ಅನಿತಾ ಕುಮಾರಸ್ವಾಮಿ 
ರಾಜ್ಯ

ರಾಮನಗರ ರಕ್ಷಿಸಿ ಇಲ್ಲದಿದ್ದರೆ ಬೀದಿಗಿಳಿಯುವೆ: ಶಾಸಕಿ ಅನಿತಾ ಕುಮಾರಸ್ವಾಮಿ

ರಾಮನಗರ: ಬೆಂಗಳೂರಿನ ಪಾದರಾಯನಪುರದ ಗಲಭೆಕೋರರನ್ನು ರಾಮನಗರ ಕಾರಾಗೃಹಕ್ಕೆ ಸ್ಥಳಾಂತರಿಸುವ ಮೂಲಕ ರಾಜ್ಯ ಸರ್ಕಾರ ಅಕ್ಷಮ್ಯ ಅಪರಾಧವೆಸಗಿದೆ ಎಂದು ಶಾಸಕಿ ಅನಿತಾ ಕುಮಾರಸ್ವಾಮಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ 

ರಾಮನಗರ: ರಾಮನಗರ: ಬೆಂಗಳೂರಿನ ಪಾದರಾಯನಪುರದ ಗಲಭೆಕೋರರನ್ನು ರಾಮನಗರ ಕಾರಾಗೃಹಕ್ಕೆ ಸ್ಥಳಾಂತರಿಸುವ ಮೂಲಕ ರಾಜ್ಯ ಸರ್ಕಾರ ಅಕ್ಷಮ್ಯ ಅಪರಾಧವೆಸಗಿದೆ ಎಂದು ಶಾಸಕಿ ಅನಿತಾ ಕುಮಾರಸ್ವಾಮಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ

ತಕ್ಷಣವೇ ರಾಮನಗರ ಕಾರಾಗೃಹದಲ್ಲಿ ಇರಿಸಲಾಗಿರುವ ಪಾದರಾಯನಪುರ ಗಲಭೆಕೋರರನ್ನು ಬೇರೆಡೆಗೆ ಸ್ಥಳಾಂತರಿಸಿ ರಾಮನಗರ ಜಿಲ್ಲೆಯ ಜನತೆಯ ಆತಂಕವನ್ನು ದೂರ ಮಾಡಬೇಕು ಎಂದು ಆಗ್ರಹಿಸಿದ್ದಾರೆ.

ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಅವರು ಮುಂದಾಗಬಹುದಾದ ಅನಾಹುತದ ಬಗ್ಗೆ ಸರ್ಕಾರಕ್ಕೆ ಮೊದಲೇ ಕಿವಿ ಹಿಂಡಿದ್ದರು. ಜಾಣಕಿವುಡು ಪ್ರದರ್ಶಿಸಿದ ರಾಜ್ಯಸರ್ಕಾರ ಕೊರೋನ ಸೋಂಕನ್ನು ಜಿಲ್ಲೆಗೆ ಹಂಚಿದ್ದು ಸರೀನಾ ? ಇದರ ಹಿಂದೆ ಕಾಣದ ಕೈಗಳ ಷಡ್ಯಂತ್ರವಿದೆ ಎಂದು ಅನಿತಾ ಕುಮಾರಸ್ವಾಮಿ ಆರೋಪಿಸಿದ್ದಾರೆ.

ಜಿಲ್ಲಾ ಉಸ್ತುವಾರಿ ಸಚಿವ, ಉಪಮುಖ್ಯಮಂತ್ರಿ ಹಾಗೂ ವೈದ್ಯರು ಆಗಿರುವ ಡಾಕ್ಟರ್ ಅಶ್ವಥ್ ನಾರಾಯಣ ಅವರು ಹಾರಿಕೆಯ ಹೇಳಿಕೆಗಳ ನೀಡುವುದು ಬಿಟ್ಟು ಜವಾಬ್ದಾರಿತನದಿಂದ ವರ್ತಿಸಲಿ. ವಾಸ್ತವ ಸ್ಥಿತಿಯನ್ನು ಅರಿತು ಪ್ರತಿಕ್ರಿಯಿಸಲಿ. ಜಿಲ್ಲೆಯ ಜನತೆಯೊಂದಿಗೆ ಚೆಲ್ಲಾಟ ಮಾಡುವುದನ್ನು ಬಿಡಲಿ ಎಂದು ಅನಿತಾ ಕುಮಾರಸ್ವಾಮಿ ಕಿಡಿಕಾರಿದ್ದಾರೆ.

ಸರ್ಕಾರದ ಬೇಜವಾಬ್ದಾರಿತನವನ್ನು ಇನ್ನು ಸಹಿಸಿಕೊಳ್ಳಲು ಸಾಧ್ಯವಿಲ್ಲ. ತಕ್ಷಣ  ಖೈದಿಗಳನ್ನು ಬೇರೆಡೆಗೆ ಸ್ಥಳಾಂತರಿಸಿ, ಜಿಲ್ಲೆಯಾದ್ಯಂತ ಕೊರೋನಾ ಸೋಂಕು ಹರಡದಂತೆ ಅಗತ್ಯ ವೈದ್ಯಕೀಯ ಮುನ್ನೆಚ್ಚರಿಕೆ ವಹಿಸಬೇಕು. ಇಲ್ಲದಿದ್ದರೆ ಬೀದಿಗಿಳಿದು ಜಿಲ್ಲೆಯ ಜನತೆಯ ಸ್ವಾಸ್ಥ್ಯ ಕಾಪಾಡಿಕೊಳ್ಳಲು ಹೋರಾಟ ಅನಿವಾರ್ಯ ಎಂದು ಅನಿತಾ ಕುಮಾರಸ್ವಾಮಿ ಎಚ್ಚರಿಸಿದ್ದಾರೆ.

ರಾಮನಗರ ಜೈಲಿನಲ್ಲಿ ಇರಿಸಲಾದ ಖೈದಿಗಳಲ್ಲಿ ಇಬ್ಬರಿಗೆ ಮಾತ್ರವಲ್ಲದೆ ಇತರ ಕೆಲವರಿಗೂ ಕರೋನಾ ಹಬ್ಬಿರುವ ಮಾಹಿತಿ ಇದೆ. ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಹೇಳಿಕೆಯಲ್ಲಿ ಆಗ್ರಹಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT