ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜ್ಯ

ಕೋವಿಡ್-19: ಬೆಳಗಾವಿಯಲ್ಲಿ 14 ಸೋಂಕಿತರು ಸೇರಿ ರಾಜ್ಯದಲ್ಲಿ ಒಂದೇ ದಿನ 22 ಪ್ರಕರಣ; ಸೋಂಕಿತರ ಸಂಖ್ಯೆ 557ಕ್ಕೆ ಏರಿಕೆ

ರಾಜ್ಯದಲ್ಲಿ ಕೊರೋನಾ ಆರ್ಭಟ ಹೆಚ್ಚಾಗುತ್ತಲೇ ಇದ್ದು, ಗುರುವಾರ ಮತ್ತೆ 22 ಹೊಸ ಪ್ರಕರಣಗಳು ಬೆಳಕಿಗೆ ಬಂದಿವೆ. ಇದರಂತೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 557ಕ್ಕೆ ಏರಿಕೆಯಾಗಿದೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಸಂಗ್ರಹ ಚಿತ್ರ
Manjula VN
Updated On : 30 Apr 2020, 1:05 pm

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಆರ್ಭಟ ಹೆಚ್ಚಾಗುತ್ತಲೇ ಇದ್ದು, ಗುರುವಾರ ಮತ್ತೆ 22 ಹೊಸ ಪ್ರಕರಣಗಳು ಬೆಳಕಿಗೆ ಬಂದಿವೆ. ಇದರಂತೆ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 557ಕ್ಕೆ ಏರಿಕೆಯಾಗಿದೆ ಎಂದು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ. 

ಬುಧವಾರ ಸಂಜೆ 5 ಗಂಟೆಯಿಂದ ಇಂದು ಮಧ್ಯಾಹ್ನ 12ರವರೆಗೆ ಒಟ್ಟು 22 ಪ್ರಕರಣಗಳು ಬೆಳಕಿಗೆ ಬಂದಿದ್ದು, ಮಹಾಮಾರಿ ವೈರಸ್'ಗೆ ಈ ವರೆಗೂ 21 ಮಂದಿ ಬಲಿಯಾಗಿದ್ದಾರೆ. ಅಲ್ಲದೆ, ಸೋಂಕಿಗೊಳಗಾಗಿ ಚಿಕಿತ್ಸೆ ಪಡೆಯುತ್ತಿದ್ದ 223 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ. 

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 1, ವಿಜಯಪುರ 2, ಬೆಳಗಾವಿ 14, ತುಮಕೂರು 1, ಬೆಂಗಳೂರು ನಗರ 3 ಹಾಗೂ ದಾವಣಗೆರೆಯಲ್ಲಿ ಒಬ್ಬರಲ್ಲಿ ಸೋಂಕು ಪತ್ತೆಯಾಗಿದೆ. 

Advertisement

Advertisement

ದಕ್ಷಿಣ ಕನ್ನಡ ಜಿಲ್ಲೆಯ 58 ವರ್ಷದ ಮಹಿಳೆ, ವಿಜಯಪುರದ 62 ವರ್ಷದ ವ್ಯಕ್ತಿ ಮತ್ತು 33 ವರ್ಷದ ಮಹಿಳೆ, ತುಮಕೂರಿನ 65 ವರ್ಷದ ಮಹಿಳೆ, ಬೆಂಗಳೂರು ನಗರದ 20 ಹಾಗೂ 28 ವರ್ಷದ ಯುವಕರು, 63 ವರ್ಷದ ವೃದ್ಧ ಮತ್ತು ದಾವಣಗೆರೆಯ 69 ವರ್ಷದ ವ್ಯಕ್ತಿ ಸೋಂಕಿಗೆ ಗುರಿಯಾಗಿದ್ದಾರೆ. 

ಉಳಿದಂತೆ ಬೆಳಗಾವಿಯ ಹಿರೇಬಾಗೇವಾಡಿಯ 24 ವರ್ಷದ ಇಬ್ಬರು ಮಹಿಳೆಯರು, 27 ವರ್ಷದ ವ್ಯಕ್ತಿ, 18 ವರ್ಷದ ಯುವಕ, 48 ವರ್ಷದ ಮಹಿಳೆ , 50 ವರ್ಷದ ವ್ಯಕ್ತಿ, 27 ವರ್ಷದ ಮಹಿಳೆ, 43, 16, 36 ವರ್ಷದ ವ್ಯಕ್ತಿಗಳು, 8 ವರ್ಷದ ಬಾಲಕ, 36 ವರ್ಷದ ವ್ಯಕ್ತಿ, ಬೆಳಗಾವಿ ಹುಕ್ಕೇರಿಯ 9 ವರ್ಷದ ಬಾಲಕ ಮತ್ತು 75 ವರ್ಷದ ವೃದ್ಧೆಯಲ್ಲಿ ಸೋಂಕು ದೃಢಪಟ್ಟಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement