ಶೀಘ್ರ ಸಚಿವ ಸಂಪುಟ ವಿಸ್ತರಣೆ- ನಳೀನ್ ಕುಮಾರ್ ಕಟೀಲ್
ರಾಜ್ಯ ಸಚಿವ ಸಂಪುಟ ಶೀಘ್ರದಲ್ಲೇ ವಿಸ್ತರಣೆಯಾಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹೇಳಿದ್ದಾರೆ.
ಸುಳ್ಯ: ರಾಜ್ಯ ಸಚಿವ ಸಂಪುಟ ಶೀಘ್ರದಲ್ಲೇ ವಿಸ್ತರಣೆಯಾಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹೇಳಿದ್ದಾರೆ.
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಂಪುಟಕ್ಕೆ ಹೊಸದಾಗಿ ಮೂವರು ಶಾಸಕರನ್ನು ಸೇರಿಸಿಕೊಳ್ಳಲಾಗುವುದು. ಈ ಮೂಲಕ ವಿಸ್ತರಣೆ ಪ್ರಕ್ರಿಯೆ ಸುಗಮವಾಗಿ ನಡೆಯಲಿದೆ ಎಂದರು.
ಸಚಿವ ಸಂಪುಟ ವಿಸ್ತರಣೆ ಮುಖ್ಯಮಂತ್ರಿ ಅವರ ಪರಮಾಧಿಕಾರವಾಗಿದ್ದು, ಅವರೇ ಅಂತಿಮ ತೀರ್ಮಾನ ತೆಗೆದುಕೊಳ್ಳುತ್ತಾರೆ ಎಂದು ಹೇಳಿದರು.
ಶಾಸಕ ಎಸ್. ಅಂಗಾರರಿಗೆ ಮಂತ್ರಿ ಸ್ಥಾನ ಸಿಗುವಂತೆ ನಮ್ಮ ಪ್ರಯತ್ನವಿರುತ್ತದೆ. ಈ ಬಾರಿ ಸಂಪುಟ ಪುನಾರಚನೆ
ಆಗುವ ಸಾಧ್ಯತೆಯಿಲ್ಲ. ಮೂರು ಸ್ಥಾನಗಳನ್ನು ಭರ್ತಿ ಮಾಡಲಷ್ಟೇ ಸಂಪುಟ ವಿಸ್ತರಣೆ ಸೀಮಿತವಾಗುತ್ತದೆ. ಈ ಬಗ್ಗೆ
ಮುಖ್ಯಮಂತ್ರಿಗಳು ಬಿಜೆಪಿ ಹೈ ಕಮಾಂಡ್ ಜೊತೆಗೆ ಚರ್ಚೆ ನಡೆಸಿ ತೀರ್ಮಾನ ಕೈಗೊಳ್ಳುತ್ತಾರೆ ಎಂದರು.
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.