ರಾಜ್ಯ

ಕೋರೋನಾ: ಚಿಕಿತ್ಸೆ ಪಡೆಯುತ್ತಿರುವ ಸೋಂಕಿತರಿಗೆ ಆಹಾರ, ಔಷಧಿ ನೀಡಲು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ರೊಬೋಟ್ ನಿಯೋಜನೆ

Manjula VN

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ವೈರಸ್ ಆರ್ಭಟ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ರೋಗಿಗಳಿಂದ ಇತರರಿಗೆ ಸೋಂಕು ಹರಡದಂತೆ ಮುಂಜಾಗ್ರತಾ ಕ್ರಮ ಕೈಗೊಂಡಿರುವ ಸರ್ಕಾರ, ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಸೋಂಕಿತರಿಗೆ ಆಹಾರ ಹಾಗೂ ಔಷಧಿಗಳನ್ನು ನೀಡಲು ರೊಬೋಟ್ ನಿಯೋಜಿಸಿದೆ. 

ನಿಯೋಜನೆಗೊಂಡಿರುವ ಈ ರೊಬೋಟ್ ಸೋಂಕಿತರ ಆಸುಪಾಸಿನಲ್ಲೇ ತಿರುಗಾಡಲಿದ್ದು, ಸಮಯಕ್ಕೆ ಸರಿಯಾಗಿ ರೋಗಿಗಳಿಗೆ ಔಷಧಿ ಹಾಗೂ ಆಹಾರವನ್ನು ನೀಡಲಿದೆ. ಇದರಿಂದ ಆಸ್ಪತ್ರೆಯ ಸಿಬ್ಬಂದಿಗಳಿಗೂ ಸೋಂಕು ತಗುಲುವುದು ನಿಯಂತ್ರಣಗೊಳ್ಳಲಿದೆ. 

ರಾಜ್ಯದಲ್ಲಿ ಈವರೆಗೂ 500 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, 18 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಸೋಂಕಿತ 500 ಮಂದಿಯ ಪೈಕಿ 158 ಮಂದಿ ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ. 

SCROLL FOR NEXT