ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜ್ಯ

ಕಲಬುರಗಿಯಲ್ಲಿ ಮೇ 7ರವರೆಗೆ ನಿಷೇಧಾಜ್ಞೆ: ಜಿಲ್ಲಾಧಿಕಾರಿ ಶರತ್ ಬಿ

ಸೂರ್ಯ ನಗರಿ ಕಲಬುರಗಿಯಲ್ಲಿ ಕೊರೊನಾ ಅರ್ಧ ಶತಕ ಬಾರಿಸಿದ್ದು, ಜಿಲ್ಲೆಯಾದ್ಯಂತ ಸೋಂಕು ನಿಯಂತ್ರಣಕ್ಕೆ ಬಾರದ ಹಿನ್ನೆಲೆಯಲ್ಲಿ ನಿಷೇಧಾಜ್ಞೆ ವಿಸ್ತರಿಸಲಾಗಿದೆ.

ಜಿಲ್ಲಾಧಿಕಾರಿ ಶರತ್‌ ಬಿ
Manjula VN
Updated On : 30 Apr 2020, 11:23 am

ಕಲಬುರಗಿ: ಸೂರ್ಯ ನಗರಿ ಕಲಬುರಗಿಯಲ್ಲಿ ಕೊರೊನಾ ಅರ್ಧ ಶತಕ ಬಾರಿಸಿದ್ದು, ಜಿಲ್ಲೆಯಾದ್ಯಂತ ಸೋಂಕು ನಿಯಂತ್ರಣಕ್ಕೆ ಬಾರದ ಹಿನ್ನೆಲೆಯಲ್ಲಿ ನಿಷೇಧಾಜ್ಞೆ ವಿಸ್ತರಿಸಲಾಗಿದೆ.

ಕೊರೊನಾ ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ಜಿಲ್ಲೆಯಾದ್ಯಂತ ಜಾರಿಯಲ್ಲಿರುವ ಸಿ‌.ಆರ್.ಪಿ‌.ಸಿ. 1973 ಕಲಂ‌ 144 ರನ್ವಯ ನಿಷೇಧಾಜ್ಞೆಯನ್ನು ಮೇ-7ರ ವರೆಗೆ ವಿಸ್ತರಿಸಿ ಜಿಲ್ಲಾಧಿಕಾರಿ ಶರತ್‌ ಬಿ. ಆದೇಶ ಹೊರಡಿಸಿದ್ದಾರೆ.

ಇನ್ನು, ಕೋವಿಡ್ -19 ತಡೆಗಟ್ಟುವ ನಿಟ್ಟಿನಲ್ಲಿ ಜಿಲ್ಲೆಯಾದ್ಯಂತ‌ ಮನೆ-ಮನೆಗೆ ಭೇಟಿ‌ ನೀಡಿ ILI/SARI/ತೀವ್ರ ರೀತಿಯ ಆರೋಗ್ಯ ಸಮಸ್ಯೆ ಹೊಂದಿರುವವರ ಪತ್ತೆಗೆ ಸಾರ್ವತ್ರಿಕ ಸಮೀಕ್ಷೆ ನಡೆಯಲಿದೆ. 3 ದಿನದಲ್ಲಿ ಈ ಸಮೀಕ್ಷೆ ಪೂರ್ಣಗೊಳ್ಳಲಿದ್ದು, ಮನೆಗೆ ಬಂದ‌ ಸಿಬ್ಬಂದಿಗಳಿಗೆ‌ ಮಾಹಿತಿ ನೀಡಿ ಸಹಕರಿಸಿ ಎಂದು ಅವರು ಸಾರ್ವಜನಿಕರಲ್ಲಿ ಕೋರಿದ್ದಾರೆ.

Advertisement

Advertisement

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement