ಪ್ರಿಯಾಂಕ್ ಖರ್ಗೆ 
ರಾಜ್ಯ

ಹಣ ಲೂಟಿ ಮಾಡುವುದರಲ್ಲಿ ಮಗ್ನವಾದ ರಾಜ್ಯಸರ್ಕಾರ- ಪ್ರಿಯಾಂಕ್ ಖರ್ಗೆ ಕಿಡಿ

ಕೊರೋನಾ ಸೋಂಕಿತರಿಗೆ ಸಮರ್ಪಕ ಚಿಕಿತ್ಸೆ ನೀಡಬೇಕಿದ್ದ ರಾಜ್ಯ ಸರ್ಕಾರ, ಹಣ ಲೂಟಿ ಹೊಡೆಯುವುದರಲ್ಲಿ ಮಗ್ನವಾಗಿದೆ ಎಂದು ಶಾಸಕ ಪ್ರಿಯಾಂಕ್ ಖರ್ಗೆ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ.

ಕಲಬುರಗಿ: ಕೊರೋನಾ ಸೋಂಕಿತರಿಗೆ ಸಮರ್ಪಕ ಚಿಕಿತ್ಸೆ ನೀಡಬೇಕಿದ್ದ ರಾಜ್ಯ ಸರ್ಕಾರ, ಹಣ ಲೂಟಿ ಹೊಡೆಯುವುದರಲ್ಲಿ ಮಗ್ನವಾಗಿದೆ ಎಂದು ಶಾಸಕ ಪ್ರಿಯಾಂಕ್ ಖರ್ಗೆ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ.

ಕಲಬುರಗಿ ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಏರ್ಪಡಿಸಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ  ಮಾತನಾಡಿದ ಅವರು, ಮಹಾಮಾರಿ ಕೊರೊನಾದಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ ರಾಜಕೀಯ ಮಾಡದೇ ಸರ್ಕಾರದೊಂದಿಗೆ ಕಾಂಗ್ರೆಸ್ ಸಂಪೂರ್ಣ ಸಹಕಾರ ನೀಡಿದೆ. ಕೇಂದ್ರ ಸರಕಾರ ನಾಲ್ಕು ಲಾಕ್ ಡೌನ್ ಹಾಗೂ ಮೂರು ಅನ್ ಲಾಕ್  ಆದರೂ ಪರಿಸ್ಥಿತಿ ಸುಧಾರಿಸುತ್ತಿಲ್ಲ. ಹೀಗಿರುವಾಗ ಸೋಂಕಿತರಿಗೆ ಸಮರ್ಪಕ ಚಿಕಿತ್ಸೆ ನೀಡಬೇಕಿದ್ದ ರಾಜ್ಯ ಸರ್ಕಾರ ಹಣ ಲೂಟಿ ಹೊಡೆಯುವುದರಲ್ಲಿ ಮಗ್ನವಾಗಿದೆ ಎಂದು ಅವರು ಕಿಡಿ ಕಾರಿದ್ದಾರೆ.

ವೈದ್ಯಕೀಯ ಸಲಕರಣೆ ಸೇರಿ ಇತರೆ ಮೂಲಭೂತ ಸೌಲಭ್ಯ ಒದಗಿಸುವಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ ಎಂದು ದೂರಿದ ಅವರು, ರಾಷ್ಟ್ರದಲ್ಲಿಯೇ ಮೊದಲ ಸಾವು ಸಂಭವಿಸಿರುವುದು ಕಲಬುರಗಿ ನಗರದಲ್ಲಿ. ಆದರೂ, ಕೇವಲ ಒಂದೇ ಒಂದು ಕೊರೊನಾ ಸೋಂಕು ತಪಾಸಣೆ ಕೇಂದ್ರ ಇಲ್ಲಿ ಸ್ಥಾಪಿಸಲಾಗಿದೆ. ಈ ಮೊದಲು ಹಲವಾರು ಬಾರಿ ನಾನು ಇಎಸ್ ಐ ಸಿ ನಲ್ಲಿ ಒಂದು ಕೇಂದ್ರ ಸ್ಥಾಪನೆಗೆ ಆಗ್ರಹಿಸಿ ಪತ್ರ ಬರೆದಿದ್ದೇನೆ. ಆದರೂ ಫಲಪ್ರದವಾಗಿಲ್ಲ, ಹೀಗಾಗಿ ಇಲ್ಲಿಯವರೆಗೆ ಕನಿಷ್ಠ ಐದು‌ ಸಾವಿರ ವರದಿಗಳು ಬಾಕಿ ಉಳಿದಿವೆ. ಇದು ತಕ್ಷಣದ ಚಿಕಿತ್ಸೆ ನೀಡಲು ಅಡ್ಡಗಾಲು ಆಗಿದ್ದು, ಇದು ಸರ್ಕಾರಕ್ಕೆ ಯಾಕೆ ತಿಳಿಯುತ್ತಿಲ್ಲ ? ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ನಾಯಕರ ಬಂಧನ, ಮೆಟ್ರೋ ಸ್ಥಗಿತ ಕುರಿತ ನ್ಯಾಯಾಂಗ ನಿಂದನೆ: ಭಾನುವಾರವೂ 'ಸುಪ್ರೀಂ' ವಿಶೇಷ ಪೀಠದಿಂದ ವಿಚಾರಣೆ!

BBK 13: ಗಾನವಿ ಹೇಳಿಕೆಗೆ ನೊಂದು ಗಗನ್ ತಾಯಿಗೆ ತಾನೇ ಕ್ಷಮೆ ಕೇಳಿ ಕಣ್ಣೀರು ಹಾಕಿದ ಸುದೀಪ್

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತ, ಆಫ್ರಿಕಾಗೆ ಸೂಕ್ತ ಪ್ರಾತಿನಿಧ್ಯ ಸಿಗಲೇಬೇಕು: ಜೈಶಂಕರ್ ಆಗ್ರಹ

ಪ್ರತಿಭಟನೆಗಳ ನಡುವೆಯೇ ಚು. ಆಯೋಗ ಮಹತ್ವದ ನಡೆ, ಹೊಸ ಉಪಾಯುಕ್ತರ ನೇಮಕ, 27 ಅಧಿಕಾರಿಗಳಿಗೆ ಹೊಸ ಹೊಣೆ!

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: 30 ಮನೆ-ಅಂಗಡಿಗಳಿಗೆ ಬೆಂಕಿ, ಕನಿಷ್ಠ 5 ಸಾವು!