ರಾಜ್ಯ

ಜಮೀರ್ ಅಹಮ್ಮದ್ ಗೂ ಶೀಘ್ರ ಕ್ವಾರಂಟೈನ್: ಸಚಿವ ಶ್ರೀರಾಮುಲು

Lingaraj Badiger

ಬಳ್ಳಾರಿ: ಕೋವಿಡ್ 19 ಸೋಂಕು ನಿಯಂತ್ರಣ ವಿಚಾರದಲ್ಲಿ ಸಹಕಾರ ನೀಡದೇ ದುರ್ವರ್ತನೆ ತೋರಿರುವ ಹಾಗೂ ಸೋಂಕಿತ ಮಹಿಳೆಯ ಅಂತ್ಯ ಸಂಸ್ಕಾರದಲ್ಲಿ ಭಾಗವಹಿಸಿದ್ದ ಮಾಜಿ ಸಚಿವ, ಚಾಮರಾಜಪೇಟೆ ಶಾಸಕ ಜಮೀರ್ ಅಹಮ್ಮದ್ ಅವರನ್ನು ಶೀಘ್ರ ಕ್ವಾರೆಂಟೈನ್ ಗೆ ಒಳಪಡಿಸಲಾಗುವುದು ಎಂದು ಆರೋಗ್ಯ ಸಚಿವ ಬಿ. ಶ್ರೀರಾಮುಲು ಅವರು ಹೇಳಿದ್ದಾರೆ.

ಮಾರ್ಗ ಸೂಚಿ ಪ್ರಕಾರ ಜಮೀರ್ ಅವರನ್ನು ಕ್ವಾರಂಟೈನ್ ಗೆ ಒಳಪಡಿಸುವ ಅಗತ್ಯವಿದ್ದು, ಈ ಪ್ರಕ್ರಿಯೆ ಶೀಘ್ರ ಆರಂಭವಾಗಲಿದೆ ಎಂದಿದ್ದಾರೆ.

ನಗರದಲ್ಲಿ‌ ಸುದ್ದಿಗಾರರೊಂದಿಗೆ ಮಾತನಾಡಿದ ಅವರು. ಕೊರೋನಾ ವೈರಸ್ ನಿಯಂತ್ರಣ ವಿಚಾರದಲ್ಲಿ ಜಾತಿ, ಧರ್ಮ, ಬಡವರು, ಶ್ರೀಮಂತರು ಎಂಬ ಯಾವುದೇ ತಾರತಮ್ಯವಿಲ್ಲ. ಸೋಂಕು ನಿಯಂತ್ರಣವೇ ಎಲ್ಲರ ಗುರಿಯಾಗಬೇಕು. ಇಂತಹ ಸಂದರ್ಭದಲ್ಲಿ ಶಾಸಕ ಜಮೀರ್ ಅವರು ಪಾದರಾಯನಪುರದಲ್ಲಿ ಗಲಾಟೆ ಮಾಡಿದವರ ಪರವಾಗಿ ಮಾತನಾಡಿದ್ದು ಸರಿಯಲ್ಲ ಎಂದರು.

ನಿನ್ನೆಷ್ಟೇ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರು, ಪಾದರಾಯನಪುರದ ಘಟನೆಗೆ ಸಂಬಂಧಿಸಿದಂತೆ ಶಾಸಕ ಜಮೀರ್ ಅಹ್ಮದ್ ಅವರ ಪಾತ್ರ ಏನು ಎಂಬುದು ಕುರಿತು ತನಿಖೆ ನಡೆಸಲಾಗುವುದು.‌ ಇನ್ನು, ಅಗತ್ಯವಿದ್ದಲ್ಲಿ, ಜಮೀರ್ ಅವರನ್ನು ಕೂಡ ಕ್ವಾರಂಟೈನ್ ಗೆ ಒಳಪಡಿಸಲಾಗುವುದು ಎಂದು ಹೇಳಿದ್ದರು.

SCROLL FOR NEXT