ಬಂಧನ (ಸಾಂದರ್ಭಿಕ ಚಿತ್ರ) 
ರಾಜ್ಯ

ವಿಜಯಪುರ: ಸಾಮಾಜಿಕ ಜಾಲತಾಣದಲ್ಲಿ ಕೊರೋನಾ ಸೋಂಕಿತಳ ಫೋಟೋ ಹರಿಬಿಟ್ಟ ಆರೋಪಿ ಬಂಧನ!

ಕೊರೋನಾ ಪಾಸಿಟಿವ್ ಸೋಂಕಿತಳ ಭಾವಚಿತ್ರವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟ ಆರೋಪದ ಮೇರೆಗೆ ವಿಜಯಪುರದಲ್ಲಿ ವ್ಯಕ್ತಿಯೋರ್ವನನ್ನು ಪೊಲೀಸರು ಬಂಧಿಸಿದ್ದಾರೆ.

ವಿಜಯಪುರ: ಕೊರೋನಾ ಪಾಸಿಟಿವ್ ಸೋಂಕಿತಳ ಭಾವಚಿತ್ರವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟ ಆರೋಪದ ಮೇರೆಗೆ ವಿಜಯಪುರದಲ್ಲಿ ವ್ಯಕ್ತಿಯೋರ್ವನನ್ನು ಪೊಲೀಸರು ಬಂಧಿಸಿದ್ದಾರೆ.

ಕೊರೋನಾ ಸೋಂಕಿತರ ಹೆಸರು ಹಾಗೂ ಭಾವಚಿತ್ರವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡಬಾರದೆಂದು ಸರ್ಕಾರದ ಸ್ಪಷ್ಟ ಆದೇಶವಿದ್ದರೂ. ಅದರ ಉಲ್ಲಂಘನೆ ಪ್ರಕರಣಗಳು ಮುಂದುವರೆಯುತ್ತಲೇ ಇದೆ. ಇದಕ್ಕೆ ಹೊಸ ಸೇರ್ಪಡೆ ಎಂಬಂತೆ ವಿಜಯಪುರದ ವ್ಯಕ್ತಿಯೋರ್ವ  ಸಾಮಾಜಿಕ ಜಾಲತಾಣದಲ್ಲಿ ಕೊರೋನಾ ಪಾಸಿಟಿವ್ ಸೋಂಕಿತಳ ಭಾವಚಿತ್ರವನ್ನು ಹರಿಬಿಟ್ಟ ಪೊಲೀಸರ ಅತಿಥಿಯಾಗಿದ್ದಾನೆ.

ಪೊಲೀಸ್ ಮೂಲಗಳ ಪ್ರಕಾರ ತಾಲೂಕಿನ ಮಕಣಾಪುರ ತಾಂಡೆ ನಂ. 2 ರ ನಿವಾಸಿ ಅನೀಲ ಬಾಬು ರಾಠೋಡ (24 ವರ್ಷ) ಬಂಧಿತ ಆರೋಪಿಯಾಗಿದ್ದು, ಶುಕ್ರವಾರ ಒಬ್ಬರಿಗೆ ಸೋಂಕು ಪಾಸಿಟಿವ್ ಆಗಿದ್ದನ್ನು ಈತ ತನ್ನ ಮೊಬೈಲ್ ಮೂಲಕ ಹರಿಬಿಟ್ಟಿದ್ದಾನೆ. ಖಾಸಗಿ ಸಂಸ್ಥೆಯ  ಮೆಡಿಕಲ್ ಕಾಲೇಜ್‍ನಲ್ಲಿ ಎಂಡಿ ವಿದ್ಯಾರ್ಥಿನಿಗೆ ಕೊರೊನಾ ಸೋಂಕು ದೃಢಪಟ್ಟಿದೆ ಎಂದು ಹೇಳಿಕೊಂಡಿದ್ದಾನೆ. ಆಕೆ ತನ್ನ ಗೆಳತಿಯರೊಂದಿಗೆ ಇದ್ದ ಭಾವಚಿತ್ರವನ್ನು ವಾಟ್ಸಪ್ ಸ್ಟೇಟಸ್ ನಲ್ಲಿ ಅಪ್‍ಲೋಡ್ ಮಾಡುವ ಮೂಲಕ ಗೊಂದಲದ ವಾತಾವರಣ ಸೃಷ್ಟಿಸಿದ್ದ ಎಂದು ವಿಜಯಪುರ ಎಸ್ಪಿ ಅನುಪಮ ಅಗರ್ವಾಲ್ ಹೇಳಿದ್ದಾರೆ. ಪ್ರಸ್ತುತ ಈತನ ವಿರುದ್ಧ ಆದರ್ಶನಗರ ಠಾಣೆಯಲ್ಲಿ ಐಪಿಸಿ ಸೆಕ್ಷನ್ 188, 505[2], 354[ಡಿ] ಐಪಿಸಿ ಅಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತೀಯರ ಸಾಮೂಹಿಕೆ ಹತ್ಯೆಗೆ ಸಂಚು: ರೈಫಲ್ ಹಿಡಿದು ಅಮೆರಿಕದ ಹಿಂದೂ ದೇವಸ್ಥಾನಕ್ಕೆ ನುಗ್ಗಿದ್ದ ಶೂಟರ್; ಕೊನೆ ಕ್ಷಣದಲ್ಲಿ ಗನ್ ಜಾಮ್, ಆರೋಪಿ ಬಂಧನ..!

ಶೃಂಗೇರಿ ಮತ ಎಣಿಕೆ Video ನಾಪತ್ತೆ: ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ತರಾಟೆ..!

ಕೇರಳಂ: ಮಿನಿ ಕೂಪರ್ ಕಾರು ಅಪಘಾತದಲ್ಲಿ ಮೂವರ ಸಾವು, ತಡರಾತ್ರಿಯಲ್ಲಿ ಹಿಂದೂ ಯುವತಿಯರು ಹೊರಗೆ ಹೋಗಿದ್ಯಾಕೆ? ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆ

ಸ್ಥಳೀಯ ಸಂಸ್ಥೆಗಳಿಗೂ ಜಿಎಸ್‌ಟಿ ಆದಾಯ ಹಂಚಿಕೆ: GST ಮಂಡಳಿಗೆ ರಾಜ್ಯ ಸರ್ಕಾರ ಪ್ರಸ್ತಾವನೆ

ಸ್ಟಿಂಗ್‌ ಆಪರೇಷನ್‌ ಬಗ್ಗೆ ಬೇರೆಯವರು ಮಾತನಾಡುವ ಆಗಿಲ್ಲ ಎನ್ನಲು ನೀವೇನು ಸರ್ವಾಧಿಕಾರಿಯೇ ಪ್ರಿಯಾಂಕ್‌ ಖರ್ಗೆ..?