ಮತ್ತು ದೀಕ್ಷಾ ಆನ್‌ಲೈನ್ ಪರೀಕ್ಷೆಗೆ ಪೂರಕವಾದ ಎಲ್ಲ ಕಲಿಕಾ ವಿಷಯಗಳನ್ನು ಒಳಗೊಂಡ ವೆಬ್ ಪೋರ್ಟಲ್ ಮತ್ತು ಆ್ಯಂಡ್ರಾಯ್ಡ್‌ ಆ್ಯಪ್‌ ಆಗಿದ್ದು, ವೆಬ್ ಪೋರ್ಟಲ್ ಮತ್ತು ಗೂಗಲ್‌ ಪ್ಲೇಸ್ಟೋರ್‌ನಲ್ಲಿ‌‌ ಡೌನ್‌ ಲೋಡ್ ಮಾಡಿಕೊಳ್ಳಬಹುದಾಗಿದೆ.

ಪರೀಕ್ಷೆ ಬರೆಯಲು ನೋಂದಣಿ ಮಾಡಿಸಿರುವ ಎಲ್ಲ ವಿದ್ಯಾರ್ಥಿಗಳಿಗೆ ಈ ಯೋಜನೆ ಉಚಿತವಾಗಿ ಲಭ್ಯವಾಗಲಿದೆ ಎಂದವರು ತಿಳಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments