ಸುಧಾಕರ್ 
ರಾಜ್ಯ

ರಾಜ್ಯದಲ್ಲಿ ಮರಣ‌ ದರ‌ ಮಹಾರಾಷ್ಟ್ರ, ದೆಹಲಿಗಿಂತ ಕಡಿಮೆ: ವೈದ್ಯಕೀಯ ಶಿಕ್ಷಣ ‌ಸಚಿವ ಡಾ.ಕೆ.ಸುಧಾಕರ್

ಬೇರೆ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕ ಹಾಗೂ ರಾಜಧಾನಿ ಬೆಂಗಳೂರಿನಲ್ಲಿ ಕೋವಿಡ್ ಮರಣ‌ ದರ‌ ಕಡಿಮೆಯಾಗಿದೆ. 

ಬೆಂಗಳೂರು: ಬೇರೆ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕ ಹಾಗೂ ರಾಜಧಾನಿ ಬೆಂಗಳೂರಿನಲ್ಲಿ ಕೋವಿಡ್ ಮರಣ‌ ದರ‌ ಕಡಿಮೆಯಾಗಿದೆ. 

ಇದು ಸಮಾಧಾನಕರ ವಿಚಾರ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ. "ಕರ್ನಾಟಕದಲ್ಲಿ ಕೋವಿಡ್ ಮರಣ ಪ್ರಮಾಣ ಇತರೆ ರಾಜ್ಯಗಳಿಗಿಂತ ಸಮಾಧಾನಕರವಾಗಿದೆ. ಪ್ರತಿ 10 ಲಕ್ಷ ಜನಸಂಖ್ಯೆಗೆ ಕೋವಿಡ್ ನಿಂದ ಮರಣ ಹೊಂದುತ್ತಿರುವವವರ ಸಂಖ್ಯೆ ಕರ್ನಾಟಕಕ್ಕಿಂತ ದೆಹಲಿಯಲ್ಲಿ 5 ಪಟ್ಟು ಮತ್ತು ಮಹಾರಾಷ್ಟ್ರದಲ್ಲಿ 3 ಪಟ್ಟು ಹೆಚ್ಚಿದೆ. 

ಬೆಂಗಳೂರಿನಲ್ಲಿ ಮರಣ ಪ್ರಮಾಣವು ಇತರೆ ಮಹಾನಗರಗಳಿಗಿಂತ ಕಡಿಮೆ ಇದೆ," ಎಂದು ಅವರು ತಿಳಿಸಿದ್ದಾರೆ. 10 ಲಕ್ಷ ಜನಸಂಖ್ಯೆಗೆ ರಾಜ್ಯದಲ್ಲಿ 39 ಮತ್ತು ಬೆಂಗಳೂರಿನಲ್ಲಿ 115 ಕೋವಿಡ್ ಮರಣ‌ ದರವಿದೆ.

ಅಧಿಕಾರಿಗಳಿಗೆ ಎಚ್ಚರಿಕೆ

ಆಸ್ಪತ್ರೆಗಳಲ್ಲಿ ರೋಗಿಗಳ ವಿಚಾರದಲ್ಲಿ ‌ನಿರ್ಲಕ್ಷ್ಯ ವಹಿಸುವ ವೈದ್ಯಾಧಿಕಾರಿಗಳ ವಿರುದ್ಧ ‌ಕ್ರಮ ಜರುಗಿಸುವುದಾಗಿ ಸಚಿವ ಡಾ.ಕೆ.ಸುಧಾಕರ್‌ ಎಚ್ಚರಿಕೆ‌ ನೀಡಿದ್ದಾರೆ.

ಬೆಂಗಳೂರಿನ ಕೆ.ಸಿ.ಜನರಲ್ ಆಸ್ಪತ್ರೆಯಲ್ಲಿ ‌ಮೃತದೇಹವನ್ನು ತೆಗೆದುಕೊಂಡು ಹೋಗಲು ವಿಳಂಬ ಮಾಡಲಾಗಿತ್ತು. ಕೂಡಲೇ ಕಾರ್ಯಪ್ರವೃತ್ತರಾಗುವಂತೆ ಸಚಿವರು ಅಧಿಕಾರಿಗಳಿಗೆ ಸೂಚನೆ‌ ನೀಡಿದರು.

"ಕೆ.ಸಿ.ಜನರಲ್ ಆಸ್ಪತ್ರೆಯಲ್ಲಿ ಮೃತದೇಹ ತೆರವುಗೊಳಿಸಲು ವಿಳಂಬ ಮಾಡಿರುವ ಘಟನೆ ನನ್ನ ಗಮನಕ್ಕೆ ಬಂದಿದೆ. ಇದನ್ನು ಕೂಡಲೇ ಸರಿಪಡಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಈ ರೀತಿ ನಿರ್ಲಕ್ಷ್ಯ ತೋರುವ ವೈದ್ಯಾಧಿಕಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು", ಎಂದು ಅವರು ಎಚ್ಚರಿಸಿದ್ದಾರೆ. ಈ ಕುರಿತು ಅವರು ಟ್ವೀಟ್ ಮಾಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ