ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜ್ಯ

ಕೋವಿಡ್-19: ರಾಜ್ಯದಲ್ಲಿ ಮತ್ತೆ 9 ಮಂದಿಯಲ್ಲಿ ವೈರಸ್ ದೃಢ, ಸೋಂಕಿತರ ಸಂಖ್ಯೆ 532ಕ್ಕೆ ಏರಿಕೆ

ರಾಜ್ಯದಲ್ಲಿ ಕೊರೋನಾ ಪ್ರಭಾವ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದ್ದು, ಬುಧವಾರ ಮತ್ತೆ 9 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದ್ದು, ಒಟ್ಟಾರೆಯಾಗಿ ಸೋಂಕಿತರ ಸಂಖ್ಯೆ 532ಕ್ಕೆ ಏರಿಕೆಯಾಗಿದೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಸಂಗ್ರಹ ಚಿತ್ರ
Manjula VN
Updated On : 29 Apr 2020, 1:36 pm

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಪ್ರಭಾವ ದಿನದಿಂದ ದಿನಕ್ಕೆ ಏರಿಕೆಯಾಗುತ್ತಲೇ ಇದ್ದು, ಬುಧವಾರ ಮತ್ತೆ 9 ಮಂದಿಯಲ್ಲಿ ಹೊಸದಾಗಿ ಸೋಂಕು ಪತ್ತೆಯಾಗಿದ್ದು, ಒಟ್ಟಾರೆಯಾಗಿ ಸೋಂಕಿತರ ಸಂಖ್ಯೆ 532ಕ್ಕೆ ಏರಿಕೆಯಾಗಿದೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ. 

ಕಲಬುರಗಿ ಜಿಲ್ಲೆಯಲ್ಲಿಯೇ ದಿನದಿಂದ ದಿನಕ್ಕೆ ಕೊರೋನಾ ಆರ್ಭಟ ಹೆಚ್ಚಾಗುತ್ತಲೇ ಇದ್ದು, ನಿನ್ನೆಯಷ್ಟೇ ಈ ಜಿಲ್ಲೆಯಲ್ಲಿ 5 ಹೊಸ ಪ್ರಕರಣಗಳು ಬೆಳಕಿಗೆ ಬಂದಿತ್ತು. ಇದೀಗ ಕಲಬುರಗಿಯಲ್ಲಿ 4.6 ವರ್ಷದ ಹೆಣ್ಣು ಮಗು ಸೇರಿ ಮತ್ತೆ 8 ಪ್ರಕರಣಗಳು ಬೆಳಕಿಗೆ ಬಂದಿವೆ. ಕಲಬುರಗಿ ಜಿಲ್ಲೆಯಲ್ಲಿ ಮೂವರು ಪುರುಷರಲ್ಲಿ ಹಾಗೂ ಐವರು ಮಹಿಳೆಯರಲ್ಲಿ ವೈರಸ್ ದೃಢಪಟ್ಟಿದೆ. 

395ನೇ ರೋಗಿಯ ಸಂಪರ್ಕ ಹೊಂದಿದ್ದ 4.6 ವರ್ಷದ ಬಾಲಕಿ, 515ನೇ ರೋಗಿಯ ಸಂಪರ್ಕದಲ್ಲಿದ್ದು 28 ವರ್ಷದ ಯುವಕ, 425ನೇ ರೋಗಿಯ ಸಂಪರ್ಕದಲ್ಲಿದ್ದ 14 ವರ್ಷದ ಬಾಲಕಿ, 40 ವರ್ಷದ ಮಹಿಳೆ, 205ನೇ ರೋಗಿಯ ಸಂಪರ್ಕದಲ್ಲಿದ್ದ 22 ವರ್ಷದ ಯುವತಿ 20 ವರ್ಷದ ಯುವಕ, 17 ವರ್ಷದ ಯುವತಿ ಮತ್ತು 12 ವರ್ಷದ ಬಾಲಕಿಯಲ್ಲಿ ಸೋಂಕು ಕಾಣಿಸಿಕೊಂಡಿದೆ. 

Advertisement

Advertisement

ಇನ್ನು ಮತ್ತೊಂದು ಪ್ರಕರಣ ಬೆಳಗಾವಿಯ ಹುಕ್ಕೇರಿಯಲ್ಲಿ ದಾಖಲಾಗಿದೆ. 12 ವರ್ಷದ ಗಂಡು ಮಗುವಿನಲ್ಲಿ ವೈರಸ್ ದೃಢಪಟ್ಟಿದೆ.

ಈ ನಡುವೆ ಗುಣಮುಖರಾಗುತ್ತಿರುವ ಸಂಖ್ಯೆ ಕೂಡ ಏರಿಕೆಯಾಗಿದ್ದು, 245 ಮಂದಿ ಗುಣಮುಖರಾಗಿದ್ದಾರೆ ಮತ್ತು ಇಲ್ಲಿಯವರೆಗೆ 21 ಜನರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಸಚಿವರು ಮಾಹಿತಿ ನೀಡಿದ್ದಾರೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement