ರೇವಾ ವಿವಿ ಕುಲಾಧಿಪತಿ ಡಾ. ಪಿ.ಶ್ಯಾಮರಾಜು ವೆಂಟಿಲೇಟರ್ ಕುರಿತು ಮಾಹಿತಿ ನೀಡಿದರು 
ರಾಜ್ಯ

ರೇವಾ ವಿವಿ: 'ಜೀವ ಸೇತು' ಮೆಡಿಕಲ್ ವೆಂಟಿಲೇಟರ್ ಬಿಡುಗಡೆ

ರೇವಾ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಹಾಗೂ ಅಧ್ಯಾಪಕರು ಕೊರೊನಾ ಸೋಂಕಿತ ರೋಗಿಗಳಿಗೆ ಅನುಕೂಲವಾಗಲೆಂದು, ನೂತನವಾಗಿ ‘ಜೀವ ಸೇತು’ ಮೆಡಿಕಲ್ ವೆಂಟಿಲೇಟರ್ ಅನ್ನು ವಿನ್ಯಾಸಗೊಳಿಸಿ ಅಭಿವೃದ್ಧಿಪಡಿಸಿದ್ದಾರೆ.

ಬೆಂಗಳೂರು: ರೇವಾ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಹಾಗೂ ಅಧ್ಯಾಪಕರು ಕೊರೊನಾ ಸೋಂಕಿತ ರೋಗಿಗಳಿಗೆ ಅನುಕೂಲವಾಗಲೆಂದು, ನೂತನವಾಗಿ ‘ಜೀವ ಸೇತು’ ಮೆಡಿಕಲ್ ವೆಂಟಿಲೇಟರ್ ಅನ್ನು ವಿನ್ಯಾಸಗೊಳಿಸಿ ಅಭಿವೃದ್ಧಿಪಡಿಸಿದ್ದಾರೆ. ಇದನ್ನು ಶನಿವಾರ ಬಿಡುಗಡೆ ಮಾಡಲಾಯಿತು.

‘ಕೋವಿಡ್-19ರ ವಿರುದ್ಧ ಇಡೀ ದೇಶವೇ ಹೋರಾಡುತ್ತಿರುವ ಈ ಸಂದರ್ಭದಲ್ಲಿ ಸಮಾಜಕ್ಕೆ ಏನಾದರೂ ಕೊಡುಗೆ ನೀಡಬೇಕು ಎಂಬ ಉದ್ದೇಶ ನಮ್ಮದಾಗಿತ್ತು. ಈ ಕುರಿತು ವೈದ್ಯರೊಂದಿಗೆ ಚರ್ಚಿಸಿದಾಗ, ಉಸಿರಾಟದ ಸಮಸ್ಯೆ ನಿವಾರಣೆಗೆ ಅನುಕೂಲವಾಗುವ ವೆಂಟಿಲೇಟರ್‌ ಅಭಿವೃದ್ಧಿಪಡಿಸುವಂತೆ ಸಲಹೆ ನೀಡಿದರು. ನಮ್ಮ ವಿ.ವಿ ತಂಡ ಈ ನಿಟ್ಟಿನಲ್ಲಿ ಶ್ರಮಿಸಿ, ವೆಂಟಿಲೇಟರ್‌ ವಿನ್ಯಾಸಗೊಳಿಸಿದೆ’ ಎಂದು ವಿಶ್ವವಿದ್ಯಾಲಯದ ಕುಲಪತಿ ಡಾ. ಪಿ. ಶ್ಯಾಮರಾಜು ತಿಳಿಸಿದರು.

‘ಸದ್ಯಕ್ಕೆ ರೂ.35 ಸಾವಿರ ವೆಚ್ಚದಲ್ಲಿ ಎರಡು ವೆಂಟಿಲೇಟರ್‌ಗಳನ್ನು ಸಿದ್ಧಪಡಿಸಲಾಗಿದೆ. ಆರ್ಕಿಟೆಕ್ಚರ್, ಮೆಕಾನಿಕಲ್, ಎಲೆಕ್ಟ್ರಿಕಲ್ಸ್‌, ಎಲೆಕ್ಟ್ರಾನಿಕ್ಸ್‌ ಹಾಗೂ ಕಂಪ್ಯೂಟರ್‌ ಸೈನ್ಸ್‌ ವಿಭಾಗದ ವಿದ್ಯಾರ್ಥಿಗಳು ಒಗ್ಗೂಡಿ ಇದನ್ನು ಅಭಿವೃದ್ಧಿ ಪಡಿಸಿದ್ದು, ತಜ್ಞ ವೈದ್ಯರು ಪರೀಕ್ಷಿಸಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ’ ಎಂದರು. 

‘ಸಾಮಾಜಿಕ ಕಾರ್ಯ ಮಾಡುತ್ತಿರುವ ಆಸ್ಪತ್ರೆಗಳಿಗೆ ಕಡಿಮೆ ದರದಲ್ಲಿ ವೆಂಟಿಲೇಟರ್‌ ಪೂರೈಸಲು ಆದ್ಯತೆ ನೀಡಲಾಗುವುದು. ಭವಿಷ್ಯದಲ್ಲೂ ಈ ಸಾಧನ ಸಿದ್ಧಪಡಿಸುವ ಗುರಿ ಹೊಂದಲಾಗಿದೆ’ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಎಸ್ ಜಾನಕಿ ಇನ್ನಿಲ್ಲ: ದಕ್ಷಿಣ ಭಾರತದ ಗಾನ ಕೋಗಿಲೆ ಮೈಸೂರಿನಲ್ಲಿ ನಿಧನ!

5th T20I: ಬಟ್ಲರ್, ಬ್ರೂಕ್ ಅರ್ಭಟ; ಇಂಗ್ಲೆಂಡ್ ವಿರುದ್ಧ ಭಾರತಕ್ಕೆ ಹೀನಾಯ ಸೋಲು, ಸರಣಿ ವೈಟ್‌ವಾಶ್

ಖಿನ್ನತೆಗೆ ಜಾರಿದ್ದೆ, ಗುಣಪಡಿಸಲು ಮಗು ಮಾಡಿಕೊಳ್ಳಿ ಎಂದು ವೈದ್ಯರು ಹೇಳಿದ್ರು; ಹುಡುಗನ ಎಲ್ಲಿ ಹುಡುಕಲಿ?: Endometriosis ಭಯಾನಕತೆ ಬಿಚ್ಚಿಟ್ಟ ಶಮಿತಾ ಶೆಟ್ಟಿ

17 ಭಾಷೆಗಳಲ್ಲಿ 48 ಸಾವಿರ ಹಾಡುಗಳಿಗೆ ಧ್ವನಿ: 2013ರಲ್ಲಿ ಪದ್ಮಭೂಷಣ ತಿರಸ್ಕರಿಸಿದ್ದ ದಿಟ್ಟ ಗಾಯಕಿ ಎಸ್ ಜಾನಕಿ!

ಪುಣೆಯಲ್ಲಿ ತ್ಯಾಜ್ಯದ ಗುಡ್ಡ ಬಿದ್ದು ಕಟ್ಟಡ ಕುಸಿತ: 8 ಮಂದಿ ಸಾವು; 14 ಜನರ ರಕ್ಷಣೆ, ಒಬ್ಬರು ಇನ್ನೂ ನಾಪತ್ತೆ!