ರಾಜ್ಯ

ಕಡ್ಡಾಯವಾಗಿ ವ್ಯಕ್ತಿಗತ ಅಂತರ ಕಾಯ್ದುಕೊಳ್ಳೋಣ-ಬಿಎಸ್ ಯಡಿಯೂರಪ್ಪ

Nagaraja AB

ಬೆಂಗಳೂರು:ಕೋವಿಡ್-19 ಸೋಂಕಿನಿಂದ ರಕ್ಷಿಸಿಕೊಳ್ಳಲು ಮತ್ತು ಇತರರಿಗೆ ಹರಡುವುದನ್ನು ತಡೆಗಟ್ಟಲು, ಎಲ್ಲರೂ ವ್ಯಕ್ತಿಗತ ಅಂತರ ಕಾಯ್ದುಕೊಳ್ಳುವುದೇ ಏಕೈಕ ಮಾರ್ಗ ಎಂದು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹೇಳಿದ್ದಾರೆ

ಹಾಗಾಗಿ, ಸಚಿವರು, ಸಂಸದರು, ಶಾಸಕರು ಹಾಗೂ ಅಧಿಕಾರಿ ವರ್ಗದವರು ಕಡ್ಡಾಯವಾಗಿ ಈ ನಿಯಮವನ್ನು ಅನುಸರಿಸುವ ಮೂಲಕ ಎಲ್ಲರಿಗೂ ಮಾದರಿಯಾಗಬೇಕು ಎಂದು ಯಡಿಯೂರಪ್ಪ ಸಲಹೆ ನೀಡಿದ್ದಾರೆ.

ಇದೇ ವೇಳೆ ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ಆಶಾ ಕಾರ್ಯಕರ್ತೆಯರ ಸಭೆ ನಡೆಸಿದ್ದ ಹೊನ್ನಾಳಿ ಕ್ಷೇತ್ರದ ಬಿಜೆಪಿ ಶಾಸಕ ಎಂ. ಪಿ. ರೇಣುಕಾಚಾರ್ಯಗೆ ಮುಖ್ಯಮಂತಿ ಬಿಎಸ್ ಯಡಿಯೂರಪ್ಪ ಇಂದು ದೂರವಾಣಿ ಮೂಲಕ ಕರೆ ಮಾಡಿ ತರಾಟೆಗೆ ತೆಗೆದುಕೊಂಡಿದ್ದಾರೆ ಎಂಬುದು ಮೂಲಗಳಿಂದ ತಿಳಿದುಬಂದಿದೆ. 

SCROLL FOR NEXT