ಯುಟಿ ಖಾದರ್ ಮತ್ತು ಐವಾನ್ ಡಿಸೋಜ 
ರಾಜ್ಯ

ಐವಾನ್ ಡಿಸೋಜಾಗೆ ಕೊರೋನಾ ಸೋಂಕು, ಸ್ವಯಂ ಕ್ವಾರಂಟೈನ್ ಆದ ಯುಟಿ ಖಾದರ್!

ವಿಧಾನ ಪರಿಷತ್‌ನ ಮಾಜಿ ಸದಸ್ಯ ಐವನ್‌ ಡಿಸೋಜ ಅವರಿಗೆ ಕೊರೋನಾ ಸೋಂಕು ದೃಢ ಪಟ್ಟ ಹಿನ್ನಲೆಯಲ್ಲಿ ಮಾಜಿ ಸಚಿವ, ಹಾಲಿ ಶಾಸಕ ಯು.ಟಿ. ಖಾದರ್‌ ಸ್ವಯಂ ಕ್ವಾರಂಟೈನ್‌ಗೆ ಒಳಗಾಗಿದ್ದಾರೆ.

ಮಂಗಳೂರು: ವಿಧಾನ ಪರಿಷತ್‌ನ ಮಾಜಿ ಸದಸ್ಯ ಐವನ್‌ ಡಿಸೋಜ ಅವರಿಗೆ ಕೊರೋನಾ ಸೋಂಕು ದೃಢ ಪಟ್ಟ ಹಿನ್ನಲೆಯಲ್ಲಿ ಮಾಜಿ ಸಚಿವ, ಹಾಲಿ ಶಾಸಕ ಯು.ಟಿ. ಖಾದರ್‌ ಸ್ವಯಂ ಕ್ವಾರಂಟೈನ್‌ಗೆ ಒಳಗಾಗಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, 'ಮಾಜಿ ಶಾಸಕ ಐವನ್ ಡಿಸೋಜ ಹಾಗೂ ಲಕ್ಷಾಂತರ ಮಂದಿ ಕೋವಿಡ್ ಸೋಂಕಿತರಾಗಿರಾಗಿದ್ದಾರೆ. ಇವರೆಲ್ಲರೂ ಶೀಘ್ರದಲ್ಲೇ ಗುಣಮುಖರಾಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ. ಕೆಲ ದಿನಗಳಿಂದ ಐವನ್ ಡಿಸೋಜ ಅವರ ಜೊತೆ ಪ್ರಾಥಮಿಕ‌ ಸಂಪರ್ಕದಲ್ಲಿದ್ದ ಕಾರಣ ನಾನು ಕೆಲ‌ವು ದಿನಗಳ ಕಾಲ ಸ್ವಯಂ‌ ನಿರ್ಬಂಧ ಹಾಕಿಕೊಂಡಿದ್ದೇನೆ' ಎಂದು ಹೇಳಿದ್ದಾರೆ.

ಅಂತೆಯೇ 'ಹೀಗಾಗಿ ಇಂದು ನಿಗದಿಯಾಗಿದ್ದ ಜನಸಾಮಾನ್ಯರ ಭೇಟಿ, ಕ್ಷೇತ್ರದ ಅಭಿವೃದ್ದಿ ಬಗ್ಗೆ ಜಿಲ್ಲಾಧಿಕಾರಿಗಳ ಜೊತೆಗಿನ ಸಭೆ, ಕ್ಷೇತ್ರದಲ್ಲಿ‌ ನಿಗದಿಯಾಗಿದ್ದ ವಿವಿಧ ಕಾರ್ಯಕ್ರಮಗಳು ಮುಂದೂಡಲ್ಪಟ್ಟಿದ್ದೆ. ಜನ ಸಾಮಾನ್ಯರ ಸೇವೆಗೆ ದೂರವಾಣಿ ಮೂಲಕ‌ ಲಭ್ಯವಿದ್ದು, ಅಗತ್ಯವಿದ್ದಲ್ಲಿ ನೇರವಾಗಿ ದೂರವಾಣಿ ಮೂಲಕ ನನ್ನನ್ನು ಎಂದಿನಂತೆ ಸಂಪರ್ಕಿಸಬಹುದಾಗಿದೆ' ಎಂದು ತಿಳಿಸಿದ್ದಾರೆ.

'ಇದೇ ವೇಳೆ ಐವನ್ ಡಿಸೋಜ ಜೊತೆಗೆ ಪ್ರಾಥಮಿಕ ಸಂಪರ್ಕಿತದಲ್ಲಿದ್ದವರು ಕೆಮ್ಮು ಜ್ವರ ಮುಂತಾದ ಲಕ್ಷಣ ಕಂಡು ಬಂದಲ್ಲಿ ತಕ್ಷಣ ಪರೀಕ್ಷೆಗೆ ಒಳಗಾಗುವಂತೆ ಮನವಿ ಮಾಡುತ್ತೇನೆ' ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ