ಸಂಗ್ರಹ ಚಿತ್ರ 
ರಾಜ್ಯ

ಅಯೋಧ್ಯೆ ರಾಮಮಂದಿರಕ್ಕೆ ನಾಳೆ ಭೂಮಿ ಪೂಜೆ: ಆದಿಚುಂಚನ ಗಿರಿ ಶ್ರೀಗಳಿಗೆ ಆಹ್ವಾನ

ಅಯೋಧ್ಯೆಯಲ್ಲಿ ಆ.5ರಂದು ನಡೆಯಲಿರುವ ಶ್ರೀ ರಾಮ ಮಂದಿರ ನಿರ್ಮಾಣದ ಭೂಮಿಪೂಜೆಯಲ್ಲಿ ಆದಿಚುಂಚನ ಗಿರಿ ಮಠದ ಪೀಠಾಧ್ಯಕ್ಷರಾದ ನಿರ್ಮಲಾನಂದ ನಾಥ ಸ್ವಾಮೀಜಿಗಳಿಗೆ ಆಹ್ವಾನ ನೀಡಲಾಗಿದೆ ಎಂದು ವರದಿಗಳಿಂದ ತಿಳಿದುಬಂದಿದೆ. 

ಬೆಂಗಳೂರು: ಅಯೋಧ್ಯೆಯಲ್ಲಿ ಆ.5ರಂದು ನಡೆಯಲಿರುವ ಶ್ರೀ ರಾಮ ಮಂದಿರ ನಿರ್ಮಾಣದ ಭೂಮಿಪೂಜೆಯಲ್ಲಿ ಆದಿಚುಂಚನ ಗಿರಿ ಮಠದ ಪೀಠಾಧ್ಯಕ್ಷರಾದ ನಿರ್ಮಲಾನಂದ ನಾಥ ಸ್ವಾಮೀಜಿಗಳಿಗೆ ಆಹ್ವಾನ ನೀಡಲಾಗಿದೆ ಎಂದು ವರದಿಗಳಿಂದ ತಿಳಿದುಬಂದಿದೆ. 

ನಿರ್ಮಲಾನಂದ ನಾಥ ಸ್ವಾಮೀಜಿಗಳೊಂದಿಗೆ ಶ್ರೀರಾಮ ಜನ್ಮಭೂಮಿ ಟ್ರಸ್ಟ್ ವತಿಯಿಂದ ಉಡುಪಿಯ ಪೇಜಾವರ ಮಠದ ವಿಶ್ವಪ್ರಸನ್ನತೀರ್ಥ ಸ್ವಾಮೀಜಿ, ಧರ್ಮಸ್ಥಳದ ಧರ್ಮಾಧಿಕಾರಿ ವೀರೇಂದ್ರ ಹೆಗಡೆಯವರಿಗೂ ಆಹ್ವಾನ ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ. 

ಆದರೆ, ಉಡುಪಿಯಲ್ಲಿ ವಿಶ್ವಪ್ರಸನ್ನತೀರ್ಥ ಸ್ವಾಮೀಜಿಗಳು ಚತುರ್ಮಾಸ ವ್ರತ ನಡೆಸುತ್ತಿರುವ ಹಿನ್ನೆಲೆಯಲ್ಲಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲು ಸಾಧ್ಯವಾಗುತ್ತಿಲ್ಲ ಎನ್ನಲಾಗುತ್ತಿದೆ. 

ಚತುರ್ಮಾಸ ವ್ರತ ಆಶಾಡದಲ್ಲಿ ಆರಂಭವಾಗಲಿದ್ದು, ನಾಲ್ಕು ತಿಂಗಳು ಕಾಲ ಈ ವ್ರತವನ್ನುನ ಡೆಸಲಾಗುತ್ತಿದೆ. ವ್ರತದ ಸಂದರ್ಭದಲ್ಲಿ ಶ್ರೀಗಳು ಎಲ್ಲಿಗೂ ಪ್ರಯಾಣ ಬೆಳೆಸುವುದಿಲ್ಲ. ಇನ್ನು ವೀರೇಂದ್ರ ಹೆಗಡೆಯವರು ಯಾವ ಕಾರಣಕ್ಕೆ ಭಾಗವಹಿಸುತ್ತಿಲ್ಲ ಎಂಬುದರ ಕುರಿತು ಇನ್ನೂ ಸ್ಪಷ್ಟ ಮಾಹಿತಿಗಳು ಲಭ್ಯವಾಗಿಲ್ಲ. 

ಇನ್ನು ಆಹ್ವಾನ ಬಂದಿರುವ ಹಿನ್ನೆಲೆಯಲ್ಲಿ ಆದಿಚುಂಚನ ಗಿರಿ ಮಠದ ಪೀಠಾಧ್ಯಕ್ಷರಾದ ನಿರ್ಮಲಾನಂದ ನಾಥ ಸ್ವಾಮೀಜಿಯವರು ಅಯೋಧ್ಯೆಗೆ ತೆರಳುತ್ತಿದ್ದು, ಶ್ರೀಗಳು ಮಂಗಳವಾರ ಬೆಳಿಗ್ಗೆ ಬೆಂಗಳೂರಿನಿಂದ ಲಖನೌಗೆ ವಿಮಾನದ ಮೂಲಕ ತೆರಳಲಿದ್ದಾರೆಂದು ತಿಳಿದುಬಂದಿದೆ. ಲಖನೌಗೆ ಭೇಟಿ ನೀಡಿದ ಬಳಿಕ ವಾರಣಾಸಿಯಲ್ಲಿರುವ ತಮ್ಮ ಮಠದ ವಿಭಾಗದಲ್ಲಿ ನೆಲೆಯೂರಲಿದ್ದಾರೆಂದು ತಿಳಿದುಬಂದಿದೆ. 

ಈ ನಡುವೆ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಹಾಗೂ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರಿಗೆ ಕಾರ್ಯಕ್ರಮಕ್ಕೆ ಆಹ್ವಾನ ನೀಡದಿರುವುದು ಹಲವರಲ್ಲಿ ಆಶ್ಚರ್ಯವನ್ನು ಮೂಡಿಸಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT