ರಾಜ್ಯದಲ್ಲಿ ಕೊರೋನಾ ವೈರಸ್ 
ರಾಜ್ಯ

13 ವರ್ಷದ ಬಾಲಕ ಸೇರಿ 8 ಜನರಿಗೆ ಕೊರೋನಾ ಪಾಸಿಟಿವ್, ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 511ಕ್ಕೆ ಏರಿಕೆ

ಸೋಮವಾರ ರಾಜ್ಯದಲ್ಲಿ ಮತ್ತೆ ಎಂಟು ಮಂದಿಗೆ ಕೊರೋನಾ ದೃಢಪಟ್ಟಿದೆ. ಈ ವೇಳೆ ರಾಜ್ಯದ ಒಟ್ತಾರೆ ಸೋಂಕಿತರ ಸಾಂಖ್ಯೆ 511ಕ್ಕೆ ಏರಿದೆ. 

ಬೆಂಗಳೂರು: ಸೋಮವಾರ ರಾಜ್ಯದಲ್ಲಿ ಮತ್ತೆ ಎಂಟು ಮಂದಿಗೆ ಕೊರೋನಾ ದೃಢಪಟ್ಟಿದೆ. ಈ ವೇಳೆ ರಾಜ್ಯದ ಒಟ್ತಾರೆ ಸೋಂಕಿತರ ಸಾಂಖ್ಯೆ 511ಕ್ಕೆ ಏರಿದೆ.

ಬೆಂಗಳೂರು ನಗರದಲ್ಲಿ 13 ವರ್ಷದ ಬಾಲಕನಲ್ಲಿ ಕೊರೋನಾ ಸೋಂಕು ಪತ್ತೆಯಾಗಿದೆ. ಈತ ಜ್ವರದ ಲಕ್ಷಣಗಳಿಂದ ಆಸ್ಪತ್ರೆಗೆ ದಾಖಲಾಗಿದ್ದನು ಎಂದು ತಿಳಿದುಬಂದಿದೆ.

ಜೊತೆಗೆ, ಮಂಡ್ಯದಲ್ಲಿ 1, ದಕ್ಷಿಣ ಕನ್ನಡದಲ್ಲಿ 2, ಬಾಗಲಕೋಟೆಯ ಜಮಖಂಡಿಯಲ್ಲಿ 2 ಹಾಗೂ ವಿಜಯಪುರದಲ್ಲಿ 2 ಪ್ರಕರಣಗಳು ಪತ್ತೆಯಾಗಿವೆ.

ಮುಂಬೈಗೆ ಪ್ರಯಾಣ ಬೆಳೆಸಿದ್ದ ಇತಿಹಾಸ ಹೊಂದಿದ್ದ ಮಂಡ್ಯದ ನಾಗಮಂಗಲದ 50 ವರ್ಷದ ವ್ಯಕ್ತಿ, 432 ವರ್ಷದ ರೋಗಿಯೊಂದಿಗೆ ಸಂಪರ್ಕ ಹೊಂದಿದ್ದ ದಕ್ಷಿಣ ಕನ್ನಡ ಜಿಲ್ಲೆಯ 80 ವರ್ಷದ ಮಹಿಳೆ ಮತ್ತು 45 ವರ್ಷದ ವ್ಯಕ್ತಿಯಲ್ಲಿ ಸೋಂಕು ದೃಢಪಟ್ಟಿದೆ. 

ಬಾಗಲಕೋಟೆಯ ಜಮಖಂಡಿಯಲ್ಲಿ 32 ಮತ್ತು 21 ವರ್ಷದ ಮಹಿಳೆಯರಲ್ಲಿ ಸೋಂಕು ಪತ್ತೆಯಾಗಿದೆ. ವಿಜಯಪುರದ 45 ಹಾಗೂ 27 ವರ್ಷದ ವ್ಯಕ್ತಿಗಳಲ್ಲಿ ಸೋಂಕು ದೃಢಪಟ್ಟಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ. 

ಈ ನಡುವೆ, ಉಸಿರಾಟದ ತೊಂದರೆ ಹಾಗೂ ನ್ಯುಮೋನಿಯಾದಿಂದ ಆಸ್ಪತ್ರೆಗೆ ದಾಖಲಾಗಿದ್ದ 50 ವರ್ಷದ ಬೆಂಗಳೂರು ನಿವಾಸಿ ಇಂದು ವಿಕ್ಟೋರಿಯಾ ಆಸ್ಪತ್ರೆಯ ಕಟ್ಟಡದಿಂದ ಜಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಇಲಾಖೆ ಮಾಹಿತಿ ನೀಡಿದೆ.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 30 ಮಂದಿ ಸಾವು

ಬೂಕರ್ ಪ್ರಶಸ್ತಿ ಮಹತ್ವ ತಿಳಿದಿದ್ದರೆ ನನ್ನನ್ನು ಟೀಕಿಸುತ್ತಿರಲಿಲ್ಲ, ಸಾಹಿತ್ಯ ಸಮ್ಮೇಳನದ ವಿಡಿಯೋ ತಿರುಚಲಾಗಿದೆ: ಬಾನು ಮುಷ್ತಾಕ್

SCROLL FOR NEXT