ಸಿದ್ದರಾಮಯ್ಯ 
ರಾಜ್ಯ

ಮದ್ಯದ ಅಂಗಡಿಗಳನ್ನು ತೆರೆಯಿರಿ: ಮಾಜಿ ಸಿಎಂ ಸಿದ್ದರಾಮ್ಯಯ ಆಗ್ರಹ

ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ಲಾಕ್ ಡೌನ್ ನಿಂದ ವಿನಾಯ್ತಿ ಘೋಷಿಸಿದ ಬೆನ್ನಲ್ಲೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮದ್ಯದ ಅಂಗಡಿಗಳನ್ನು ತೆರೆಯುವಂತೆ ರಾಜ್ಯ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ.

ಬೆಂಗಳೂರು: ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ಲಾಕ್ ಡೌನ್ ನಿಂದ ವಿನಾಯ್ತಿ ಘೋಷಿಸಿದ ಬೆನ್ನಲ್ಲೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಮದ್ಯದ ಅಂಗಡಿಗಳನ್ನು ತೆರೆಯುವಂತೆ ರಾಜ್ಯ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ. 

ಲಾಕ್ ಡೌನ್ ನಿಂದಾಗಿ ರಾಜ್ಯದಲ್ಲಿ ಆರ್ಥಿಕ ಸಮಸ್ಯೆ ಎದುರಾಗಿದೆ. ಅಬಕಾರಿ ಸುಂಕ ಬಂದರೆ ಹಣಕಾಸು ಸ್ಥಿತಿ ಸುಧಾರಿಸಲಿದೆ. ಹೀಗಾಗಿ ಷರತ್ತು ವಿಧಿಸಿ ಮದ್ಯದ ಅಂಗಡಿ ತೆರೆದರೆ ಉತ್ತಮ. ರಾಜ್ಯದ ಆರ್ಥಿಕ ದೃಷ್ಟಿಯಿಂದ ಈ ಸಲಹೆ ನೀಡುತ್ತಿರುವುದಾಗಿ ಸಿದ್ದರಾಮಯ್ಯ ತಿಳಿಸಿದ್ದಾರೆ. 

ರಾಜ್ಯದಲ್ಲಿ ಯಾವುದೇ ಕೋವಿಡ್ ಪ್ರಕರಣಗಳಿಲ್ಲದ ಜಿಲ್ಲೆಗಳಿಗೆ ಲಾಕ್ ಡೌನ್ ನಿಂದ ಬಹುತೇಕ ವಿನಾಯ್ತಿ ನೀಡಿ ರಾಜ್ಯ ಸರ್ಕಾರ ಬುಧವಾರ ಆದೇಶ ಹೊರಡಿಸಿದೆ. 

ಇದರಿಂದ 14 ಜಿಲ್ಲೆಗಳ ಜನರು 33 ದಿನಗಳ ಲಾಕ್ ಡೌನ್ ನಿಂದ ವಿನಾಯ್ತಿ ಪಡೆದು ನೆಮ್ಮದಿಯಾಗಿ ಉಸಿರಾಡುವಂತಾಗಿದೆ. ಆದರೆ, ವಿನಾಯ್ತಿಯಲ್ಲೂ ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳುವುದು ಕಡ್ಡಾಯ ಎಂದು ರಾಜ್ಯ ಸರ್ಕಾರ ಹೊರಡಿಸಿರುವ ಪರಿಷ್ಕೃತ ಮಾರ್ಗಸೂಚಿಗಳಲ್ಲಿ ಸ್ಪಷ್ಟಪಡಿಸಿದೆ. 

ರಾಜ್ಯದಲ್ಲಿ ಇಂದು ಹೊಸದಾಗಿ 11 ಪ್ರಕರಣಗಳು ಪತ್ತೆಯಾಗಿದ್ದು ಸೋಂಕಿತರ ಸಂಖ್ಯೆ 523ಕ್ಕೆ ಏರಿಕೆಯಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Asian Games 2026: ಫೈನಲ್ ನಲ್ಲಿ ಪಾಕಿಸ್ತಾನ ವಿರುದ್ಧ ಭಾರತಕ್ಕೆ ರೋಚಕ ಜಯ, ಮತ್ತೊಂದು ಚಿನ್ನದ ಪದಕ

ಮೈಸೂರು: ಕುಸಿದು ಬಿದ್ದ ದೀಪಾಲಂಕಾರದ ಬೃಹತ್ ಕಟೌಟ್; ವಿದ್ಯಾರ್ಥಿಗಳು ಪಾರು, ದಸರಾ ಆರಂಭದಲ್ಲೇ ತಪ್ಪಿದ ದೊಡ್ಡ ದುರಂತ!

'ಕಮಾಲ್ ಕರ್ ದಿಯಾ ಪೈಲಟ್ ಜಿ, ನಿಮ್ಮ ಧೈರ್ಯಕ್ಕೆ ನಮ್ಮ ಸೆಲ್ಯೂಟ್': ಕ್ಯಾಪ್ಟನ್ ಸ್ಮಿತ್ ಮಚ್ಚರ್'ರನ್ನು ಹಾಡಿ ಹೊಗಳಿದ ಸಲ್ಮಾನ್ ಖಾನ್!

Asian Games 2026: ಇತಿಹಾಸ ಬರೆದ ಮೈಸೂರಿನ ಪ್ರಣವಿ ಅರಸ್; ಚಿನ್ನ ಗೆದ್ದ ಮೊದಲ ಭಾರತೀಯ ಮಹಿಳಾ ಗಾಲ್ಫರ್

Dimple Queen: ಹುಟ್ಟುಹಬ್ಬದ ಸಂಭ್ರಮದಲ್ಲಿ ರಚಿತಾ ರಾಮ್ ಕೆನ್ನೆ ಗಿಂಡಿದ ಅಭಿಮಾನಿ! Video ವೈರಲ್