ಸಂಗ್ರಹ ಚಿತ್ರ 
ರಾಜ್ಯ

ಮೇ 5ಕ್ಕೆ ಪ್ರಥಮ ಪಿಯುಸಿ ಫಲಿತಾಂಶ ಪ್ರಕಟ: ಶಿಕ್ಷಣ ಇಲಾಖೆ

ಈಗಾಗಲೇ ಪರೀಕ್ಷೆ ಪೂರ್ಣಗೊಂಡಿರುವ ಪ್ರಥಮ ಪಿಯುಸಿ ಪರೀಕ್ಷಾ ಫಲಿತಾಂಶ ಮೇ 5ರಂದು ಪ್ರಕಟಿಸುವುದಾಗಿ ಪದವಿ ಪೂರ್ವ ಶಿಕ್ಷಣ ಇಲಾಖೆ ಗುರುವಾರ ಸುತ್ತೋಲೆ ಹೊರಡಿಸಿದೆ.

ಬೆಂಗಳೂರು: ಈಗಾಗಲೇ ಪರೀಕ್ಷೆ ಪೂರ್ಣಗೊಂಡಿರುವ ಪ್ರಥಮ ಪಿಯುಸಿ ಪರೀಕ್ಷಾ ಫಲಿತಾಂಶ ಮೇ 5ರಂದು ಪ್ರಕಟಿಸುವುದಾಗಿ ಪದವಿ ಪೂರ್ವ ಶಿಕ್ಷಣ ಇಲಾಖೆ ಗುರುವಾರ ಸುತ್ತೋಲೆ ಹೊರಡಿಸಿದೆ.
 
ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ಅವರ ನಿರ್ದೇಶನದಂತೆ ಮುಂದಿನ ತರಗತಿಗಳ ಶೈಕ್ಷಣಿಕ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಲು ಅನುವಾಗುವಂತೆ ಫಲಿತಾಂಶವನ್ನು ಪ್ರಕಟಿಸಲು ಇಲಾಖೆ ಮುಂದಾಗಿದೆ. ಅನುತ್ತೀರ್ಣ ವಿದ್ಯಾರ್ಥಿಗಳಿಗೆ ಪೂರಕ ಪರೀಕ್ಷೆಯನ್ನು ಕಾಲೇಜು  ‌ಮಟ್ಟದಲ್ಲಿಯೇ ನಿರ್ವಹಿಸಲು‌ ಮಾನದಂಡಗಳನ್ನು ಮುಂದೆ ತಿಳಿಸಲಾಗುವುದು ಎಂದೂ ಸಹ ಸುತ್ತೋಲೆ ಸ್ಪಷ್ಟಪಡಿಸಿದೆ. 

ಖಾಸಗಿ ಪಿಯು ಕಾಲೇಜುಗಳು ಇಂತಹ ಸಾಮಾಜಿಕ ಸಂಕಷ್ಟದ ಸಂದರ್ಭದಲ್ಲಿ ಅಸಹಾಯಕ ಪೋಷಕರಿಂದ ವಿದ್ಯಾರ್ಥಿಗಳ ಶುಲ್ಕ ಪಾವತಿಗೆ ಒತ್ತಾಯಿಸಬಾರದು, ಇಚ್ಛಿಸುವ ಪೋಷಕರಿಂದ ಕಂತುಗಳ ಮೂಲಕ ಸ್ವೀಕರಿಸತಕ್ಕದ್ದು ಹಾಗೂ 2020-21 ನೇ ಈ ಸಾಲಿಗೆ ಯಾವುದೇ ಕಾರಣಕ್ಕೂ  ಬೋಧನ ಶುಲ್ಕವನ್ನು ಹೆಚ್ಚಿಸಬಾರದೆಂದು ಇಲಾಖೆಯು ನಿರ್ದೇಶನ ನೀಡಿದೆ. 

ಒಂದು ವೇಳೆ ಈ ಬಗ್ಗೆ ದೂರುಗಳು ಬಂದಲ್ಲಿ, ಕಾಲೇಜುಗಳ ಮೇಲೆ ನಿರ್ದಾಕ್ಷಿಣ್ಯವಾದ ಕ್ರಮಕ್ಕೆ ಮುಂದಾಗಲಾಗುವುದೆಂದು ಪದವಿಪೂರ್ವ ಶಿಕ್ಷಣ ನಿರ್ದೇಶಕರು ತಮ್ಮ ಸುತ್ತೋಲೆಯಲ್ಲಿ ಸ್ಪಷ್ಟಪಡಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

INDIA ಬ್ಲಾಕ್ ನಲ್ಲಿ ಬಿರುಕು?: ಆಪ್ ಕೈ ಕೊಟ್ಟ ಬೆನ್ನಲ್ಲೇ ಭೋಜನ ಕೂಟಕ್ಕೆ ಸಮಾಜವಾದಿ ಪಕ್ಷ ಗೈರು!

ರಾಹುಲ್, ಪ್ರಿಯಾಂಕಾ ಗಾಂಧಿಯನ್ನು ಎಳೆದೊಯ್ದು ವಶಕ್ಕೆ ಪಡೆದ ಪೊಲೀಸರು; ಬಸ್‌ನ ಟೈರ್ ಪಂಕ್ಚರ್ ಮಾಡಿದ ಕಾರ್ಯಕರ್ತರು

ಭಾರತವನ್ನು ಜಾಗತಿಕ ಶಕ್ತಿಯಾಗಿಸಿದ್ದು ಮೋದಿ, ಅಂತಹವರ ವಿರುದ್ಧವೇ ಸಂಚು: ಸರ್ಬಿಯಾ ಮಾಜಿ ಅಧ್ಯಕ್ಷ, Video ವೈರಲ್

SIR ವಿರುದ್ಧ ಕಾಂಗ್ರೆಸ್ ಪ್ರತಿಭಟನೆ: ಡಿಎಂಕೆ ಯು-ಟರ್ನ್!

ಗ್ರಾಹಕರಿಗೆ ನೆಮ್ಮದಿ: ಕಟಾವಿಗೆ ಬಂದ ಖಾರಿಫ್ ಬೆಳೆ, ಕರ್ನಾಟಕ ಸೇರಿ ಹಲವು ರಾಜ್ಯಗಳಲ್ಲಿ ಈರುಳ್ಳಿ ದರ ಕುಸಿತ ಸಾಧ್ಯತೆ, 2 ಲಕ್ಷ ಕ್ವಿಂಟಾಲ್‌ ಪೂರೈಕೆ!