ಸಾಂದರ್ಭಿಕ ಚಿತ್ರ 
ರಾಜ್ಯ

ಬೆಂಗಳೂರಿನಲ್ಲಿ ಕೊರೋನಾಗೆ ಗರ್ಭಿಣಿ ಮಹಿಳೆ ಬಲಿ, ರಾಜ್ಯದಲ್ಲಿ ಸಾವಿನ ಸಂಖ್ಯೆ 19ಕ್ಕೆ ಏರಿಕೆ

ಕರ್ನಾಟಕದಲ್ಲಿ ಕೊರೋನಾ ಮರಣ ಮೃದಂಗ ಮುಂದುವರಿಸಿದ್ದು, ಕೊವಿಡ್-19ಗೆ ಭಾನುವಾರ ಬೆಂಗಳೂರಿನಲ್ಲಿ ಗರ್ಭಿಣಿ ಮಹಿಳೆಯೊಬ್ಬರು ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸಾವಿನ ಸಂಖ್ಯೆ 19ಕ್ಕೆ ಏರಿಕೆಯಾಗಿದೆ.

ಬೆಂಗಳೂರು: ಕರ್ನಾಟಕದಲ್ಲಿ ಕೊರೋನಾ ಮರಣ ಮೃದಂಗ ಮುಂದುವರಿಸಿದ್ದು, ಕೊವಿಡ್-19ಗೆ ಭಾನುವಾರ ಬೆಂಗಳೂರಿನಲ್ಲಿ ಗರ್ಭಿಣಿ ಮಹಿಳೆಯೊಬ್ಬರು ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸಾವಿನ ಸಂಖ್ಯೆ 19ಕ್ಕೆ ಏರಿಕೆಯಾಗಿದೆ.

ಬೆಂಗಳೂರಿನ ಕೊವಿಡ್-19 ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ 45 ವರ್ಷದ ಮಹಿಳೆ ಇಂದು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಮಹಿಳೆ, ರೋಗಿ ನಂಬರ್ 465 ಆಗಿದ್ದು, ಏಪ್ರಿಲ್ 24ರಂದು ಕೊವಿಡ್-19 ಆಸ್ಪತ್ರೆಗೆ ದಾಖಲಾಗಿದ್ದರು. ಅವರನ್ನು ಏಪ್ರಿಲ್ 25ರಂದು ಐಸಿಯುಗೆ ಶಿಫ್ಟ್ ಮಾಡಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಇಂದು ಮೃತಪಟ್ಟಿದ್ದಾರೆ ಎಂದು ಜಿಲ್ಲಾ ಆರೋಗ್ಯ ಅಧಿಕಾರಿ ಡಾ. ಶ್ರೀನಿವಾಸ್ ಅವರು ತಿಳಿಸಿದ್ದಾರೆ.

ಈ ಮಹಿಳೆ ರಕ್ತಸ್ರಾವ ಮತ್ತುಉಸಿರಾಟದ ಸಮಸ್ಯೆಯಿಂದ ಮೂಡಲಪಾಳ್ಯದ ಹೆರಿಗೆ ಆಸ್ಪತ್ರೆಗೆ ದಾಖಲಾಗಿದ್ದರು. ಅವರಿಗೆ ಕೊವಿಡ್-19 ಪಾಸಿಟಿವ್ ಬಂದ ನಂತರ ಆ ಆಸ್ಪತ್ರೆಯನ್ನು ಬಂದ್ ಮಾಡಲಾಗಿದೆ ಎಂದು ಬಿಬಿಎಂಪಿ ಆರೋಗ್ಯ ಆಯುಕ್ತ ರವಿಕುಮಾರ್ ಸುರಪುರ್ ಅವರು ಹೇಳಿದ್ದಾರೆ.

ಈ ಮಧ್ಯೆ ಸೋಂಕಿತರ ಸಂಖ್ಯೆಯೂ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಇಂದು ಮತ್ತೆ ಒಬ್ಬರಿಗೆ ಕೊವಿಡ್-19 ಪಾಸಿಟಿವ್ ದೃಢಪಟ್ಟಿದ್ದು, ಇದರೊಂದಿಗೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 501ಕ್ಕೆ ಏರಿಕೆಯಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕೋಲ್ಕತ್ತಾದ ಹೊಟೇಲ್ ನಲ್ಲಿ ಭೀಕರ ಅಗ್ನಿ ಅವಘಡ: 9 ಮಂದಿ ಸಾವು, 6 ಜನರಿಗೆ ಗಾಯ-Video

Pak ಬಣ್ಣ ಬಯಲು: ಕಾಶ್ಮೀರ ರಕ್ತದೋಕುಳಿಗೆ 10,000 ಉಗ್ರರ ರವಾನಿಸಿದ್ದ: Hafiz Saeed ಪಾಪಕೃತ್ಯ ಬಹಿರಂಗಪಡಿಸಿದ ಮೌಲ್ವಿ, Video ವೈರಲ್

ಸಾಮಾಜಿಕ ಭದ್ರತಾ ಪಿಂಚಣಿ ಯೋಜನೆ: ನಕಲಿ ಪಿಂಚಣಿದಾರರಿಗೆ ಸರ್ಕಾರ ಶಾಕ್; 18 ಲಕ್ಷ ಖಾತೆಗಳು ತಾತ್ಕಾಲಿಕ ಸ್ಥಗಿತ, ವಂಚನೆಯಲ್ಲಿ ಬೆಂಗಳೂರೇ ನಂ.1..!

ತಮಿಳುನಾಡು ಜನತೆಗೆ CM ವಿಜಯ್ ಬಂಪರ್‌ ಗಿಫ್ಟ್;‌ ಸರ್ಕಾರಿ ನೌಕರರಿಗೆ 3ನೇ ಮಗುವಿಗೂ 1 ವರ್ಷ ಮಾತೃತ್ವ ರಜೆ; ಆರೋಗ್ಯ ವಿಮೆ 25 ಲಕ್ಷ ರೂ.ಗೆ ಹೆಚ್ಚಳ!

ಪುಣೆಯಲ್ಲಿ ಘೋರ ಕೃತ್ಯ: 9 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ; ಯುವಕನ ಬಂಧನ!