ರಾಜ್ಯ

ಭಾರೀ ಭೂಕುಸಿತ: ಚಾರ್ಮಾಡಿ ಘಾಟ್ ರಸ್ತೆ ಸಂಚಾರ ಎರಡು ಬಂದ್!

Vishwanath S

ಮಂಗಳೂರು: ಭಾರೀ ಭೂಕುಸಿತ, ರಸ್ತೆ ಬಿರುಕು ಮತ್ತು ಭಾರೀ ಮಳೆಯಿಂದಾಗಿ ಮರಗಳು ಧರೆಗುಳಿದಿದ್ದರಿಂದ ಚಾರ್ಮಾಡಿ ಘಾಟ್‌ನಲ್ಲಿ(ಎನ್‌ಎಚ್ -73) ವಾಹನಗಳ ಸಂಚಾರವನ್ನು ಎರಡು ದಿನಗಳ ಕಾಲ ನಿಷೇಧಿಸಲಾಗಿದೆ.

ಮಂಗಳೂರು-ವಿಲ್ಲುಪುರಂ ರಾಷ್ಟ್ರೀಯ ಹೆದ್ದಾರಿ 73 ರಲ್ಲಿ ಚಾರ್ಮಡಿ ಘಾಟ್ ರಸ್ತೆಯಲ್ಲಿ ಬಿರುಕುಗಳು ಕಾಣಿಸಿಕೊಂಡಿವೆ. ಮುನ್ನೆಚ್ಚರಿಕೆ ಕ್ರಮವಾಗಿ ಅಧಿಕಾರಿಗಳು ಚಾರ್ಮಡಿ ಮತ್ತು ಕೊಟ್ಟಿಗೆಹಾರ ಚೆಕ್ ಪೋಸ್ಟ್‌ಗಳನ್ನು ಮುಚ್ಚಲಾಗಿದೆ. 

ಬೆಳ್ತಂಗಡಿ ತಹಶೀಲ್ದಾರ್ ಮಹೇಶ್ ಜೆ ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ ಜೊತೆ ಮಾತನಾಡಿ ದಕ್ಷಿಣ ಕನ್ನಡ ಜಿಲ್ಲೆ ಮತ್ತು ಚಿಕ್ಕಮಗಳೂರು ಸಂಪರ್ಕಿಸುವ ಚಾರ್ಮಡಿ ಘಾಟ್ ರಸ್ತೆಯಲ್ಲಿ ಅನೇಕ ಭೂಕುಸಿತ ಸಂಭವಿಸಿದೆ ಎಂದು ದೃಢಪಡಿಸಿದರು.

"ಭೂಕುಸಿತದ ಅವಶೇಷಗಳನ್ನು ತೆರವುಗೊಳಿಸಲು ಅಧಿಕಾರಿಗಳು ಸ್ಥಳದಲ್ಲಿ ಮೊಕ್ಕಂ ಹೂಡಿದ್ದು ವಾಹನ ಸಂಚಾರಕ್ಕಾಗಿ ರಸ್ತೆಯನ್ನು ಮುಚ್ಚಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ, ಮತ್ತಷ್ಟು ಭೂಕುಸಿತ ಸಂಭವಿಸುವ ಸಾಧ್ಯತೆ ಇರುವುದರಿಂದ ವಾಹನ ಸಂಚಾರವನ್ನು ಎರಡು ದಿನಗಳ ಕಾಲ ನಿಷೇಧಿಸಲಾಗಿದೆ ಎಂದು ಅವರು ಹೇಳಿದರು.

SCROLL FOR NEXT