ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜ್ಯ

ಕರ್ನಾಟಕದಲ್ಲಿ ಕೊರೋನಾ ಸೋಂಕಿಗೆ ಮತ್ತೊಂದು ಬಲಿ, 20ಕ್ಕೇರಿದ ಸಾವಿನ ಸಂಖ್ಯೆ!

ಲಾಕ್ ಡೌನ್ ನಡುವೆಯೂ ಕೊರೋನಾ ಮಹಾಮಾರಿ ಕರ್ನಾಕಟವನ್ನು ನಲುಗಿಸುತ್ತಿದೆ. ಹೌದು ಕಲಬುರಗಿಯಲ್ಲಿ ಕೊರೋನಾ ಸೋಂಕಿತ ವ್ಯಕ್ತಿ ಮೃತಪಟ್ಟಿದ್ದು ಸಾವಿನ ಸಂಖ್ಯೆ 20ಕ್ಕೇರಿದೆ.

ಸಂಗ್ರಹ ಚಿತ್ರ
Vishwanath S
Updated On : 27 Apr 2020, 7:43 pm

ಬೆಂಗಳೂರು: ಲಾಕ್ ಡೌನ್ ನಡುವೆಯೂ ಕೊರೋನಾ ಮಹಾಮಾರಿ ಕರ್ನಾಕಟವನ್ನು ನಲುಗಿಸುತ್ತಿದೆ. ಹೌದು ಕಲಬುರಗಿಯಲ್ಲಿ ಕೊರೋನಾ ಸೋಂಕಿತ ವ್ಯಕ್ತಿ ಮೃತಪಟ್ಟಿದ್ದು ಸಾವಿನ ಸಂಖ್ಯೆ 20ಕ್ಕೇರಿದೆ. 

ಅಳಂದದ ನಿವಾಸಿಯಾಗಿದ್ದ 57 ವರ್ಷದ ವ್ಯಕ್ತಿಗೆ ಏಪ್ರಿಲ್ 21ರಂದು ಕೊರೋನಾ ಪಾಸಿಟಿವ್ ಬಂದಿತ್ತು. ಉಸಿರಾಟದ ತೊಂದರೆಯಿಂದ GIMSಗೆ ದಾಖಲಾಗಿದ್ದು, ತೀವ್ರ ಯಕೃತ್ತಿನ ಸಮಸ್ಯೆಯಿಂದ ಬಳಲುತ್ತಿದ್ದು ಮೃತಪಟ್ಟಿದ್ದಾರೆ. 

ಇದರೊಂದಿಗೆ ಕಲಬುರಗಿ ಜಿಲ್ಲೆಯಲ್ಲಿ ಕೊರೋನಾಗೆ ಒಟ್ಟು ಐವರು ಸಾವನ್ನಪ್ಪಿದ್ದಾರೆ. 

Advertisement

Advertisement

ರಾಜ್ಯದಲ್ಲಿ ಇಂದು ಹೊಸದಾಗಿ ಒಂಬತ್ತು ಕೊರೋನಾವೈರಸ್ ಪ್ರಕರಣ ಪತ್ತೆಯಾಗಿದ್ದು, ಒಟ್ಟಾರೇ ಸೋಂಕಿತರ ಸಂಖ್ಯೆ 512ಕ್ಕೆ ಏರಿಕೆ ಆಗಿದೆ. ಇನ್ನು 20 ಮಂದಿ ಮೃತಪಟ್ಟಿದ್ದು, 193 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಚ್ ಆಗಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement