ರಾಜ್ಯ

ಕೃಷ್ಣಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆ ಎಂದು ಘೋಷಿಸಿ: ರಮೇಶ್ ಜಾರಕಿಹೊಳಿ

Manjula VN

ವಿಜಯಪುರ: ಕೃಷ್ಣಾ ನದಿ ಇಡೀ ಉತ್ತರ ಕರ್ನಾಟಕದ ಜೀವನದಿಯಾಗಿದ್ದು, ಈ ನೀರಿನ ಸದ್ಭಳಕೆಗಿರುವ ಕಾನೂನು ತೊಡಕುಗಳನ್ನು ನಿವಾರಣೆ ನಿಟ್ಟಿನಲ್ಲಿ ಪ್ರಯತ್ನ ಮಾಡಲಾಗುತ್ತಿದೆ ಎಂದು ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಹೇಳಿದ್ದಾರೆ.

ಜಿಲ್ಲೆಯ ಆಲಮಟ್ಟಿ ಜಲಾಶಯದ ಪರಿವೀಕ್ಷಣೆ ಮಾಡಿದ ನಂತರ ಅವರು ಮಾಹಿತಿ ಕೊಟ್ಟಿದ್ದಾರೆ.

ಆಲಮಟ್ಟಿ ಜಲಾಶಯವನ್ನು 519.6 ಮೀ. ನಿಂದ 524.256 ಮೀ. ವರೆಗೆ ಹಂತ ಹಂತವಾಗಿ ಏರಿಸಬೇಕೆನ್ನುವ ಪ್ರಸ್ತಾಪ ಸರ್ಕಾರದ ಮುಂದಿದೆ. ಕೃಷ್ಣಾ ಮೇಲ್ದಂಡೆ ಯೋಜನೆಯನ್ನು ರಾಷ್ಟ್ರೀಯ ಯೋಜನೆಯನ್ನಾಗಿ ಘೋಷಿಸಲು ಕೇಂದ್ರ ಸರ್ಕಾರಕ್ಕೆ ಕೋರಿಕೆ ಸಲ್ಲಿಸಲು ಚಿಂತನೆ ನಡೆದಿದೆ ಎಂದು ರಮೇಶ ಜಾರಕಿಹೊಳಿ ತಿಳಿಸಿದ್ದಾರೆ

SCROLL FOR NEXT