ಸುಷ್ಮಾ ಸ್ವರಾಜ್ 
ರಾಜ್ಯ

ದಿವಂಗತ ಸುಷ್ಮಾ ಸ್ವರಾಜ್ ಪುಣ್ಯಸ್ಮರಣೆ: ಮುಖ್ಯಮಂತ್ರಿ, ಶ್ರೀರಾಮುಲು ಗೌರವ ನಮನ

ಕೇಂದ್ರದ ಮಾಜಿ ಸಚಿವೆ ದಿವಂಗತ ಸುಷ್ಮಾ ಸ್ವರಾಜ್ ಅವರ ಪುಣ್ಯ ಸ್ಮರಣೆಯ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸೇರಿ ಹಲವು ಗಣ್ಯರು ಸುಷ್ಮಾ ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ.

ಬೆಂಗಳೂರು: ಕೇಂದ್ರದ ಮಾಜಿ ಸಚಿವೆ ದಿವಂಗತ ಸುಷ್ಮಾ ಸ್ವರಾಜ್ ಅವರ ಪುಣ್ಯ ಸ್ಮರಣೆಯ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸೇರಿ ಹಲವು ಗಣ್ಯರು ಸುಷ್ಮಾ ಅವರಿಗೆ ಗೌರವ ನಮನ ಸಲ್ಲಿಸಿದ್ದಾರೆ.

ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಟ್ವೀಟ್ ಮಾಡಿ, ಭಾರತೀಯ ನಾರಿ ಶಕ್ತಿಯ ಪ್ರತೀಕದಂತಿದ್ದ, ಹಿರಿಯ ನಾಯಕಿ, ಮಾಜಿ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರ ಪುಣ್ಯ ತಿಥಿಯಂದು ಅವರನ್ನು ಸ್ಮರಿಸೋಣ. ಸವಾಲುಗಳಿಗೆ ಎಂದೂ ಅಂಜದೆ, ರಾಜಕೀಯ ವಿರೋಧಿಗಳ ವಿರುದ್ಧ ಅವರು ತಮ್ಮ ಬಲವಾದ ಅಭಿಪ್ರಾಯವನ್ನು ವ್ಯಕ್ತಪಡಿಸುತ್ತಿದ್ದರು. ವಿದೇಶಾಂಗ ಸಚಿವೆಯಾಗಿ ಅವರ ಕಾರ್ಯಗಳು ಆದರ್ಶಪ್ರಾಯವಾದದ್ದು ಎಂದು ಗೌರವ ಸಲ್ಲಿಸಿದ್ದಾರೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಖಾತೆ ಸಚಿವ ಬಿ.ಶ್ರೀರಾಮುಲು, ವಿವಿಧ ಉನ್ನತ ಹುದ್ದೆಗಳನ್ನು ಯಶಸ್ವಿಯಾಗಿ ನಿರ್ವಹಿಸುವ ಮೂಲಕ ಸಾರ್ವಜನಿಕ ಜೀವನದಲ್ಲಿ ತಮ್ಮದೇ ಚಾಪು ಮೂಡಿಸಿದ್ದ, ಮಾರ್ಗದರ್ಶಕರೂ ಆಗಿದ್ದ ಸುಷ್ಮಾ ಸ್ವರಾಜ್ ಅವರ ಪುಣ್ಯ ಸ್ಮರಣೆಯ ಸಂದರ್ಭದಲ್ಲಿ ಅವರಿಗೆ ಹೃದಯಪೂರ್ವಕ ನಮನಗಳನ್ನು ಸಲ್ಲಿಸೋಣ ಎಂದು ಟ್ವೀಟ್ ಮಾಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಬ್ರೇಕ್ ಫಾಸ್ಟ್ ಮೀಟಿಂಗ್: ಮುಂದಿನ CM ಡಿಕೆ.ಶಿವಕುಮಾರ್; ಸಚಿವರಿಗೆ ಸಿದ್ದರಾಮಯ್ಯ ಮಾಹಿತಿ, ಮಧ್ಯಾಹ್ನ 2.30ಕ್ಕೆ ರಾಜೀನಾಮೆ

ಮೋದಿಯವರ ಇತ್ತೀಚಿನ ಫಾರಿನ್ ಟ್ರಿಪ್ಪಿನಿಂದ ಭಾರತಕ್ಕೇನು ಲಾಭ? (ಹಣಕ್ಲಾಸು)

ಕಾಂಗ್ರೆಸ್‌ ಪವರ್ ಪಾಲಿಟಿಕ್ಸ್‌ಗೆ ಮತ್ತೊಂದು ಟ್ವಿಸ್ಟ್: ರಾಜ್ಯಪಾಲರ ಭೇಟಿಗೆ ಸಿದ್ದರಾಮಯ್ಯ ಸಮಯ ಕೇಳಿಲ್ಲ; ರಾಜೀನಾಮೆ ಊಹಾಪೋಹಕ್ಕೆ ಲೋಕಭವನ ಸ್ಪಷ್ಟನೆ..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

SCROLL FOR NEXT