ಸಂಗ್ರಹ ಚಿತ್ರ 
ರಾಜ್ಯ

ಬಾಗಲಕೋಟೆ: ಲಾಕ್ ಡೌನ್ ಖಾಸಗಿ ಆಸ್ಪತ್ರೆಗಳು ಬಂದ್, ಚಿಕಿತ್ಸೆ ಸಿಗದೇ ಗರ್ಭಿಣಿ ಸಾವು

ಸೂಕ್ತ ಚಿಕಿತ್ಸೆ ಸಿಗದೇ ಗರ್ಭಿಣಿ ಮಹಿಳೆ ಸಾವನ್ನಪ್ಪಿದ ಘಟನೆ ಜಿಲ್ಲೆಯ ಜಮಖಂಡಿ ತಾಲೂಕು ಕಡಪಟ್ಟಿಯಲ್ಲಿ ನಡೆದಿದೆ.

ಬಾಗಲಕೋಟೆ: ಸೂಕ್ತ ಚಿಕಿತ್ಸೆ ಸಿಗದೇ ಗರ್ಭಿಣಿ ಮಹಿಳೆ ಸಾವನ್ನಪ್ಪಿದ ಘಟನೆ ಜಿಲ್ಲೆಯ ಜಮಖಂಡಿ ತಾಲೂಕು ಕಡಪಟ್ಟಿಯಲ್ಲಿ ನಡೆದಿದೆ.

ಲಾಕ್‌ಡೌನ್ ಹಿನ್ನೆಲೆಯಲ್ಲಿ ಬಹುತೇಕ ಖಾಸಗಿ ಆಸ್ಪತ್ರೆಗಳು ಬಂದ್ ಆಗಿದ್ದು, ಅಂಬುಲೆನ್ಸ್ನಲ್ಲಿ ಗರ್ಭಿಣಿ ಮಹಿಳೆಯನ್ನು ಹೊತ್ತುಕೊಂಡು ಜಮಖಂಡಿ ನಗರದಲ್ಲಿ ಅಲೆದಾಟ ನಡೆಸಿದಾಗ ಸೂಕ್ತ ಚಿಕಿತ್ಸೆ ಸಿಗಲಿಲ್ಲ ಎನ್ನುವ ಆರೋಪ ಕೇಳಿ ಬಂದಿದೆ.

ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಸಿಗದ ಹಿನ್ನೆಲೆಯಲ್ಲಿ ಮಹಿಳೆಯನ್ನು ಜಮಖಂಡಿ ತಾಲೂಕು ಆಸ್ಪತ್ರೆಗೆ ಕರೆದುಕೊಂಡು ಹೋದಾಗ ಅಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ, ವಿಜಯಪುರದ ಖಾಸಗಿ ಆಸ್ಪತ್ರೆಗೆ ರವಾನಿಸಲಾಗಿತ್ತು.  

ವಿಜಯಪುರಕ್ಕೆ ಹೊರಟ ವೇಳೆ ಮಾರ್ಗ ಮಧ್ಯೆ ಗರ್ಬಿಣಿ ಮಹಿಳೆ ಮೃತಪಟ್ಟಿದ್ದಾರೆ. ಗರ್ಬಿಣಿ ಮಹಿಳೆ ಫಿಡ್ಸ್ನಿಂದ ಬಳಲುತ್ತಿದ್ದಳು ಎನ್ನಲಾಗುತ್ತಿದೆ. ಮೃತ ಮಹಿಳೆಯನ್ನು ರೂಪಾ ಹೊಸಮನಿ(23) ಎಂದು ಗುರುತಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್ ಇನ್ನಿಲ್ಲ

"ಜೀವಕ್ಕೆ ಕುತ್ತು ತರುವ ಹಾದಿ": ರಷ್ಯಾ ಸೇನಾ ನೇಮಕಾತಿ ಆಮಿಷಗಳಿಗೆ ಬಲಿಯಾಗದಂತೆ ನಾಗರಿಕರಿಗೆ ಭಾರತ ಕಟ್ಟುನಿಟ್ಟಿನ ಸೂಚನೆ, 69 ಭಾರತೀಯರ ಬಿಡುಗಡೆಗೆ ಪಟ್ಟು..!

CM ಡಿ.ಕೆ. ಶಿವಕುಮಾರ್‌ಗಾಗಿ IndiGo flight ಲೇಟ್? VVIP ಸಂಸ್ಕೃತಿ ವಿರುದ್ಧ ಪ್ರಯಾಣಿಕರ ಆಕ್ರೋಶ..!

ಬರಗಾಲದ ಬೆನ್ನಲ್ಲೇ ಬೆಲೆ ಏರಿಕೆ ಬರೆ: ಮಧ್ಯಮ ವರ್ಗದವರಿಗೆ ಆರ್ಥಿಕ ಹೊಡೆತ, ಅಕ್ಕಿ ದರ ಗಗನಕ್ಕೆ..!

ಬರ ಎಫೆಕ್ಟ್: ರೈತರ ನೆರವಿಗೆ ಧಾವಿಸಿದ ಸರ್ಕಾರ; 1,250 ಕೋಟಿ ರೂ. ಮೊದಲ ಕಂತು ಬಿಡುಗಡೆ..!