ಪ್ರವಾಹದಲ್ಲಿ ಸಿಲುಕಿದ್ದ ರೈತ 
ರಾಜ್ಯ

ಬೆಳಗಾವಿ: ಪಂಡರಿ ನದಿ ಪ್ರವಾಹದಲ್ಲಿ ಸಿಲುಕಿದ್ದ ರೈತನ ರಕ್ಷಣೆ

ಮನೆಗೆ ವಾಪಾಸಾಗುವ ವೇಳೆ ಪಂಢರಿ ನದಿ ಪ್ರವಾಹದಲ್ಲಿ ಸಿಲುಕಿದ್ದ 60 ವರ್ಷದ ರೈತನನ್ನು ಪೊಲೀಸರು ನುರಿತ ಈಜುಗಾರರ ಸಹಾಯದಿಂದ ರಕ್ಷಿಸಿದ್ದಾರೆ.

ಬೆಳಗಾವಿ: ಮನೆಗೆ ವಾಪಾಸಾಗುವ ವೇಳೆ ಪಂಢರಿ ನದಿ ಪ್ರವಾಹದಲ್ಲಿ ಸಿಲುಕಿದ್ದ 60 ವರ್ಷದ ರೈತನನ್ನು ಪೊಲೀಸರು ನುರಿತ ಈಜುಗಾರರ ಸಹಾಯದಿಂದ ರಕ್ಷಿಸಿದ್ದಾರೆ.

ಖಾನಾಪುರ ತಾಲೂಕಿನ ಕಾಪೋಳಿ ಗ್ರಾಮದ ವಿಲಾಸ್ ದತ್ತಾತ್ರೇಯ ದೇಸಾಯಿ ಪ್ರವಾಹದಲ್ಲಿ ಸಿಲುಕಿದ್ದ ರೈತ. ತಮ್ಮ ಹೊಲದಿಂದ ವಾಪಾಸಾಗುತ್ತಿದ್ದ ವೇಳೆ ಸಿಂದೋಳಿ ಸಮೀಪ  ಪಂಡರಿ ನದಿ ಪ್ರವಾಹದಲ್ಲಿ ಸಿಲುಕಿದ್ದ, ಇದ್ದಕ್ಕಿದ್ದಂತೆ ನದಿ ನೀರಿನ ಮಟ್ಟದಲ್ಲಿ ಏರಿಕೆಯಾಗಿತ್ತು.

ನದಿ ದಾಟುತ್ತಿದ್ದ ವೇಳೆ ನದಿಯ ಭಾರೀ ನೀರಿನಿಂದಾಗಿ ಆತ ಕೊಚ್ಚಿಹೋಗುತ್ತಿದ್ದ. ಅದೃಷ್ಟವಶಾತ್ ಆತ ಮರದ ಕೊಂಬೆಯೊಂದನ್ನು ಹಿಡಿದುಕೊಂಡು ನಂತರ ಮರವೇರಿ ತನ್ನನ್ನು ರಕ್ಷಿಸುವಂತೆ ಕೂಗಿಕೊಂಡಿದ್ದ. 

ಆತನನ್ನು ನೋಡಿದ ದಾರಿ ಹೋಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ನಂತರ ಪೊಲೀಸರು ಮತ್ತು ತಹಶೀಲ್ದಾರ್ ಸ್ಥಳಕ್ಕೆ ಆಗಮಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿ ಆತನನ್ನು ರಕ್ಷಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ನನ್ನ ವಿರುದ್ಧ 100 ಎಫ್‌ಐಆರ್‌ ದಾಖಲಿಸಿ ಹೆದರಲ್ಲ, ಪ್ರತಿಯೊಂದೂ ನನಗೆ ಪದಕ': ರಾಹುಲ್ ಗಾಂಧಿ

CM ಆಗಲು ಸಿದ್ದರಾಮಯ್ಯ ವಿರುದ್ಧ ಡಿಕೆಶಿ ಸ್ಟಿಂಗ್ ಆಪರೇಷನ್; ಈಗ ಸಚಿವರ ವಿರುದ್ಧವೂ ಅದೇ ತಂತ್ರ: ಕುಮಾರಸ್ವಾಮಿ ಗಂಭೀರ ಆರೋಪ

ಕಾರ್ಮಿಕರ ಆರೋಗ್ಯ ತಪಾಸಣೆ ಹೆಸರಲ್ಲಿ 800 ಕೋಟಿ ರೂ. ಲೂಟಿ; ಸಂತೋಷ್ ಲಾಡ್ ರಾಜೀನಾಮೆಗೆ ಆರಗ ಜ್ಞಾನೇಂದ್ರ ಆಗ್ರಹ

ವಿಜಯೇಂದ್ರ ಮಾತನ್ನು ನಂಬುತ್ತೇನೆ, ಆದ್ರೆ...: BJPಗೆ ಘರ್ ವಾಪ್ಸಿ ಬಗ್ಗೆ ಈಶ್ವರಪ್ಪ ಶಾಕಿಂಗ್ ಹೇಳಿಕೆ

ಹೆನ್ರಿ ಕಗನ್, ಕೆನ್ಸೊ ಸೊವೈಗೆ 2026ರ ರಸಾಯನಶಾಸ್ತ್ರದ ನೊಬೆಲ್ ಪ್ರಶಸ್ತಿ