ರಾಜ್ಯದಲ್ಲಿ ಧಾರಾಕಾರ ಮಳೆ 
ರಾಜ್ಯ

ಭಾರೀ ಮಳೆ ಹಿನ್ನೆಲೆ: ಕ್ಷೇತ್ರದಲ್ಲಿದ್ದು ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಸಚಿವರಿಗೆ ಮುಖ್ಯಮಂತ್ರಿ ಸೂಚನೆ

ರಾಜ್ಯಾದ್ಯಂತ ಮಳೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸೂಕ್ತ ಮುಂಜಾಗ್ರತಾ ಕ್ರಮಗಳನ್ನು‌ ವಹಿಸುವಂತೆ ಮುಖ್ಯಮಂತ್ರಿ ಗಳು ಜಿಲ್ಲಾ ಉಸ್ತುವಾರಿ ಸಚಿವರಿಗೆ ಇಂದು ಸೂಚನೆ ನೀಡಿದ್ದಾರೆ. ಕ್ಷೇತ್ರ ಬಿಟ್ಟು ಹೋಗದಂತೆ ಸೂಚನೆ ನೀಡಿರುವ ಮುಖ್ಯಮಂತ್ರಿಗಳು.

ಬೆಂಗಳೂರು: ರಾಜ್ಯಾದ್ಯಂತ ಮಳೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಸೂಕ್ತ ಮುಂಜಾಗ್ರತಾ ಕ್ರಮಗಳನ್ನು‌ ವಹಿಸುವಂತೆ ಮುಖ್ಯಮಂತ್ರಿ ಗಳು ಜಿಲ್ಲಾ ಉಸ್ತುವಾರಿ ಸಚಿವರಿಗೆ ಇಂದು ಸೂಚನೆ ನೀಡಿದ್ದಾರೆ. ಕ್ಷೇತ್ರ ಬಿಟ್ಟು ಹೋಗದಂತೆ ಸೂಚನೆ ನೀಡಿರುವ ಮುಖ್ಯಮಂತ್ರಿಗಳು. ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡುವುದು ಸ್ಥಳದಲ್ಲಿಯೇ ಪರಿಹಾರ ವಿತರಣೆ ಸೇರಿದಂತೆ ಇತರೆ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಿದ್ದಾರೆ.

ಈಗಾಗಲೇ 50 ಕೋಟಿ ಹಣ ಬಿಡುಗಡೆ ಮಾಡಿದ್ದು ಅಗತ್ಯ ಇದ್ದರೆ ಇನ್ನಷ್ಟು ಹಣ ಬಿಡುಗಡೆ ಮಾಡುವುದಾಗಿ ಹೇಳಿದ ಮುಖ್ಯಮಂತ್ರಿಗಳು ಅತಿ ತುರ್ತು ಕೆಲಸಗಳಿಗೆ ನೀವೇ ತೀರ್ಮಾನ ತೆಗೆದುಕೊಂಡು ಮುಂದುವರೆಯಬೇಕು ಎಂದು ಸಚಿವರಿಗೆ ಸೂಚನೆ ನೀಡಿದ್ದಾರೆ.

ರಾಜ್ಯದ ಪ್ರವಾಹ ಪರಿಸ್ಥಿತಿ ಎದುರಿಸಲು ಅಗತ್ಯ ಕ್ರಮ; ಜಿಲ್ಲಾಧಿಕಾರಿಗಳೊಂದಿಗೆ ನಿರಂತರ ಸಂಪರ್ಕ: ಸಚಿವ ಆರ್.ಅಶೋಕ್

ರಾಜ್ಯದಲ್ಲಿ ಕಳೆದ ವಾರದಿಂದ ಉಂಟಾಗಿರುವ ಪ್ರವಾಹ ಪರಿಸ್ಥಿತಿಯನ್ನು ನಿಭಾಯಿಸಲು ಕೈಗೊಂಡಿರುವ ಕ್ರಮಗಳ ಬಗ್ಗೆ 19 ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಲಾಗಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ.

ಕಳೆದ ಸಾಲಿನಲ್ಲಿ ಸಹ ಇದೇ ತಿಂಗಳಿನಲ್ಲಿ ಇಂತಹ ಪರಿಸ್ಥಿತಿ ಉಂಟಾಗಿತ್ತು, ಪ್ರಸ್ತುತ ಪರಿಸ್ಥಿತಿ ಕುರಿತು ಮುಂದಾಗಬಹುದಾದ ಪ್ರವಾಹ ಪರಿಸ್ಥಿತಿ ಎದುರಿಸಲು ಕಳೆದ ಏಪ್ರಿಲ್‍ನಿಂದ ವಿವಿಧ ಪೂರ್ವಭಾವಿ ಸಿದ್ಧತೆ ಸಭೆಗಳನ್ನು ಹಮ್ಮಿಕೊಳ್ಳಲಾಗಿತ್ತು, ರಾಜ್ಯದ ಮಳೆ ಪರಿಸ್ಥಿತಿ, ಮಳೆ ಮುನ್ಸೂಚನೆ ಮತ್ತು ಜಲಾಶಯಗಳ ನೀರಿನ ಮಟ್ಟದ ಬಗ್ಗೆ ಸಂಬಂಧಿಸಿದ ಅಧಿಕಾರಿಗಳೊಂದಿಗೆ ನಿರಂತರವಾಗಿ ಚರ್ಚಿಸಲಾಗುತ್ತಿದೆ.

ರಾಜ್ಯದ ಮಲೆನಾಡು ಮತ್ತು ಕರಾವಳಿ ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಕೊಡಗು, ಶಿವಮೊಗ್ಗ, ಚಿಕ್ಕಮಗಳೂರು ಹಾಗೂ ಹಾಸನ ಜಿಲ್ಲೆಗಳ ಜಿಲ್ಲಾದಿಕಾರಿಗಳಿಗೆ ಇಂದಿನಿಂದ ರೆಡ್ ಅಲರ್ಟ್ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.

ಕಾವೇರಿ ತೀರದಲ್ಲಿ ಹೆಚ್ಚಿನ ಮಳೆ ಬೀಳುವ ಸಾಧ್ಯತೆ ಇದ್ದು, ಜಲಾಶಯಗಳ ಒಳಹರಿವು ಹೆಚ್ಚಲಿದೆ. ಇಂದು ಮಧ್ಯಾಹ್ನದಿಂದ ತಾವು 11 ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ದೂರವಾಣಿ ಮೂಲಕ ಮಾತನಾಡಿ ಪರಿಸ್ಥಿತಿ ಮಾಹಿತಿ ಪಡೆದು ಮುನ್ನೆಚ್ಚೆರಿಕೆ ವಹಿಸಲು ಸೂಚನೆ ನೀಡಲಾಗಿದೆ.

ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ, ಮೂಡಿಗೆರೆ ಭಾಗದಲ್ಲಿ ಕೆಲವು ಮನೆಗಳು ಹಾಳಾಗಿದ್ದು, ಕೂಡಲೇ ರೂ.10,000 ಪರಿಹಾರ ಪಾವತಿಸಲು ಸೂಚಿಸಿದ್ದೇನೆ. ಉಡುಪಿ ಜಿಲ್ಲೆಯ ಬೈಂದೂರು ಭಾಗದಲ್ಲಿ 150 ಮಿ.ಮೀ ವರೆಗೆ ಮಳೆ, ಮರಗಳು ಉರುಳಿದ್ದು ತೆರವುಗಳಿಸಲಾಗುತ್ತಿದೆ. ಉತ್ತರ ಕನ್ನಡ ಜಿಲ್ಲೆಯಲ್ಲಿ ಹಲವು ಮರಗಳು ಉರುಳಿದ್ದು, ಶಿವಮೊಗ್ಗದ ಕೆಲವು
ಭಾಗದಲ್ಲಿ ಹೆಚ್ಚುಮಳೆಯಾಗಿದೆ. ಹಾಸನದಲ್ಲಿ ಯಾವುದೇ ಹಾನಿ ವರದಿಯಾಗಿಲ್ಲ. ಉಳಿದ ಜಿಲ್ಲೆಗಳಲ್ಲಿ ಮರಗಳು ಉರುಳಿದ್ದು ಯಾವುದೇ ಹಾನಿಯಾದ ಬಗ್ಗೆ ವರದಿಯಾಗಿಲ್ಲ ಎಂದು ಅಶೋಕ ತಿಳಿಸಿದರು.

ಜುಲೈ 25 ರಂದು ನಡೆದ ವಿಡಿಯೋ ಕಾನ್ಫರೆನ್ಸ್ ಸಭೆಯಲ್ಲಿ ತುರ್ತು ಪರಿಸ್ಥಿತಿಯನ್ನು ಎದುರಿಸಲು ಅಗತ್ಯವಿರುವ ಯಂತ್ರೋಪಕರಣಗಳನ್ನು ಖರೀಧಿಸಲು ಸಹ ಅನುಮತಿ ನೀಡಲಾಗಿದೆ. ಗ್ರಾಮಾಪಂಚಾಯತಿ ಮಟ್ಟದ ಯೋಜನೆ ರೂಪಿಸಲಾಗಿದೆ. ಎಲ್ಲಾ ಜಿಲ್ಲೆಗಳಲ್ಲಿ ಅಗತ್ಯ ಅನುದಾನ ಬಿಡುಗಡೆ ಮಾಡಲಾಗಿದೆ.

ಮುಂದಿನ ಮೂರು ದಿನಗಳ ಮಳೆ ಮುನ್ಸೂಚನೆ:
1. ಕರಾವಳಿ ಭಾಗ: ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಹಲವು ಪ್ರದೇಶಗಳಲ್ಲಿ ಬಾರಿ ಮಳೆಯಾಗುವುದು ಮುನ್ಸೂಚನೆ ಇದೆ.
2. ಮಲೆನಾಡು ಭಾಗ: ಶಿವಮೊಗ್ಗ, ಕೊಡಗು, ಹಾಸನ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಹೆಚ್ಚಿನ ಮಳೆ
3. ಉತ್ತರ ಒಳನಾಡು: ಬೆಳಗಾವಿ, ಧಾರವಾಡ, ಹಾವೇರಿ, ಬೀದರ್ ಹಾಗೂ ಕಲಬುರಗಿಯಲ್ಲಿ ಮಧ್ಯಮ ಮಳೆ
4. ದಕ್ಷಿಣ ಒಳನಾಡು: ದಾವಣಗೆರೆ, ಮೈಸೂರು, ಚಾಮರಾಜನಗರ ಮತ್ತು ಇತರೆ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ರಾಜ್ಯದ ಜಲಾಶಯಗಳು ಹಾಗೂ ಮಳೆಹಾನಿ ಕುರಿತು ವಿವಿಧ ತಂಡಗಳನ್ನು ರಚಿಸಲಾಗಿದ್ದು, ಅಂತರ ರಾಜ್ಯ ತಂಡವು ಮಹಾರಾಷ್ಟ್ರ ಜಲಾಶಯಗಳ ಹೊರಹರಿವಿನ ಬಗ್ಗೆ ಅಧ್ಯಯನ ನಡೆಸಲಿವೆ. ಎನ್‍ಡಿಆರ್‍ಎಫ್ ತಂಡವು ಕೊಡಗು, ಧಾರವಾಡ, ಬೆಳಗಾವಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಬೇಟಿ ನೀಡುವುದು. ಎಸ್‍ಡಿಆರ್‍ಎಫ್ ತಂಡವು ಸಹ ಸಕ್ರಿಯವಾಗಿ ತೊಡಗಿಸಿಕೊಂಡಿದೆ ಎಂದು ಸಚಿವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
 

Related Article

ರಾಜ್ಯದಾದ್ಯಂತ ಭಾರೀ ಮಳೆ: ಹಿರಿಯ ಸಹೋದ್ಯೋಗಿಗಳಿಗೆ ಜವಾಬ್ದಾರಿ ಹಂಚಿ- ಸಿಎಂಗೆ ಸಿದ್ದರಾಮಯ್ಯ ಸಲಹೆ

ರಾಜ್ಯಾದ್ಯಂತ ಭಾರೀ ಮಳೆ: ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ನದಿಗಳು

ರಾಜ್ಯಾದ್ಯಂತ ಮಳೆ ಹಿನ್ನೆಲೆ: ಜ್ವರ, ನೆಗಡಿಯಂತಹ ರೋಗ ಲಕ್ಷಣ ಕಾಣಿಸಿಕೊಂಡರೆ 104ಕ್ಕೆ ಕರೆ ಮಾಡಿ- ಡಾ. ಕೆ.ಸುಧಾಕರ್

ಕೊಡಗು: ಭಾರೀ ಮಳೆಗೆ ಭೂಕುಸಿತ; ತಲಕಾವೇರಿ ಕ್ಷೇತ್ರದ ಪ್ರಧಾನ ಅರ್ಕಚರ ಕುಟುಂಬ ಸೇರಿ ಐವರು ಮಣ್ಣಿನಡಿ ಸಿಲುಕಿರುವ ಶಂಕೆ

ರಾಜ್ಯಾದ್ಯಂತ ಭಾರೀಮಳೆ: ಕಾಸಲ್ ರಾಕ್ ಬಳಿ ಭೂ ಕುಸಿತ, ರೈಲು ಸಂಚಾರದಲ್ಲಿ ವ್ಯತ್ಯಯ

ಕರಾವಳಿ, ಮಲೆನಾಡಿನಲ್ಲಿ ಭರ್ಜರಿ ಮಳೆ: ಪ್ರವಾಹ ಪರಿಸ್ಥಿತಿ, ಮತ್ತಷ್ಟು ಮಳೆಯಾಗುವ ಸಾಧ್ಯತೆ, ಹಲವೆಡೆ ರೆಡ್ ಅಲರ್ಟ್ ಘೋಷಣೆ

ಕೊಡಗು ಜಿಲ್ಲೆಯಲ್ಲಿ ತೀವ್ರ ಮಳೆ: ಮತ್ತೆ ಪ್ರವಾಹ ಭೀತಿ, ಅಪಾಯ ಮಟ್ಟ ಮೀರಿ ಹರಿಯುತ್ತಿದೆ ಕಾವೇರಿ ನದಿ

ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಭಾರೀ ಮಳೆ: ಉಕ್ಕಿ ಹರಿಯುತ್ತಿರುವ ನದಿಗಳು, ಹಲವೆಡೆ ಪ್ರವಾಹ ಭೀತಿ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

2nd test, Day 2: 518 ರನ್ ಗಳಿಗೆ ಭಾರತ ಇನ್ನಿಂಗ್ಸ್ ಡಿಕ್ಲೇರ್!

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

2nd test, Day 2: 2ನೇ ದಿನದಾಟದ ಆರಂಭದಲ್ಲೇ ಭಾರತಕ್ಕೆ ಆಘಾತ, ಭೋಜನ ವಿರಾಮದ ವೇಳೆಗೆ 427/4

SCROLL FOR NEXT