ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜ್ಯ

ಪಾದರಾಯನಪುರದಲ್ಲಿ ಮತ್ತೆ ಕೊರೋನಾ‌ ಅಬ್ಬರ, ಇಂದು ಮತ್ತೆ ಇಬ್ಬರಲ್ಲಿ ಸೋಂಕು ಪತ್ತೆ

ಕೊರೋನಾ ವಾರಿಯರ್ಸ್ ಮೇಲಿನ ಹಲ್ಲೆ ಪ್ರಕರಣದಿಂದ ಭಾರಿ ಸುದ್ದಿಗೆ ಗ್ರಾಸವಾಗಿದ್ದ ಪಾದರಾಯನಪುರದಲ್ಲಿ ಇಂದು ಮತ್ತೆ 2 ಕೊರೋನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ.

ಸಂಗ್ರಹ ಚಿತ್ರ
Srinivasa Murthy VN
Updated On : 30 Apr 2020, 10:32 pm

ಬೆಂಗಳೂರು: ಕೊರೋನಾ ವಾರಿಯರ್ಸ್ ಮೇಲಿನ ಹಲ್ಲೆ ಪ್ರಕರಣದಿಂದ ಭಾರಿ ಸುದ್ದಿಗೆ ಗ್ರಾಸವಾಗಿದ್ದ ಪಾದರಾಯನಪುರದಲ್ಲಿ ಇಂದು ಮತ್ತೆ 2 ಕೊರೋನಾ ಪಾಸಿಟಿವ್ ಪ್ರಕರಣಗಳು ದಾಖಲಾಗಿವೆ.

ಹೌದು.. ಗುರುವಾರ ಒಂದೇ ದಿನ 22 ಸೋಂಕು ಪ್ರಕರಣಗಳು ದೃಢಪಟ್ಟಿದ್ದು, ಈ ಮೂಲಕ ರಾಜ್ಯದ ಒಟ್ಟು ಕೋವಿಟ್‌-19 ಪ್ರಕರಣಗಳ ಸಂಖ್ಯೆ 557ಕ್ಕೆ ಏರಿಕೆಯಾಗಿದೆ. ಹೊಸದಾಗಿ ಪತ್ತೆಯಾಗಿರುವ ಪ್ರಕರಣಗಳಲ್ಲಿ 14 ಬೆಳಗಾವಿ ಜಿಲ್ಲೆಯೊಂದರಿಂದಲೇ ವರದಿಯಾಗಿವೆ. ಇನ್ನು  ವಿಜಯಪುರದಲ್ಲಿ 2 ಮತ್ತು ಬೆಂಗಳೂರು ನಗರದಲ್ಲಿ 3 ಪ್ರಕರಣಗಳು ದೃಢಪಟ್ಟಿವೆ. ಕೋವಿಡ್‌-19 ತಣ್ಣಗಾಗಿದ್ದ ದಕ್ಷಿಣ ಕನ್ನಡ, ತುಮಕೂರು ಮತ್ತು ದಾವಣಗೆರೆಯಲ್ಲಿ ಮತ್ತೆ ತಲಾ 1 ಪ್ರಕರಣಗಳು ಖಚಿತವಾಗಿವೆ. 

ಪಾದರಾಯನಪುರದಲ್ಲಿ ಮತ್ತೆ 2 ಪಾಸಿಟಿವ್ ಪ್ರಕರಣ
ಇನ್ನು ಬೆಂಗಳೂರಿನಲ್ಲಿ ಪತ್ತೆಯಾಗಿರುವ ಮೂರು ಪ್ರಕರಣಗಳಲ್ಲಿ ಇಬ್ಬರು ಪಾದರಾಯನಪುರ ವಾರ್ಡ್‌ನ ಸಂಪರ್ಕಿತರಾಗಿದ್ದಾರೆ. ಇನ್ನೊಬ್ಬರು ಬೆಂಗಳೂರಿನ ದೀಪಾಂಜಲಿ ನಗರದ 63 ವರ್ಷದ ಪುರುಷರಾಗಿದ್ದು ತೀವ್ರ ಉಸಿರಾಟದ ಸಮಸ್ಯೆ (SARI) ಯಿಂದ ಬಳಲುತ್ತಿದ್ದಾರೆ.  ಪಾದರಾಯನಪುರದ ಪ್ರಕರಣ ಬೆಚ್ಚಿಬೀಳಿಸುವಂತಿದ್ದು, ಸೋಂಕಿತ 292 ಜೊತೆ ಸಂಪರ್ಕ ಹೊಂದಿದ್ದ ಐವರಲ್ಲಿ ಕೊರೊನಾ ದೃಢಪಟ್ಟಿದೆ. ಈ 292 ಸೋಂಕಿತನಿಗೆ ತನ್ನ ಮಾಲೀಕನಿಂದ ಸೋಂಕು ಹಬ್ಬಿತ್ತು. ಲೆದರ್ ಜಾಕೆಟ್, ಬ್ಯಾಗ್ ತಯಾರಿ ಫ್ಯಾಕ್ಟರಿಯ ಮಾಲೀಕನಿಂದ ನೌಕರನಿಗೆ  ಸೋಂಕು ಅಟ್ಯಾಕ್ ಆಗಿತ್ತು. 

Advertisement

Advertisement

7 ಜನರು ಗುಣಮುಖ
565 ಕೊರೊನಾ ಸೋಂಕಿತರ ಪೈಕಿ ಈವರೆಗೆ 229 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಕರ್ನಾಟಕದಲ್ಲಿ ಇದುವರೆಗೂ ಕೊರೊನಾದಿಂದ 21 ಜನ ಮೃತಪಟ್ಟಿದ್ದು, ಸದ್ಯ 314 ಜನರಲ್ಲಿ ಕೊರೊನಾ ಸೋಂಕು ಸಕ್ರಿಯವಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ  ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ. ಇದೇ ಅವಧಿಯಲ್ಲಿ ರಾಜ್ಯದಲ್ಲಿ ಕೊರೊನಾ ವೈರಸ್‌ ಸೋಂಕಿನಿಂದ 7 ಜನರು ಗುಣಮುಖರಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಚೇತರಿಸಿಕೊಂಡವ ಸಂಖ್ಯೆ 227ಕ್ಕೆ ಏರಿದೆ. ಇನ್ನು ಕೋವಿಡ್‌-19ನಿಂದ 21 ಜನರು ಸಾವಿಗೀಡಾಗಿದ್ದರೆ,  ರೋಗಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಮೂಲಕ ರಾಜ್ಯ 22 ಕೊರೊನಾ ಸೋಂಕಿತರನ್ನು ಕಳೆದುಕೊಂಡಿದೆ.
 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.

Show comments