ಕಾಪು: ಉಚ್ಚಿಲ ಸಮೀಪ ಭೀಕರ ರಸ್ತೆ ಅಪಘಾತ, ಲಾರಿ ಚಾಲಕ ಸ್ಥಳದಲ್ಲೇ ಮೃತ್ಯು 
ರಾಜ್ಯ

ಕಾಪು: ಉಚ್ಚಿಲ ಸಮೀಪ ಭೀಕರ ರಸ್ತೆ ಅಪಘಾತ, ಲಾರಿ ಚಾಲಕ ಸ್ಥಳದಲ್ಲೇ ಸಾವು

ಭೀಕರ ರಸ್ತೆ ಅಪಘಾತದಲ್ಲಿ ಲಾರಿ ಚಾಲಕನೊಬ್ಬ ಮೃತಪಟ್ಟ ಘಟನೆ ಉಡುಪಿ ಜಿಲ್ಲೆ ಕಾಪುವಿನ ಸಮೀಪ ಉಚ್ಚಿಲದಲ್ಲಿ ನಡೆದಿದೆ. ಉಚ್ಚಿಲದ ರಾಷ್ಟ್ರೀಯ ಹ್ಯೆದ್ದಾರಿ-66ರಲ್ಲಿ ಸಂಭವಿಸಿದ ಅಪಘಾತದಲ್ಲಿ ಲಾರಿ ಮತ್ತೊಂದು ಲಾರಿಗೆಢಿಕ್ಕಿಯಾಗಿದೆ.

ಕಾಪು: ಭೀಕರ ರಸ್ತೆ ಅಪಘಾತದಲ್ಲಿ ಲಾರಿ ಚಾಲಕನೊಬ್ಬ ಮೃತಪಟ್ಟ ಘಟನೆ ಉಡುಪಿ ಜಿಲ್ಲೆ ಕಾಪುವಿನ ಸಮೀಪ ಉಚ್ಚಿಲದಲ್ಲಿ ನಡೆದಿದೆ. ಉಚ್ಚಿಲದ ರಾಷ್ಟ್ರೀಯ ಹ್ಯೆದ್ದಾರಿ-66ರಲ್ಲಿ ಸಂಭವಿಸಿದ ಅಪಘಾತದಲ್ಲಿ ಲಾರಿ ಮತ್ತೊಂದು ಲಾರಿಗೆಢಿಕ್ಕಿಯಾಗಿದೆ.

ಉಡುಪಿ-ಮಂಗಳುರು ರಸ್ತೆಯಲ್ಲಿ ಮೈದಾಹಿಟ್ಟು ಸಾಗಿಸುತ್ತಿದ್ದ ಲಾರಿ ಕೆಟ್ಟು ನಿಂತಿದ್ದು ಇದಕ್ಕೆ ಈರುಳ್ಳಿ ಸಾಗಿಸುತ್ತಿದ್ದ ಲಾರಿ ಹಿಂದಿನಿಂದ ಬಂದು ಢಿಕ್ಕಿಯಾಗಿದೆ. ಈ ವೇಳೆ ಲಾರಿ ರಿಪೇರಿ ಮಾಡುತ್ತಿದ್ದ ಹುಬ್ಬಳ್ಳಿ ಮೂಲದ ಚಾಲಕ ಮಹಂತೇಶ್ ಗಂಭೀರ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇದೇ ವೇಳೆ ಇನ್ನೊಂದು ಲಾರಿ ಚಾಲಕ ಸಹ ಗಾಯಗೊಂಡಿದ್ದಾಗಿ ಪೋಲೀಸ್ ಮೂಲಗಳು ಹೇಳಿದೆ.

ಅಪಘಾತದ ತೀವ್ರತೆಗೆ ಕೆಟ್ಟು ನಿಂತ ಲಾರಿ ಡಿವೈಡರ್ ದಾಟಿ ರಸ್ತೆಯ ಇನ್ನೊಂದು ಬದಿಗೆ ಉರುಳಿದೆ. ಢಿಕ್ಕಿ ಹೊಡೆದಲಾರಿ ಸಹ ಪಲ್ಟಿಯಾಗಿದೆ. ಮಂಗಳವಾರ  ಮುಂಜಾನೆ 4 ಗಂಟೆಗೆ ಈ ಅವಘಡ ಸಂಭವಿಸಿದ್ದು ಘಟನೆ ಕುರಿತಂತೆ ಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Iran war: ಅಲಿ ಖಮೇನಿ ಪುತ್ರ ಮೊಜ್ತಾಬಾ ಖಮೇನಿ ಇರಾನ್ ನೂತನ ಪರಮೋಚ್ಛ ನಾಯಕರಾಗಿ ಆಯ್ಕೆ

ಇರಾನ್‌ನ ಮುಂದಿನ ಸರ್ವೋಚ್ಚ ನಾಯಕ ಯಾರೇ ಆದರೂ ಅವರನ್ನು ನಿರ್ಮೂಲನೆ ಮಾಡುತ್ತೇವೆ: ಇಸ್ರೇಲ್ ಬೆದರಿಕೆ

ರೋಚಕ ಎನಿಸುವ ಇರಾನ್ ಸಮರಾಂಗಣದ ವಿಶ್ಲೇಷಣೆಗಳ ಅಸಲಿಯತ್ತೇನು? (ತೆರೆದ ಕಿಟಕಿ)

US-Israel Iran War: ಉದ್ವಿಗ್ನತೆ ಮತ್ತಷ್ಟು ಹೆಚ್ಚಾಗಿದ್ದೇ ಆದರೆ, ರಾಜ್ಯದ ಆರ್ಥಿಕತೆ ಮೇಲೆ ಭಾರೀ ಹೊಡೆತ..!

Israel Iran war: ಭಾರತಕ್ಕೆ ಬಿಗ್ ಶಾಕ್, ಕತಾರ್ ನಿಂದ ಕೈಗಾರಿಕೆಗಳಿಗೆ ಅನಿಲ ಸರಬರಾಜು ಕಡಿತ!

SCROLL FOR NEXT