ಸಾಂದರ್ಭಿಕ ಚಿತ್ರ 
ರಾಜ್ಯ

ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿಯ ಉದ್ಯೋಗಿಗೆ 14 ದಿನ ಕ್ವಾರಂಟೈನ್‍

ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕೆಲಸ ಮಾಡುತ್ತಿರುವ ಸಿಬ್ಬಂದಿಯೊಬ್ಬರನ್ನು ಮುಂಜಾಗ್ರತಾ ಕ್ರಮವಾಗಿ ನಗರದಲ್ಲಿ ಬುಧವಾರ ಕ್ವಾರಂಟೈನ್‍ಗೆ ಕಳುಹಿಸಲಾಗಿದೆ. 

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕೆಲಸ ಮಾಡುತ್ತಿರುವ ಸಿಬ್ಬಂದಿಯೊಬ್ಬರನ್ನು ಮುಂಜಾಗ್ರತಾ ಕ್ರಮವಾಗಿ ನಗರದಲ್ಲಿ ಬುಧವಾರ ಕ್ವಾರಂಟೈನ್‍ಗೆ ಕಳುಹಿಸಲಾಗಿದೆ. 

ಜಿಲ್ಲಾಧಿಕಾರಿ ಕಚೇರಿಯ ಈ ಉದ್ಯೋಗಿ, ವೆನ್ಲಾಕ್ ಆಸ್ಪತ್ರೆಯಲ್ಲಿ ಕೊರೋನಾ ವೈರಸ್‌ನಿಂದ ಇತ್ತೀಚೆಗೆ ಸಾವನ್ನಪ್ಪಿದ ಬಂಟ್ವಾಳ ಮೂಲದ ಮಹಿಳೆಯ ದೂರದ ಸಂಬಂಧಿಯಾಗಿದ್ದಾರೆ ಎನ್ನಲಾಗಿದ್ದು, ಈ ಹಿನ್ನೆಲೆಯಲ್ಲಿ ಅವರನ್ನು 14 ದಿನಗಳ ಕ್ವಾರಂಟೈನ್ ಗೆ ಕಳುಹಿಸಲಾಗಿದೆ.

ವರದಿಗಳ ಪ್ರಕಾರ, ಮಹಿಳೆಗೆ ಚಿಕಿತ್ಸೆ ನೀಡುತ್ತಿದ್ದ ವೈದ್ಯರನ್ನು ಜಿಲ್ಲಾಧಿಕಾರಿ ಉದ್ಯೋಗಿ ಭೇಟಿಯಾಗಿದ್ದಾರೆ. ಅಲ್ಲದೆ, ಅವರ ಆರೋಗ್ಯ ಸ್ಥಿತಿಯ ಬಗ್ಗೆ ಏಪ್ರಿಲ್ 18 ರಂದು ವಿಚಾರಿಸಿದ್ದರು. ಆದರೆ, ಆಸ್ಪತ್ರೆಯಲ್ಲಿದ್ದಾಗ ಮತ್ತು ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ ಮಹಿಳೆಯನ್ನು ಉದ್ಯೋಗಿ ಭೇಟಿ ಮಾಡಿರಲಿಲ್ಲ.

ಆದರೂ, ಮುನ್ನೆಚ್ಚರಿಕೆ ಕ್ರಮವಾಗಿ 14 ದಿನಗಳ ಕಾಲ ಉದ್ಯೋಗಿಯನ್ನು ಕ್ವಾರಂಟೈನ್ ಕಳುಹಿಸಲು ಜಿಲ್ಲಾಧಿಕಾರಿ ಕಚೇರಿ ನಿರ್ಧರಿಸಿದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ರಾಮಚಂದ್ರ ಬಯಾರಿ ತಿಳಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧವೇ ಸ್ಟಿಂಗ್ ಆಪರೇಷನ್ ಮಾಡಿ ಟ್ರ್ಯಾಪ್​ ಮಾಡಲು ಯತ್ನ': ಡಿ ಕೆ ಶಿವಕುಮಾರ್ ಸ್ಫೋಟಕ ಆರೋಪ; Video

'Evil Dead': ನಟ ನಾನಾ ಪಾಟೇಕರ್ ಸಾವು, #MeToo ಆರೋಪ ಮಾಡಿದ್ದ ನಟಿ ತನುಶ್ರೀ ದತ್ತಾ ಹೇಳಿದ್ದೇನು? ವಿಚಿತ್ರ ಪೋಸ್ಟ್!

'SIR' ವಿರುದ್ಧ ಭಾರೀ ಪ್ರತಿಭಟನೆ: ಜ್ಞಾನೇಶ್ ಕುಮಾರ್ Z+ ಭದ್ರತೆ ಮತ್ತಷ್ಟು ಹೆಚ್ಚಿಸಿದ ಕೇಂದ್ರ ಸರ್ಕಾರ!

ಚಲಿಸುತ್ತಿದ್ದ ಬಸ್`ನಲ್ಲೇ ವೃದ್ಧನ 'ಮೈ ಬಿಸಿ ಏರಿಸಿ', 1 ಕೋಟಿ ರೂ ಮೌಲ್ಯದ ಚಿನ್ನ ಎಗರಿಸಿದ 'ಖತರ್ನಾಕ್ ಕಳ್ಳಿಯರು', Video

ಕಾವೇರಿ ವಿಚಾರದಲ್ಲಿ ಕರ್ನಾಟಕಕ್ಕೆ CWRC ಮತ್ತೆ ಶಾಕ್: ತಮಿಳುನಾಡಿಗೆ ನಿತ್ಯ 3,000 ಕ್ಯೂಸೆಕ್ ನೀರು ಹರಿಸಲು ಸೂಚನೆ