ಸಾಂದರ್ಭಿಕ ಚಿತ್ರ 
ರಾಜ್ಯ

55 ವರ್ಷ ಮೇಲ್ಪಟ್ಟ ಪೊಲೀಸ್‌ ಸಿಬ್ಬಂದಿ ಕೋವಿಡ್ ಕರ್ತವ್ಯಕ್ಕೆ ಬೇಡ: ಡಿಜಿಪಿ ಪ್ರವೀಣ್ ಸೂದ್ ಆದೇಶ

ಮಾಹಮಾರಿ ಕೊರೊನಾ ವೈರಸ್ ಹರಡದಂತೆ ತಡೆಯುವ ಕರ್ತವ್ಯ ಮತ್ತು ಇತರ ಕಾರ್ಯಾಚರಣೆಗಳಿಗೆ 55 ವರ್ಷ ಮೇಲ್ಪಟ್ಟ ಪೊಲೀಸ್ ಸಿಬ್ಬಂದಿಯನ್ನು ‌ನಿಯೋಜಿಸಬಾರದು ಎಂದು ರಾಜ್ಯ ಪೊಲೀಸ್ ಮಹಾನಿದೇಶಕ (ಡಿಜಿ- ಐಜಿಪಿ) ಪ್ರವೀಣ್ ಸೂದ್ ಆದೇಶ ಹೊರಡಿಸಿದ್ದಾರೆ.

ಬೆಂಗಳೂರು: ಮಾಹಮಾರಿ ಕೊರೊನಾ ವೈರಸ್ ಹರಡದಂತೆ ತಡೆಯುವ ಕರ್ತವ್ಯ ಮತ್ತು ಇತರ ಕಾರ್ಯಾಚರಣೆಗಳಿಗೆ 55 ವರ್ಷ ಮೇಲ್ಪಟ್ಟ ಪೊಲೀಸ್ ಸಿಬ್ಬಂದಿಯನ್ನು ‌ನಿಯೋಜಿಸಬಾರದು ಎಂದು ರಾಜ್ಯ ಪೊಲೀಸ್ ಮಹಾನಿದೇಶಕ (ಡಿಜಿ- ಐಜಿಪಿ) ಪ್ರವೀಣ್ ಸೂದ್ ಆದೇಶ ಹೊರಡಿಸಿದ್ದಾರೆ.

ಮಧುಮೇಹ, ರಕ್ತದೊತ್ತಡ, ಅಸ್ತಮಾ, ಕಿಡ್ನಿ ಹಾಗೂ ಯಕೃತ್ ಸಮಸ್ಯೆ, ಹೃದಯ ಸಂಬಂಧಿ ಕಾಯಿಲೆಯಿಂದ ಬಳಲುತ್ತಿರುವ ಸಿಬ್ಬಂದಿಯನ್ನು ಕೂಡ ಆರೋಗ್ಯದ ದೃಷ್ಟಿಯಿಂದ ರಸ್ತೆಯ ಮೇಲಿನ ತಪಾಸಣೆ ಮತ್ತಿತರ ಕರ್ತವ್ಯಗಳಿಗೆ ನಿಯೋಜಿಸಬಾರದು. ಅಂತಹ ಸಿಬ್ಬಂದಿಯನ್ನು ಪೊಲೀಸ್ ಠಾಣೆಯ ಒಳಗೆ ಅಥವಾ ಸುರಕ್ಷಿತ ಸ್ಥಳಗಳಲ್ಲಿ ಕರ್ತವ್ಯಕ್ಕೆ ಹಾಕಬೇಕು ಎಂದು ಪ್ರವೀಣ್ ಸೂದ್ ಆದೇಶದಲ್ಲಿ ತಿಳಿಸಿದ್ದಾರೆ.

ವಯಸ್ಸಾದವರನ್ನು ಹಾಗೂ ಕಾಯಿಲೆ ಇರುವವರನ್ನ ಕೋವಿಡ್ ಬಾಧಿಸುವುದು ಹೆಚ್ಚು. ಸಿಬ್ಬಂದಿಯ ಆರೋಗ್ಯ ಕಾಪಾಡುವುದು ನಮ್ಮ ಕೆಲಸವಾಗಿದೆ. ಹೀಗಾಗಿ 55 ವರ್ಷ ಮೇಲ್ಪಟ್ಟವರನ್ನ ರಸ್ತೆ,  ಚೆಕ್ ಪೋಸ್ಟ್ ಗಳಲ್ಲಿ ಕೋವಿಡ್ ಕರ್ತವ್ಯಕ್ಕೆ ಹಾಕಬಾರದು. ಸ್ಟೇಷನ್ ಒಳಗೆ ಅಥವಾ ಸುರಕ್ಷಿತ ಸ್ಥಳಗಳಲ್ಲಿ ಡ್ಯೂಟಿ ಒದಗಿಸಬೇಕು ಎಂದು ರಾಜ್ಯದ ಎಲ್ಲಾ ಪೊಲೀಸ್ ಠಾಣೆಯ ಹಿರಿಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಕಾವೇರಿ' ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್: ತಮಿಳುನಾಡಿಗೆ ನೀರು ಬಿಡಬೇಕೆಂಬ CWRC ಆದೇಶ ಎತ್ತಿಹಿಡಿದ CWMA

ಡಿಕೆಶಿ ಸಂಪುಟಕ್ಕೆ ಮತ್ತೆ ಸರ್ಜರಿ? ಭಾರಿ ಬದಲಾವಣೆ, 3-5 ಸಚಿವರಿಗೆ ಕೊಕ್?; ಮಹಿಳೆ ಸೇರಿ ಕೆಲ ರೆಬೆಲ್ ನಾಯಕರಿಗೆ ಅವಕಾಶ ಸಾಧ್ಯತೆ

2013ರ ಲೈಂಗಿಕ ದೌರ್ಜನ್ಯ ಪ್ರಕರಣ: Tehelka ಮಾಜಿ ಸಂಪಾದಕ ತರುಣ್ ತೇಜ್‌ಪಾಲ್‌ಗೆ ಸುಪ್ರೀಂ ಕೋರ್ಟ್‌ ಶಾಕ್‌; 2 ವಾರಗಳಲ್ಲಿ ಶರಣಾಗುವಂತೆ ಖಡಕ್ ಸೂಚನೆ..!

ವಿಮಾನ ಸುರಕ್ಷತೆಯಲ್ಲಿ ರಾಜಿಯಿಲ್ಲ: ಪೈಲಟ್‌ಗಳ ಡ್ರಗ್‌ ಟೆಸ್ಟ್‌ ನಿಯಮದಲ್ಲಿ ಮಹತ್ವದ ಬದಲಾವಣೆ, ವರ್ಷವಿಡೀ ಯಾದೃಚ್ಛಿಕ ತಪಾಸಣೆಗೆ ಕೇಂದ್ರ ಸರ್ಕಾರ ಮುಂದು..!

ಮೊಜ್ತಾಬಾ ಖಮೇನಿ ಜೀವಂತವಾಗಿ ಇದ್ದಾರೋ ಅಥವಾ ಇಲ್ಲವೋ? ಆತಂಕದ ಹಳೆಯ Video ಬಿಡುಗಡೆ ಮಾಡಿದ ಇರಾನ್!