ಪಾದರಾಯನಪುರದಲ್ಲಿ ಸಂಪೂರ್ಣ ಸೀಲ್ ಡೌನ್ ನಡುವೆ ಕಳ್ಳರ ಕೈಚಳಕ, ಪೊಲೀಸ್ ಪೇದೆಗಳಿಬ್ಬರ ಮೊಬೈಲ್ ಕಳವು
ಕರ್ತವ್ಯ ನಿರತ ಪೊಲೀಸ್ ಪೇದೆಗಳಿಬ್ಬರ ಮೊಬೈಲ್ ಫೋನ್ ಅನ್ನು ಕಳ್ಳರು ಎಗರಿಸಿ ಪರಾರಿಯಾಗಿದ್ದಾರೆ.
ಬೆಂಗಳೂರು: ಕರ್ತವ್ಯ ನಿರತ ಪೊಲೀಸ್ ಪೇದೆಗಳಿಬ್ಬರ ಮೊಬೈಲ್ ಫೋನ್ ಅನ್ನು ಕಳ್ಳರು ಎಗರಿಸಿ ಪರಾರಿಯಾಗಿದ್ದಾರೆ.
ಸಂಪೂರ್ಣ ಸೀಲ್ ಡೌನ್ ಆಗಿರುವ ನಗರದ ಪಾದರಾಯನಪುರದಲ್ಲಿ ಕಳ್ಳರು ತಮ್ಮ ಕೈಚಳಕ ತೋರಿಸಿದ್ದಾರೆ. ಭದ್ರತೆಯಲ್ಲಿ ತೊಡಗಿದ್ದ, ಪೊಲೀಸ್ ಪೇದೆಗಳಿಬ್ಬರ ಮೊಬೈಲ್ ಕಳವು ಮಾಡಿ ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ.
ಸೀಲ್ ಡೌನ್ ಇದ್ದರೂ, ಅನವಶ್ಯಕವಾಗಿ ರಸ್ತೆಯಲ್ಲಿ ಓಡಾಡುತ್ತಿದ್ದ ಸ್ಥಳೀಯರನ್ನು ತಡೆದು ಪೊಲೀಸರು ವಾಪಸ್ಸು ಕಳುಹಿಸುತ್ತಿದ್ದಾಗ ಕೆಲವರು ಪೊಲೀಸರ ಜೊತೆ ವಾಗ್ವಾದಕ್ಕೆ ಮುಂದಾಗಿದ್ದಾರೆ.
ಈ ಸಂದರ್ಭದಲ್ಲಿ ಪೇದೆಗಳಿಬ್ಬರ ಮೊಬೈಲ್ ಫೋನ್ ಅನ್ನು ಕದ್ದು ಕಳ್ಳ ಪರಾರಿಯಾಗಿದ್ದಾನೆ.
ಸದ್ಯ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಕಳ್ಳತನ ನಡೆದ ಸ್ಥಳದ ಸಿಸಿಟಿವಿ ಪರಿಶೀಲನೆ ನಡೆಸಿ, ಕಳ್ಳರ ಬಂಧನಕ್ಕಾಗಿ ಬಲೆ ಬೀಸಿದ್ದಾರೆ.