ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜ್ಯ

ಬೆಳ್ಳಂಬೆಳಗ್ಗೆ ಬೆಂಗಳೂರಿನಲ್ಲಿ ಮಳೆಗೆ ಒಂದೇ ಸ್ಥಳದಲ್ಲಿ ಎರಡು ಪ್ರತ್ಯೇಕ ಅಪಘಾತ

ವರುಣನ ಆರ್ಭಟಕ್ಕೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಬುಧವಾರ ಬೆಳಗ್ಗೆ ಎರಡು ಪ್ರತ್ಯೇಕ ಅಪಘಾತ ಸಂಭವಿಸಿದೆ. ಒಂದೇ ಸ್ಥಳದಲ್ಲಿ ಎರಡು ಪ್ರತ್ಯೇಕ ಅಪಘಾತ ಸಂಭವಿಸಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ವರದಿ ಆಗಿಲ್ಲ.

ಸಾಂದರ್ಭಿಕ ಚಿತ್ರ
Sumana Upadhyaya
Updated On : 29 Apr 2020, 2:57 pm

ಬೆಂಗಳೂರು: ವರುಣನ ಆರ್ಭಟಕ್ಕೆ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಬುಧವಾರ ಬೆಳಗ್ಗೆ ಎರಡು ಪ್ರತ್ಯೇಕ ಅಪಘಾತ ಸಂಭವಿಸಿದೆ. ಒಂದೇ ಸ್ಥಳದಲ್ಲಿ ಎರಡು ಪ್ರತ್ಯೇಕ ಅಪಘಾತ ಸಂಭವಿಸಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ವರದಿ ಆಗಿಲ್ಲ.

ನಾಗವಾರ-ಹೆಬ್ಬಾಳ‌ ರಿಂಗ್ ರಸ್ತೆಯಲ್ಲಿ ಎರಡು ಅಪಘಾತಗಳು ಸಂಭವಿಸಿದೆ. ಪೊಲೀಸ್ ಜೀಪ್ ಒಂದು ಟೈರ್ ಬ್ಲಾಸ್ಟ್ ಆಗಿ ಡಿವೈಡರ್ ಗೆ ಡಿಕ್ಕಿ ಹೊಡೆದರೆ, ಮತ್ತೊಂದೆಡೆ ಕ್ಯಾಂಟರ್ ಚಾಲ‌ಕ ನಿಯಂತ್ರಣ ತಪ್ಪಿ‌‌ ಡಿವೈಡರ್ ಗೆ ಡಿಕ್ಕಿ ಹೊಡೆದಿದ್ದಾರೆ ಎಂದು ತಿಳಿದು ಬಂದಿದೆ. ಸದ್ಯ ಪೊಲೀಸ್ ಸಿಬ್ಬಂದಿ ಲಾಕ್ ಡೌನ್ ಕರ್ತವ್ಯದಲ್ಲಿ ನಿರತಯಾಗಿರುವುದರಿಂದ ಇನ್ನು ತೆರವು ಕಾರ್ಯ ಆರಂಭವಾಗಬೇಕಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement