ಬೆಂಗಳೂರು: ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಹಾಗೂ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕೋವಿಡ್-19 ನಿಂದ ಬೇಗ ಚೇತರಿಸಿಕೊಳ್ಳಲಿ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ಟ್ವೀಟ್ ಮೂಲಕ ಹಾರೈಸಿದ್ದಾರೆ.
ವಿಪಕ್ಷ ನಾಯಕರು, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಕೋವಿಡ್ ಪಾಸಿಟಿವ್ ಬಂದಿರುವುದು ತಿಳಿದು ಬಂದಿದೆ. ರಾಜ್ಯ ಕಂಡ ಆದರ್ಶ ರಾಜಕಾರಣಿ ಅವರು. ಅವರಿಗೆ ಪಾಸಿಟಿವ್ ಬಂದಿರುವುದು ನನಗೆ ನೋವಾಗಿದೆ. ಆದಷ್ಟು ಬೇಗನೆ ಅವರು ಚೇತರಿಸಿಕೊಂಡು ಗುಣಮುಖರಾಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಸುಧಾಕರ್, ಮಣಿಪಾಲ ಆಸ್ಪತ್ರೆಯ ವೈದ್ಯರೊಂದಿಗೆ ನಿರಂತರ ಸಂಪರ್ಕದಲ್ಲಿದ್ದೇನೆ. ಅವರ ಆರೋಗ್ಯದಲ್ಲಿ ಸ್ಥಿರವಾಗಿದೆ. ರಾಜ್ಯದ ಜನ ಆತಂಕ ಪಡುವ ಅಗತ್ಯವಿಲ್ಲ. ಸಿಎಂ ಬಿಎಸ್‌ವೈ ಮತ್ತು ಮಾಜಿ ಸಿಎಂ ಬೇಗ ಚೇತರಿಸಿಕೊಂಡು ಮತ್ತೆ ಎಂದಿನಂತೆ ಕರ್ತವ್ಯಕ್ಕೆ ಮರಳಲಿ ಎಂದು ಹಾರೈಸುತ್ತೇನೆ ಎಂದು ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.