ಕಮಲ್ ಪಂತ್ 
ರಾಜ್ಯ

ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಕ್ವಾರಂಟೈನ್

ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಕೊರೋನಾ ಸೋಂಕು ದೃಢಪಡುತ್ತಿದ್ದಂತೆಯೇ ನೂತನ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಅವರು ಕ್ವಾರಂಟೈನ್ ಒಳಗಾಗಿದ್ದಾರೆ. 

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಕೊರೋನಾ ಸೋಂಕು ದೃಢಪಡುತ್ತಿದ್ದಂತೆಯೇ ನೂತನ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಅವರು ಕ್ವಾರಂಟೈನ್ ಒಳಗಾಗಿದ್ದಾರೆ. 

ಶನಿವಾರವಷ್ಟೇ ಪೊಲೀಸ್ ಆಯುಕ್ತರಾಗಿ ಅಧಿಕಾರ ಸ್ವೀಕರಿಸಿದ ಕಮಲ್ ಪಂತ್ ಅವರು ಭಾನುವಾರದಿಂದಲೇ ಕ್ವಾರಂಟೈನ್'ಗೊಳಗಾಗಿದ್ದಾರೆ. 

ಆಯುಕ್ತರಾಗುವ ಮುನ್ನ ಕಮಲ್ ಪಂತ್ ರಾಜ್ಯ ಗುಪ್ತದಳದ ಎಡಿಜಿಪಿ ಆಗಿದ್ದರು. ಪ್ರತಿದಿನ ಬೆಳಿಗ್ಗೆ ಮುಖ್ಯಮಂತ್ರಿಯನ್ನು ಭೇಟಿಯಾಗಿ ರಾಜ್ಯದ ಸ್ಥಿತಿಗತಿ ಬಗ್ಗೆ ಮಾತಿ ನೀಡುವುದು ನಿಯಮ. ಅದರಂತೆ ನಿತ್ಯ ಕಮಲ್ ಪಂತ್ ಅವರು ಮುಖ್ಯಮಂತ್ರಿಗಳ ಸಂಪರ್ಕದಲ್ಲಿದ್ದರು. 

ಪೊಲೀಸರ್ ಆಯುಕ್ತರಾಗಿ ಅಧಿಕಾರ ಸ್ವೀಕರಿಸಿದ ಬಳಿಕವೂ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಭೇಟಿಯಾಗಿ ಕೃತಜ್ಞತೆ ಸಲ್ಲಿಸಿದ್ದರು. ಕಳೆದ 3 ದಿನಗಳಿಂದ ರಾಜ್ಯ ಗುಪ್ತದಳದ ಎಡಿಜಿಪಿಯಾಗಿ ಕರ್ತವ್ಯನಿರ್ವಹಿಸುತ್ತಿರುವ ಬಿ.ದಯಾನಂದ್ ಅವರೂ ಕೂಡ ಇದೀಗ ಕ್ವಾರಂಟೈನ್'ಗೊಳಗಾಗಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

IPL 2026: ಗುಜರಾತ್ ವಿರುದ್ಧ ಭರ್ಜರಿ ಗೆಲುವು; ಸತತ 2ನೇ ಬಾರಿ ಫೈನಲ್ಸ್ ಪ್ರವೇಶಿಸಿದ RCB

IPL 2026: 33 ಎಸೆತ, 9 ಸಿಕ್ಸರ್, ಒಂದೇ ಒಂದು ಡಾಟ್.. Rajat Patidar ಸ್ಫೋಟಕ ಬ್ಯಾಟಿಂಗ್ ಗೆ ಕೊಹ್ಲಿ ಸೇರಿ ಕ್ರೀಡಾಂಗಣವೇ ದಂಗು!

ಈ ವಾರವೇ ಸಿದ್ದರಾಮಯ್ಯ ರಾಜೀನಾಮೆ ಸಾಧ್ಯತೆ; ಆಪ್ತರ ಬಳಿ CM ಹೇಳಿದ್ದೇನು?: ಮೇ.27 ರಂದು ರಾಜ್ಯಕ್ಕೆ ಹೈಕಮಾಂಡ್ ನಾಯಕರು

IPL 2026 Qualifier 1: GT ವಿರುದ್ದ ಸ್ಫೋಟಕ ಬ್ಯಾಟಿಂಗ್, ಇತಿಹಾಸ ಬರೆದ RCB

IPL 2026 Qualifier 1: ಐಪಿಎಲ್ ಅಷ್ಟೇ ಅಲ್ಲ.. ಜಾಗತಿಕ ಟಿ20 ಕ್ರಿಕೆಟ್ ನಲ್ಲೂ RCB ಐತಿಹಾಸಿಕ ದಾಖಲೆ, ರೆಕಾರ್ಡ್ ಗಳ ಪಟ್ಟಿ!

SCROLL FOR NEXT