ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜ್ಯ

ಕೊರೋನಾ ನಿಯಂತ್ರಣಕ್ಕೆ ರಾಜ್ಯ ವಿಪತ್ತು ನಿರ್ವಹಣಾ ನಿಧಿಯಿಂದ 86 ಕೋಟಿ ರೂ. ಬಿಡುಗಡೆ

ಕೊರೋನಾ ನಿಯಂತ್ರಿಸಲು ರಾಜ್ಯ ಸರ್ಕಾರ, ರಾಜ್ಯ ವಿಪತ್ತು ನಿರ್ವಹಣಾ ನಿಧಿಯಿಂದ 86.25 ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡಿದೆ.

ಕೊರೋನಾ ವಾರಿಯರ್ಸ್
Vishwanath S
Updated On : 29 Apr 2020, 6:38 pm

ಬೆಂಗಳೂರು: ಕೊರೋನಾ ನಿಯಂತ್ರಿಸಲು ರಾಜ್ಯ ಸರ್ಕಾರ, ರಾಜ್ಯ ವಿಪತ್ತು ನಿರ್ವಹಣಾ ನಿಧಿಯಿಂದ 86.25 ಕೋಟಿ ರೂಪಾಯಿಗಳನ್ನು ಬಿಡುಗಡೆ ಮಾಡಿದೆ.

ಕೊರೋನಾ ವೈರಸ್ ಹರಡುವಿಕೆಯನ್ನು ಕೇಂದ್ರ ಸರ್ಕಾರ ರಾಷ್ಟ್ರೀಯ ವಿಪತ್ತು ಎಂದು ಘೋಷಣೆ ಮಾಡಿರುವುದರಿಂದ ಕೊರೋನಾ ನಿಯಂತ್ರಿಸಲು ಕೇಂದ್ರ ಸರ್ಕಾರ ನೀಡಿರುವ ಮಾರ್ಗಸೂಚಿ ಅನ್ವಯ ಎಲ್ಲ ಜಿಲ್ಲೆಗಳಿಗೂ ವಿಪತ್ತು ನಿರ್ವಹಣಾ ನಿಧಿಯಿಂದ ಹಣ ಬಿಡುಗಡೆ ಮಾಡಲಾಗಿದೆ.

ಈ ಹಣವನ್ನು ಕೊರೋನಾ ನಿಯಂತ್ರಣಕ್ಕೆ ಮಾತ್ರ ಬಳಸುವಂತೆ ಸೂಚಿಸಲಾಗಿದ್ದು, ಹಣ ಬಳಕೆಯ ಕುರಿತು ಸರ್ಕಾರಕ್ಕೆ ಪ್ರಮಾಣ ಪತ್ರ ಸಲ್ಲಿಸಬೇಕು. ಅವ್ಯವಹಾರವಾದರೆ ಜಿಲ್ಲಾಧಿಕಾರಿಗಳನ್ನೇ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಆದೇಶದಲ್ಲಿ ತಿಳಿಸಲಾಗಿದೆ.

Advertisement

Advertisement

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement