ಎಚ್‌ಡಿ ದೇವೇಗೌಡ 
ರಾಜ್ಯ

ರಾಜ್ಯದಲ್ಲಿ ಅತಿವೃಷ್ಟಿ: ವಿಶೇಷ ಆರ್ಥಿಕ ಪ್ಯಾಕೇಜ್ ಪ್ರಕಟಿಸುವಂತೆ ಕೇಂದ್ರಕ್ಕೆ ಎಚ್‌.ಡಿ.ದೇವೇಗೌಡ ಒತ್ತಾಯa

 ಅತಿವೃಷ್ಟಿಯಿಂದ ನಲುಗಿರುವ ರಾಜ್ಯದ ಜನತೆಯನ್ನು ಮತ್ತು ಜಾನುವಾರುಗಳನ್ನು ರಕ್ಷಿಸುವ ಕೆಲಸ ತಕ್ಷಣ ಆಗಬೇಕಾಗಿದೆ. ಸರ್ಕಾರ ಕೈಗೊಳ್ಳುವ ಪರಿಹಾರ ಕಾರ್ಯಕ್ಕೆ ನಾವೆಲ್ಲ ಜೊತೆ ನಿಲ್ಲುತ್ತೇವೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹೇಳಿದ್ದಾರೆ.

ಬೆಂಗಳೂರು: ಅತಿವೃಷ್ಟಿಯಿಂದ ನಲುಗಿರುವ ರಾಜ್ಯದ ಜನತೆಯನ್ನು ಮತ್ತು ಜಾನುವಾರುಗಳನ್ನು ರಕ್ಷಿಸುವ ಕೆಲಸ ತಕ್ಷಣ ಆಗಬೇಕಾಗಿದೆ. ಸರ್ಕಾರ ಕೈಗೊಳ್ಳುವ ಪರಿಹಾರ ಕಾರ್ಯಕ್ಕೆ ನಾವೆಲ್ಲ ಜೊತೆ ನಿಲ್ಲುತ್ತೇವೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹೇಳಿದ್ದಾರೆ.

ಈ ಬಗ್ಗೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವ ಅವರು, ರಾಜ್ಯದಲ್ಲಿ ಮಹಾಮಾರಿ ಕೊರೋನಾ ಒಂದು ಕಡೆ ವ್ಯಾಪಕವಾಗಿ ಹರಡುತ್ತಿದೆ. ಇದರ ಜೊತೆಗೆ ದುರದೃಷ್ಟವಷಾತ್ ರಾಜ್ಯದಲ್ಲಿ ಅತಿವೃಷ್ಟಿಯಿಂದ ಜನತೆ ಕಂಗಾಲು ಪಡುವಂತಾಗಿದೆ. ಇದೆ ಸಮಯದಲ್ಲಿ ಮುಖ್ಯಮಂತ್ರಿಗಳಿಗೆ ಕೊರೋನಾ ಸೋಂಕು ತಗುಲಿದೆ, ಅವರು ಆಸ್ಪತ್ರೆಯಿಂದಲೇ ಕಾರ್ಯ ನಿರ್ವಹಿಸಬೇಕಾದ ಸಂದರ್ಭ ಬಂದಿದೆ. ಬಹುತೇಕ ರಾಜ್ಯದ ಎಲ್ಲಾ ಜಿಲ್ಲೆಗಳು ಮುಂಗಾರಿನ ಅಬ್ಬರದ ಭೀತಿಯಿಂದ ನಲುಗಿದೆ. ಆದ್ದರಿಂದ ಮುಖ್ಯಮಂತ್ರಿ ಮತ್ತು ಸಚಿವರು ವಿಶೇಷ ಕಾರ್ಯಪಡೆ ರಚಿಸಿ ನೆರೆ ಪರಿಸ್ಥಿತಿಯನ್ನು ನಿಭಾಯಿಸಬೇಕು ಎಂದು ಅವರು ಸಲಹೆ ನೀಡಿದ್ದಾರೆ.

ಅತಿವೃಷ್ಟಿಯಿಂದ ಬಳಲುತ್ತಿರುವ ರಾಜ್ಯದ ಜನತೆಗೆ ಕೂಡಲೇ ಆಸರೆ ಕೇಂದ್ರಗಳನ್ನು ಸ್ಥಾಪಿಸಬೇಕಾಗಿದೆ. ಬಹುತೇಕ ರಾಜ್ಯದೆಲ್ಲೆಡೆ ಬೆಳೆಗಳು ಹಾನಿಗೊಳಗಾಗಿದೆ. ಜೊತೆಗೆ ಮನೆ-ಮಠ ಕಳೆದುಕೊಂಡವರಿಗೆ ತಡಮಾಡದೆ ಸರ್ಕಾರ ಕೂಡಲೇ ಪರಿಹಾರ ಒದಗಿಸುವ ಕೆಲಸ ಮಾಡಬೇಕಾಗಿದೆ ಎಂದು ದೇವೇಗೌಡ ಹೇಳಿದ್ದಾರೆ.

ಸತತ ನೆರೆಯಿಂದ ಸಂತ್ರಸ್ತರಾಗಿರುವ ರಾಜ್ಯದ ಜನತೆಗೆ ಕೇಂದ್ರ ಸರ್ಕಾರವು ನಮ್ಮ ರಾಜ್ಯಕ್ಕೆ ವಿಶೇಷ ಅರ್ಥಿಕ ನೆರವು ನೀಡಬೇಕು. ಈ ಸಂಬಂಧ ರಾಜ್ಯ ಸರ್ಕಾರವು ಕೂಡ ಕೇಂದ್ರ ಸರ್ಕಾರದ ಮೇಲೆ ಒತ್ತಡ ಏರಬೇಕೆಂದು ಅವರು ಒತ್ತಾಯಿಸಿದ್ದಾರೆ.

ಅತಿವೃಷ್ಟಿ ಯಿಂದ ಹಾನಿಗೊಳಗಾಗಿರುವ ಸ್ಥಳಗಳಲ್ಲಿ ಪರಿಹಾರ ಕಾಮಗಾರಿಗಳಿಗೆ ತಕ್ಷಣ ಹಣಕಾಸಿನ ವ್ಯವಸ್ಥೆಯನ್ನು ಮಾಡಬೇಕೆಂದು ಅವರು ಪತ್ರಿಕಾ ಹೇಳಿಕೆಯಲ್ಲಿ ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Strait of Hormuz: 'ಅಡ್ಡ ಬರುವ Iran ಸಣ್ಣ ಬೋಟ್ ಗಳ ಗುಂಡಿಟ್ಟು ಉಡಾಯಿಸಿ': ಅಮೆರಿಕ ಸೇನೆಗೆ Donald Trump ಆದೇಶ!

ಸ್ವಾತಂತ್ರ್ಯದ ನಂತರ ತಮಿಳುನಾಡು, ಪ.ಬಂಗಾಳದಲ್ಲಿ ದಾಖಲೆ ಪ್ರಮಾಣದ ಮತದಾನ, ಮತದಾರರಿಗೆ ಧನ್ಯವಾದ ಹೇಳಿದ ಚುನಾವಣಾ ಆಯೋಗ!

Hassan: 'ಬಡ್ಡಿ ಸಮೇತ ತೀರಿಸೋವರ್ಗೂ ರಾಜಕೀಯದಲ್ಲಿ ಇರ್ತೀನಿ': ಎಚ್ ಡಿಕೆ ಮುಂದೆಯೇ HD Revanna ಕಣ್ಣೀರಿನ ಶಪಥ

IPL 2026: ಮತ್ತೆ ಮುಗ್ಗರಿಸಿದ MI, 103 ರನ್ ಅಂತರದಲ್ಲಿ CSKಗೆ ಜಯ!

IPL 2026: MI ವಿರುದ್ಧ ಸ್ಫೋಟಕ ಬ್ಯಾಟಿಂಗ್, ಶತಕದ ಮೂಲಕ ಐತಿಹಾಸ ನಿರ್ಮಿಸಿದ Sanju Samson, ಎಲೈಟ್ ಗ್ರೂಪ್ ಸೇರ್ಪಡೆ

SCROLL FOR NEXT