ಎಚ್.ಡಿ ಕುಮಾರಸ್ವಾಮಿ 
ರಾಜ್ಯ

ಈ ಹಿಂದೆ ಅಧಿಕಾರಿಗಳ ಸಾವಿನ ತನಿಖೆಗೆ ಜಾಗಟೆ ಬಾರಿಸಿದ್ದ ಬಿಜೆಪಿ ಈಗ ಏಕೆ ಮೌನವಾಗಿದೆ: ಎಚ್ ಡಿಕೆ

ಚನ್ನರಾಯಪಟ್ಟಣ ಸ ಇನ್‌ಸ್ಪೆಕ್ಟರ್‌ ಕಿರಣ್‌ಕುಮಾರ್ ಆತ್ಮಹತ್ಯೆ ಪ್ರಕರಣವನ್ನು ರಾಜ್ಯ ಸರ್ಕಾರ ಉನ್ನತ ಮಟ್ಟದ ತನಿಖೆಗೆ ಆದೇಶಿಸಬೇಕೆಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಆಗ್ರಹಿಸಿದ್ದಾರೆ.

ಬೆಂಗಳೂರು: ಚನ್ನರಾಯಪಟ್ಟಣ ಸ ಇನ್‌ಸ್ಪೆಕ್ಟರ್‌ ಕಿರಣ್‌ಕುಮಾರ್ ಆತ್ಮಹತ್ಯೆ ಪ್ರಕರಣವನ್ನು ರಾಜ್ಯ ಸರ್ಕಾರ ಉನ್ನತ ಮಟ್ಟದ ತನಿಖೆಗೆ ಆದೇಶಿಸಬೇಕೆಂದು ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಆಗ್ರಹಿಸಿದ್ದಾರೆ.
 
ಈ ಸಂಬಂಧ ಟ್ವೀಟ್‌ ಮಾಡಿರುವ ಅವರು, 'ಹಾಸನ ಜಿಲ್ಲೆ ಚನ್ನರಾಯಪಟ್ಟಣ ಪಿ.ಎಸ್‌.ಐ ಕಿರಣ್‌ಕುಮಾರ್ ಆತ್ಮಹತ್ಯೆ ಪ್ರಕರಣವನ್ನು ರಾಜ್ಯ ಬಿಜೆಪಿ ಸರ್ಕಾರ ಉನ್ನತಮಟ್ಟದ ತನಿಖೆಗೆ ತಕ್ಷಣ ಆದೇಶಿಸಬೇಕು' ಎಂದು ಆಗ್ರಹಿಸಿದ್ದಾರೆ.

'ಪೊಲೀಸರು ಮತ್ತು ಹಿರಿಯ ಪೊಲೀಸ್ ಸಿಬ್ಬಂದಿ ಜೀವದ ಹಂಗು ತೊರೆದು ಹೋರಾಡುತ್ತಿದ್ದಾರೆ. ಇಂತಹ ಪರಿಸ್ಥಿತಿಯಲ್ಲಿ ಅವರ ಸ್ವಾಭಿಮಾನಕ್ಕೆ ಧಕ್ಕೆ ಆಗುವಂತೆ ಹಿರಿಯ ಅಧಿಕಾರಿಗಳು ಕಿರುಕುಳ ನೀಡಿದ್ದೇ ಪಿಎಸ್ಐ ಆತ್ಮಹತ್ಯೆಗೆ ಕಾರಣ ಎಂಬುದಾಗಿ  ಮೇಲ್ನೋಟಕ್ಕೆ ಗೊತ್ತಾಗಿದೆ' ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ. ಸೂಕ್ತ ತನಿಖೆಗೆ ಆದೇಶಿಸುವ ಮೂಲಕ ಕಿರಿಯ ಹಂತದ ಪೊಲೀಸ್ ಅಧಿಕಾರಿಗಳಲ್ಲಿ ನೈತಿಕ, ಸ್ಥೈರ್ಯ ತುಂಬುವ ಕೆಲಸವನ್ನು ಸರ್ಕಾರ ಮಾಡಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಈ ಹಿಂದೆ ಗಣಪತಿ ಭಟ್, ಮಲ್ಲಿಕಾರ್ಜುನ ಬಂಡೆ, ಕಲ್ಲಪ್ಪ ಹಂಡಿಬಾಗ್ ಅವರ ಅಕಾಲಿಕ ಸಾವು ಮತ್ತು ಅನುಪಮಾ ಶೆಣೈ ಅವರ ರಾಜೀನಾಮೆ ವೇಳೆ ನಿಷ್ಪಕ್ಷಪಾತ ತನಿಖೆ ನಡೆಸುವಂತೆ ರಾಜ್ಯದಾದ್ಯಂತ ಜಾಗಟೆ ಬಾರಿಸಿದ್ದ ಬಿಜೆಪಿ ಈಗ ಮೌನಕ್ಕೆ ಶರಣಾಗಿದೆ' ಎಂದು ಹೇಳುವ ಮೂಲಕ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. 'ಆತ್ಮಹತ್ಯೆ ಮಾಡಿಕೊಂಡ ಕಿರಣ್ ಕುಮಾರ್ ಅವರ ಮೊಬೈಲ್ ಫೋನನ್ನು ಹಿರಿಯ ಪೊಲೀಸ್ ಅಧಿಕಾರಿಗಳು ಜಪ್ತಿ ಮಾಡಿದ್ದು ಹಲವು ಶಂಕೆಗಳಿಗೆ ಎಡೆಮಾಡಿಕೊಟ್ಟಿದೆ.
ಇವರ ಸಾವಿಗೆ ಆಯಕಟ್ಟಿನ ಜಾಗದಲ್ಲಿ ಕುಳಿತ ಹಿರಿಯ ಪೊಲೀಸ್ ಅಧಿಕಾರಿಗಳ ದೌರ್ಜನ್ಯ ಹಾಗೂ ಬೆದರಿಕೆ ತಂತ್ರ ಕಾರಣ ಎಂಬ ಮಾಹಿತಿ ನನಗಿದೆ' ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಜನರ ಭಾವನೆ ಮೇಲೆ ರಾಜಕಾರಣ ಮಾಡಲ್ಲ: ಸುಮ್ಮನೆ ಘೋಷಣೆ ಮಾಡಿ ಮರೆಯುವ ಜಾಯಮಾನ ನಮ್ಮದಲ್ಲ- ಸಿಎಂ ಡಿಕೆ ಶಿವಕುಮಾರ್!

ಟಿ. ನರಸೀಪುರ ಶೋಭಾಯಾತ್ರೆ: ಮಸೀದಿ ಮುಂದೆ ಪಟಾಕಿ ಸಿಡಿಸಿ ಸಂಭ್ರಮ, ಒಂದುವರೆ ವರ್ಷದಲ್ಲಿ ನಾವು ಬರ್ತೀವಿ, ಅವಾಗ ಲೆಕ್ಕ ಚುಪ್ತ ಮಾಡ್ತೀವಿ- ಪ್ರತಾಪ್ ಸಿಂಹ

ಪಂಚಾಯ್ತಿ ಚುನಾವಣೆ ನಡೆಸಲು ಸಚಿವ ಸಂಪುಟದ ನಿರ್ಧಾರ: EVM ಬದಲು ಮತಪೆಟ್ಟಿಗೆ ಬಳಕೆ

ಅಭಿಮಾನಿಯ ಕಾಲಿನ ಮೇಲೆ ಹತ್ತಿದ ಕಾರು: ತಾಳ್ಮೆ ಕಳೆದುಕೊಂಡು ಚಾಲಕನಿಗೆ ಹಿಗ್ಗಾಮುಗ್ಗಾ ಬೈದ ಸಲ್ಮಾನ್ ಖಾನ್! video

ಸಾಕ್ಷ್ಯ ವಿಚಾರಣೆ ವೇಳೆ ದರ್ಶನ್ ಖುದ್ದು ಹಾಜರಾಗಲು ಹೈಕೋರ್ಟ್ ಒಪ್ಪಿಗೆ, ಷರತ್ತು ಅನ್ವಯ!