ಪ್ರತ್ಯಕ್ಷ ದೃಶ್ಯ 
ರಾಜ್ಯ

ನಾಗಮಂಗಲ: ಲಾಕ್ ಡೌನ್ ನಡುವೆ ಕಾರ್‌ನಲ್ಲಿ ಅಕ್ರಮ ಮದ್ಯ ಸಾಗಾಟ, ಮೂವರ ಬಂಧನ

ಕಾರಿನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಮದ್ಯವನ್ನು ವಶಕ್ಕೆ ಪಡೆದಿರುವ ನಾಗಮಂಗಲ ಪೊಲೀಸರು ಮೂವರನ್ನು ಬಂಧಿಸಿದ್ದಾರೆ.

ನಾಗಮಂಗಲ: ಕಾರಿನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಮದ್ಯವನ್ನು ವಶಕ್ಕೆ ಪಡೆದಿರುವ ನಾಗಮಂಗಲ ಪೊಲೀಸರು ಮೂವರನ್ನು ಬಂಧಿಸಿದ್ದಾರೆ.

ಚನ್ನಪಟ್ಟಣ ತಾಲ್ಲೂಕಿನ ಮಾಕಳ್ಳಿ ಗ್ರಾಮದ ಹರೀಶ್ ಗೌಡ, ಸಂದೀಪ್, ದಾವಣಗೆರೆಯ ಕ್ಯಾಶಿನಕೆರೆಯ ಸೋಮಶೇಖರ್ ಎಂಬುವವರೇ ಬಂಧಿತ ಆರೋಪಿಗಳಾಗಿದ್ದಾರೆ.

ಇಂದು ಸಂಜೆ 4.45 ರ ಸಮಯದಲ್ಲಿ ನಾಗಮಂಗಲ ಟೌನ್ ಜೆವರ್ಗಿ-ಚಾಮರಾಜನಗರ ರಾಷ್ಟ್ರೀಯ ಹೆದ್ದಾರಿ 150 ರಲ್ಲಿ ನಿರ್ಮಿಸಿರುವ ಚೆಕ್ ಪೋಸ್ಟ್ ನಲ್ಲಿ ಪಿ.ಎಸ್.ಐ ರವಿಕಿರಣ್ ಮತ್ತು ಸಿಬ್ಬಂದಿ ವಾಹನ ತಪಾಸಣೆ ನಡೆಸಿದ ವೇಳೆ ಬೆಳ್ಳೂರು ಕಡೆಯಿಂದ ಬರುತ್ತಿದ್ದ ಸ್ವಿಪ್ಟ್ ಕಾರ್(ಕೆಎ;53 ಎಂಬಿ.6899)ನ್ನು ತಪಾಸಣೆ ನಡೆಸಿದಾಗ 5 ಬಾಕ್ಸ್ ನಲ್ಲಿದ್ದ ಸುಮಾರು 60 ಬಾಟಲ್ ಬಿಯರ್ ಪತ್ತೆಯಾಗಿದೆ.

ತಕ್ಷಣವೇ ಈ ಮೂವರನ್ನು ಬಂಧಿಸಿದ  ಪೊಲೀಸರು ಕಾರನ್ನು ವಶಕ್ಕೆ ಪಡೆದುಕೊಂಡು ಪ್ರಕರಣ ದಾಖಲಿಸಿ ಮುಂದಿನ ಕ್ರಮಕೈಗೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!

ಕೊಡಗಿನಲ್ಲಿ ಭಾರಿ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು, ತಲಕಾವೇರಿಯಲ್ಲೂ ದಾಖಲೆಯ ವರ್ಷಧಾರೆ!

'ಹನೂರು ಎನ್‌ಕೌಂಟರ್': ತಮಿಳುನಾಡು ವಿಧಾನಸಭೆಯಲ್ಲಿ ಪ್ರಸ್ತಾಪಿಸಿದ ಉದಯನಿಧಿ ಸ್ಟಾಲಿನ್! ಉನ್ನತ ಮಟ್ಟದ ನ್ಯಾಯಾಂಗ ತನಿಖೆಗೆ ಆಗ್ರಹ

SIR ವೇಳೆ 1.08 ಕೋಟಿಗೂ ಅಧಿಕ ಮತದಾರರು ASDDO ಪಟ್ಟಿಗೆ: ಆಕ್ಷೇಪಣೆ ಸಲ್ಲಿಕೆ ಅವಧಿ ವಿಸ್ತರಿಸಬೇಕು- CECಗೆ ಸಿಎಂ ಶಿವಕುಮಾರ್ ಪತ್ರ!